ಕಾರ್ಗಿಲ್ ಯುದ್ಧದಲ್ಲಿ ಭಾಗಿಯಾದ ಯೋಧಗೆ ಹೃದಯಸ್ಪರ್ಶಿ ಸ್ಪಾಗತ
ಬಿಎಸ್ಸೆಫ್ ನಲ್ಲಿ 29 ವರ್ಷಸುದೀರ್ಘ ಸೇವೆ
Team Udayavani, Nov 7, 2021, 8:46 PM IST
ಧಾರವಾಡ: ಬಿಎಸ್‌ಎಫ್ ಯೋಧರಾಗಿ ಸುದೀರ್ಘ 29 ವರ್ಷಗಳ ಕಾಲ ದೇಶ ಸೇವೆಗೈದು ಇದೀಗ ನಿವೃತ್ತಿ ಹೊಂದಿ ಸ್ವಗ್ರಾಮವಾದ ಉಪ್ಪಿನಬೆಟಗೇರಿ ಗ್ರಾಮಕ್ಕೆ ಆಗಮಿಸಿದ ಅಶೋಕ ಬಸಪ್ಪ ವಿಜಾಪುರ ಅವರಿಗೆ ಗ್ರಾಮಸ್ಥರಿಂದ ಹೃದಯಸ್ಪರ್ಶಿ ಸ್ವಾಗತ ಕೋರಲಾಯಿತು.
ದೀಪಾವಳಿ ಬಲಿಪಾಡ್ಯ ದಿನವಾದ ಶುಕ್ರವಾರ ದಿನವೇ ತಮ್ಮ ಇಬ್ಬರು ಮಕ್ಕಳೊಂದಿಗೆ ಸಮವಸ್ತ್ರದಲ್ಲಿ ಪತ್ನಿಯೊಂದಿಗೆ ಸ್ವಗ್ರಾಮಕ್ಕೆ ಆಗಮಿಸಿದ ಅಶೋಕ ಅವರಿಗೆ ಹೂಮಾಲೆ ಹಾಕಿ, ಆರತಿ ಬೆಳಗಿ, ಹಣೆಗೆ ತಿಲಕವಿಟ್ಟು, ಮೆರವಣಿಗೆ ಮೂಲಕ ಬರಮಾಡಿಕೊಳ್ಳಲಾಯಿತು.
1993ರಲ್ಲಿ ಗಡಿ ಭದ್ರತಾ ಪಡೆ ಸೇರಿದ ಯೋಧ ಅಶೋಕ ವಿಜಾಪುರ ಕಾರ್ಗಿಲ್ ಯುದ್ಧದಲ್ಲಿ ಪಾಲ್ಗೊಂಡಿದ್ದರು. ಇದಲ್ಲದೇ ಸೇವಾವ ಧಿಯಲ್ಲಿ ಜಮ್ಮು-ಕಾಶ್ಮೀರ ಹಾಗೂ ಪಂಜಾಬ ರಾಜ್ಯಗಳಲ್ಲಿ, ನಕ್ಸಲರ ಹಾವಳಿಯಿರುವ ಛತ್ತಿಸಗಡದಲ್ಲಿ, ಬಾಂಗ್ಲಾ ದೇಶದ ಗಡಿಗೆ ಹೊಂದಿಕೊಂಡಿರುವ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಸೇವೆ ಸಲ್ಲಿಸಿದ್ದಾರೆ. ಇದೀಗ ಸುದೀರ್ಘ 29 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ಆಗಮಿಸಿದ ಅವರು ಮೊದಲು ಗ್ರಾಮದ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಅಲ್ಲಿಂದ ಮಲ್ಲಿಕಾರ್ಜುನ ದೇವಸ್ಥಾನದವರೆಗೆ ಶಾಲಾ ಮಕ್ಕಳು ಹಾಗೂ ಗ್ರಾಮಸ್ಥರು ಮೆರವಣಿಗೆ ಮೂಲಕ ಸಡಗರದಿಂದ ಬರಮಾಡಿಕೊಂಡರು.
ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಗ್ರಾಪಂ ಆಡಳಿತ ಮಂಡಳಿ ಹಾಗೂ ವಿದ್ಯಾದಾನ ಸಮಿತಿ ವ್ಯವಸ್ಥಾಪಕ ಮಂಡಳಿ ವತಿಯಿಂದ ಹಮ್ಮಿಕೊಂಡಿದ್ದ ನಾಗರಿಕ ಸನ್ಮಾನ ಸಮಾರಂಭದಲ್ಲಿ ದಂಪತಿ ಸಮೇತ ಅವರನ್ನು ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅಶೋಕ ಬಸಪ್ಪ ವಿಜಾಪುರ, ಭಾರತಾಂಬೆಯ ಸೇವೆ ಸಲ್ಲಿಸಿ ಇದೀಗ ಸ್ವಗ್ರಾಮಕ್ಕೆ ಬಂದಿರುವೆ. ಈಗ ಸಿಕ್ಕಿರುವ ಸ್ವಾಗತ, ಪ್ರೀತಿ ಕಂಡು ಸಂತೋಷ, ಅಭಿಮಾನ ಉಂಟಾಗಿದೆ. ಪ್ರತಿ ಮನೆಯಿಂದ ಒಬ್ಬರಾದರೂ ಸೈನಿಕರಾಗಬೇಕು ಎಂಬುದೇ ನನ್ನ ಬಯಕೆಯಾಗಿದೆ ಎಂದರು. ಜಿಪಂ ಮಾಜಿ ಸದಸ್ಯ ಕಲ್ಲಪ್ಪ ಪುಡಕಲಕಟ್ಟಿ, ಗ್ರಾಪಂ ಅಧ್ಯಕ್ಷ ಲಕ್ಷ್ಮೀ ಆಯೆಟ್ಟಿ, ಹಿರಿಯರಾದ ವೀರಣ್ಣಾ ಪರಾಂಡೆ, ಚನ್ನಬಸಪ್ಪ ಮಸೂತಿ, ಗಂಗಪ್ಪ ಜವಳಗಿ, ಬಾಬಾ ಮೊಯುದ್ದೀನ ಚೌಧರಿ, ರಾಮಲಿಂಗಪ್ಪ ನವಲಗುಂದ, ಮಲ್ಲಣ್ಣ ಅಷ್ಟಗಿ, ಪಿಡಿಒ ಬಿ.ಎ.ಬಾವಾಖಾನವರ, ಗ್ರಾಪಂ ಸದಸ್ಯ ಬಸೀರಹ್ಮದ ಮಾಳಗಿಮನಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.