ಅರ್ಧ ಖಾಲಿಯಾಗಿದ್ದ ತುಂಗಭದ್ರಾ ಡ್ಯಾಂ ಭರ್ತಿ-25 ದಿನದಲ್ಲಿ 31 ಟಿಎಂಸಿ ನೀರು…

185 ಟಿಎಂಸಿಗೂ ಅಧಿಕ ಪ್ರಮಾಣದ ನೀರು ನದಿಪಾಲಾಗಿದೆ.

Team Udayavani, Sep 5, 2024, 1:25 PM IST

ಅರ್ಧ ಖಾಲಿಯಾಗಿದ್ದ ತುಂಗಭದ್ರಾ ಡ್ಯಾಂ ಭರ್ತಿ-25 ದಿನದಲ್ಲಿ 31 ಟಿಎಂಸಿ ನೀರು…

ಉದಯವಾಣಿ ಸಮಾಚಾರ
ಕೊಪ್ಪಳ: ಲಕ್ಷಾಂತರ ರೈತರ ಜೀವನಾಡಿ ತುಂಗಭದ್ರಾ ಜಲಾಶಯದ ಒಡಲಿಗೆ ಕೇವಲ 25 ದಿನಗಳಲ್ಲಿ 31 ಟಿಎಂಸಿಗೂ ಅಧಿಕ ನೀರು ಹರಿದು ಬಂದಿದ್ದು ಮತ್ತೆ ಮೈದುಂಬಿಕೊಂಡಿದೆ. ಅಚ್ಚುಕಟ್ಟು ಪ್ರದೇಶದ ಅನ್ನದಾತರು ನಿಟ್ಟುಸಿರು ಬಿಟ್ಟಿದ್ದಾರೆ. 25 ದಿನಗಳ ಹಿಂದೆ ತುಂಗಭದ್ರಾ ಡ್ಯಾಂನ 19ನೇ ಕ್ರೆಸ್ಟ್‌ಗೇಟ್‌ ಮುರಿದು ಬಿದ್ದು 35 ಟಿಎಂಸಿಯಷ್ಟು ನೀರು ಖಾಲಿಯಾಗಿತ್ತು.

ಇದರಿಂದ ರೈತ ಸಮೂಹ ಆತಂಕಕ್ಕೀಡಾಗಿ ಭತ್ತ ಬೆಳೆಯುವ ಪರಿಸ್ಥಿತಿ ಬಗ್ಗೆ ಚಿಂತಿತರಾಗಿದ್ದರು. ತಜ್ಞ ಕನ್ನಯ್ಯ ನಾಯ್ಡು ಅವರ ಸತತ ನಾಲ್ಕು ದಿನಗಳ ಪ್ರಯತ್ನದ ಫ‌ಲವಾಗಿ ಸ್ಟಾಪ್‌ಲಾಕ್‌ ಅಳವಡಿಕೆ ಮಾಡಿದ್ದರಿಂದ ನೀರು ಸೋರಿಕೆ ನಿಂತಿತ್ತು. ತಜ್ಞ ಕನ್ನಯ್ಯ ನಾಯ್ಡು ಕ್ರೆಸ್ಟ್‌ಗೇಟ್‌ಗೆ ಸ್ಟಾಪ್‌ಲಾಗ್‌ ಅಳವಡಿಕೆ ಮಾಡಿದ್ದ ವೇಳೆ ಡ್ಯಾಂನಲ್ಲಿ 72 ಟಿಎಂಸಿ ನೀರು ಉಳಿದಿತ್ತು.

ಸೆ.4ರಂದು ಬುಧವಾರ ಸಂಜೆ ವೇಳೆಗೆ ಡ್ಯಾಂನ ನೀರಿನ ಮಟ್ಟ ಮತ್ತೆ 1632 ಅಡಿಯಷ್ಟು ತಲುಪಿದೆ. ಡ್ಯಾಂನಲ್ಲಿ ಒಟ್ಟು 101 ಟಿಎಂಸಿ ನೀರು ಸಂಗ್ರಹವಾಗಿದೆ. ಅಂದರೆ ಕೇವಲ 25 ದಿನದಲ್ಲಿ ಜಲಾಶಯದ ಒಡಲಿಗೆ ಬರೊಬ್ಬರಿ 31 ಟಿಎಂಸಿ ನೀರು ಹರಿದು ಬಂದಿದೆ. ಇದಲ್ಲದೇ ಡ್ಯಾಂ ಒಳ ಹರಿವು 36169 ಕ್ಯೂಸೆಕ್‌ ಇದ್ದು ಇನ್ನು ಒಂದೆರಡು ದಿನಗಳಲ್ಲಿಯೇ ಡ್ಯಾಂ ಮತ್ತೆ ಸಂಪೂರ್ಣ 105 ಟಿಎಂಸಿಯಷ್ಟು ನೀರು ತುಂಬಿಕೊಳ್ಳಲಿದೆ. ವರುಣನ ಕೃಪೆಯಿಂದ ತುಂಗಭದ್ರೆ ಒಡಲಿಗೆ ಮತ್ತೆ ನೀರು ಹರಿದು ಬಂದಿದ್ದಕ್ಕೆ ಜಲಾಶಯದ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ಲಕ್ಷಾಂತರ ರೈತರ ಬದುಕಿಗೆ ಮತ್ತೆ  ಜೀವಕಳೆ ಬಂದಂತಾಗಿದೆ. ಅನ್ನದಾತ
ವಲಯದಲ್ಲಿ ಸಂಭ್ರಮ ಮನೆ ಮಾಡಿದೆ.

ಈ ವರ್ಷ ಹರಿದು ಬಂದಿದ್ದು 314 ಟಿಎಂಸಿ!
ತುಂಗಭದ್ರಾ ಜಲಾಶಯಕ್ಕೆ ಈ ವರ್ಷ ಬರೊಬ್ಬರಿ 314 ಟಿಎಂಸಿಯಷ್ಟು ನೀರು ಹರಿದು ಬಂದಿದೆ. ಆದರೆ 19ನೇ ಕ್ರೆಸ್ಟ್‌ಗೇಟ್‌ ಮುರಿದ ಪರಿಣಾಮ 35 ಟಿಎಂಸಿಯಷ್ಟು ನೀರು ನದಿಪಾಲಾಗಿತ್ತು. ಸದ್ಯ ಬುಧವಾರದ ಅಂತ್ಯಕ್ಕೆ ಡ್ಯಾಂನಲ್ಲಿ 101 ಟಿಎಂಸಿಯಷ್ಟು ನೀರು ಸಂಗ್ರಹವಾಗಿದೆ. ಈಗಾಗಲೇ ಡ್ಯಾಂನ ಎಲ್ಲ ಕಾಲುವೆಗಳಿಗೂ ನೀರು ಹರಿಸಲಾಗುತ್ತಿದೆ. 185 ಟಿಎಂಸಿಗೂ ಅಧಿಕ ಪ್ರಮಾಣದ ನೀರು ನದಿಪಾಲಾಗಿದೆ.

ದತ್ತು ಕಮ್ಮಾರ

ಟಾಪ್ ನ್ಯೂಸ್

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-tavaragera

Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.