ಆಗುಂಬೆ ಘಾಟಿಯಲ್ಲಿ ನಾಳೆಯಿಂದ ಸಂಚಾರ ನಿಷೇಧ
Team Udayavani, Apr 30, 2019, 3:02 AM IST
ಶಿವಮೊಗ್ಗ: ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿದಿರುವ ಕಡೆ ಕೈಗೊಂಡಿರುವ ಶಾಶ್ವತ ದುರಸ್ತಿ ಕಾರ್ಯ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಮೇ 15ರ ವರೆಗೆ ವಾಹನ ಸಂಚಾರವನ್ನು ಸಂಪೂರ್ಣ ನಿಷೇಧಿಸಿ ಜಿಲ್ಲಾ ಧಿಕಾರಿ ಕೆ.ಎ.ದಯಾನಂದ ಆದೇಶ ಹೊರಡಿಸಿದ್ದಾರೆ.
ಈ ಅವ ಧಿಯಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಲಘು ವಾಹನಗಳಾದ ಸಾಮಾನ್ಯ ಬಸ್ಸು, ಜೀಪು, ವ್ಯಾನ್, ಎಲ್.ಸಿ.ವಿ (ಮಿನಿ ವ್ಯಾನ್), ದ್ವಿಚಕ್ರ ವಾಹನಗಳು ತೀರ್ಥಹಳ್ಳಿ-ಕೊಪ್ಪ-ಶೃಂಗೇರಿ-ಮಾಳಾಘಾಟ್-ಕಾರ್ಕಳ-ಉಡುಪಿ (ರಾಷ್ಟ್ರೀಯ ಹೆದ್ದಾರಿ 169) ಮೂಲಕ ಸಂಚರಿಸಬೇಕು.
ಭಾರೀ ವಾಹನಗಳಾದ ರಾಜಹಂಸ, ಐರಾವತ ಮತ್ತು ಖಾಸಗಿ ಲಕ್ಷುರಿ ಬಸ್‌ಗಳು, ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್ ಮತ್ತು ಲಾಂಗ್ ಚಾಸೀಸ್ ವಾಹನಗಳಿಗೆ ತೀರ್ಥಹಳ್ಳಿ-ಮಾಸ್ತಿಕಟ್ಟೆ-ಹೊಸಂಗಡಿ-ಸಿದ್ದಾಪುರ-ಕುಂದಾಪುರ-ಉಡುಪಿ (ರಾಜ್ಯ ಹೆದ್ದಾರಿ 52) ಮೂಲಕ ಸಂಚರಿಸಲು ಬದಲಿ ವ್ಯವಸ್ಥೆ ಮಾಡಲಾಗಿದೆ.
ಸಂಚಾರ ನಿಷೇಧ ಮೇ 1 ರಿಂದ 15 ರವರೆಗೆ ಅಥವಾ ಕಾಮಗಾರಿ ಮುಗಿಯುವ ತನಕ ಜಾರಿಯಲ್ಲಿರುವುದು. ಕಾಮಗಾರಿ ನಡೆಯುವ ವೇಳೆ ನಿಷೇ ಧಿತ ಮಾರ್ಗದಲ್ಲಿ ಯಾವುದೇ ವಾಹನ ಸಂಚರಿಸದಂತೆ ಮತ್ತು ಕಾಮಗಾರಿಗೆ ಅಡಚಣೆಯಾಗದಂತೆ ಸೂಕ್ತ ಸ್ಥಳಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸಲು ಜಿಲ್ಲಾಧಿ ಕಾರಿ ಆದೇಶಿಸಿದ್ದಾರೆ.
ಈ ಬದಲಿ ಮಾರ್ಗದೊಂದಿಗೆ ಆಗುಂಬೆಯಲ್ಲಿರುವ ಸರ್ಕಾರಿ ಶಾಲೆ ಮತ್ತು ಎಸ್.ವಿ.ಎಸ್.ಶಾಲೆಗಳಿಗೆ ವಿದ್ಯಾರ್ಥಿಗಳು ಓಡಾಡಬೇಕಾದ ಅವಶ್ಯಕತೆ ಇರುವುದರಿಂದ ಮಿನಿ ಬಸ್‌ಗಳನ್ನು ತೀರ್ಥಹಳ್ಳಿ-ಆಗುಂಬೆ-ಬಿದರಗೋಡು-ಶೃಂಗೇರಿ ಮಾರ್ಗವಾಗಿಯೂ ಮತ್ತು ಸಾಮಾನ್ಯ ಬಸ್‌ಗಳನ್ನು ತೀರ್ಥಹಳ್ಳಿ-ಕಲ್ಮನೆ-ಹೆಗ್ಗೊàಡು-ರಾಮಕೃಷ್ಣಾಪುರ-ಕಮ್ಮರಡಿ-ಶೃಂಗೇರಿ ಮಾರ್ಗದಲ್ಲಿ ಸಂಚರಿಸಲು ಅನುವು ಮಾಡಿಕೊಡಲಾಗಿದ್ದು, ಸಾರ್ವಜನಿಕರು ಸಹಕರಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ
ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ
Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್ ಆಸ್ಪತ್ರೆ
Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ
ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.