ಸಂಚಾರ ನಿಯಮ ಪಾಲಿಸಿ: ಡಿಸಿ
Team Udayavani, Jun 3, 2020, 5:32 AM IST
ಉಡುಪಿ: ಲಾಕ್ಡೌನ್ ನಿರ್ಬಂಧಗಳನ್ನು ಸಡಿಲಗೊಳಿಸಿರುವುದರಿಂದ ವಾಹನಗಳ ಓಡಾಟ ಹೆಚ್ಚಿದ್ದು, ಸವಾರರು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ತಪ್ಪಿದರೆ ಕಠಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಸಿದ್ದಾರೆ.
ಲಾಕ್ಡೌನ್ ಬಿಗಿಯಾಗಿದ್ದಾಗ ರಸ್ತೆ ಅಪಘಾತಗಳ ಸಂಖ್ಯೆ ಇಳಿಮುಖವಾಗಿತ್ತು. ಪ್ರಸ್ತುತ ವಾಹನಗಳ ದಟ್ಟಣೆ ಹೆಚ್ಚುತ್ತಿರುವಂತೆ ಅಪಘಾತಗಳೂ ಹೆಚ್ಚುತ್ತಿವೆ. ಮುಖ್ಯವಾಗಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚಾರ ನಿಯಮಗಳನ್ನು ಪಾಲಿಸದಿರುವುದು, ದ್ವಿಚಕ್ರ ವಾಹನಗಳ ಸವಾರರು ನಿರ್ದಿಷ್ಟ ಪಥದಲ್ಲಿ ಸಂಚರಿಸದೆ ವಿರುದ್ಧ ದಿಕ್ಕಿನಿಂದ ಅತಿ ವೇಗದಲ್ಲಿ ಸಾಗುವುದು, ಮಿತಿಗಿಂತ ಹೆಚ್ಚು ಜನರನ್ನು ಕರೆದೊಯ್ಯುವುದು, ಹೆಲ್ಮೆಟ್ ಧರಿಸದಿರುವುದು ಇತ್ಯಾದಿ ಕಂಡುಬರುತ್ತಿದೆ. ಇಂತಹ ಅತಿರೇಕಗಳಿಂದಾಗಿ ಅಪಘಾತ ಹೆಚ್ಚುತ್ತಿರುವುದು ಕಳವಳಕಾರಿ. ಮಳೆಗಾಲದ ಪ್ರಾರಂಭದಲ್ಲಿ ಗ್ರೀಸ್, ಆಯಿಲ್ ರಸ್ತೆಗೆ ಬಿದ್ದಿರುವುದರಿಂದಾಗಿ ರಸ್ತೆ ಜಾರುತ್ತಿರುವುದೂ ಅಪಘಾತಕ್ಕೆ ಕಾರಣವಾಗುತ್ತಿದೆ. ಆದ್ದರಿಂದ ಜಾಗರೂಕತೆಯಿಂದ ವಾಹನ ಚಲಾಯಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Madikeri: ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.