Ucchila Dasara: ಕರಾವಳಿಯ 108 ವೀಣಾವಾದಕರಿಂದ ಶತವೀಣಾವಲ್ಲರಿ
Team Udayavani, Oct 8, 2024, 2:03 AM IST
ಕಾಪು: ಉಡುಪಿ ಉಚ್ಚಿಲ ದಸರಾ 2024ರಲ್ಲಿ ಲಲಿತಾ ಪಂಚಮಿ ಪ್ರಯುಕ್ತ ಶ್ರೀ ಕ್ಷೇತ್ರ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಶಾಲಿನಿ ಜಿ. ಶಂಕರ್ ತೆರೆದ ಸಭಾಂಗಣದಲ್ಲಿ ನವದುರ್ಗೆಯರು ಮತ್ತು ಶಾರದಾ ಮಾತೆಯ ಮುಂಭಾಗದಲ್ಲಿ 3 ನೇ ವರ್ಷದ “ಶತವೀಣಾವಲ್ಲರಿ’ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.
ಪ್ರಸಿದ್ಧ ವೀಣಾವಾದಕಿ ವಿದುಷಿ ಪವನ ಬಿ. ಆಚಾರ್ ಮಣಿಪಾಲ ನಿರ್ದೇಶನ ಮತ್ತು ನಿರ್ವಹಣೆಯೊಂದಿಗೆ ಕರಾವಳಿಯ 108 ಮಂದಿ ವೀಣಾವಾದಕರು ಮತ್ತು ಸಹ ಕಲಾವಿದರ ಸಹಭಾಗಿತ್ವದೊಂದಿಗೆ ಶತವೀಣಾವಲ್ಲರಿ ಜರಗಿತು. ವಿದುಷಿ ಪವನ ಬಿ. ಆಚಾರ್ ಅವರನ್ನು ಡಾ| ಜಿ. ಶಂಕರ್ ಅವರು ಸಮ್ಮಾನಿಸಿ, ಗೌರವಿಸಿದರು.
ಸುಮಂಗಲೆಯರಿಗೆ ಗೌರವಾರ್ಪಣೆ
ಸೋಮವಾರ ಚಂಡಿಕಾ ಹೋಮ, ಭಜನೆ, ಅಂಬಿಕಾ ಕಲ್ಪೋಕ್ತ ಪೂಜೆ, ಧಾರ್ಮಿಕ ಸಭೆ ಸಹಿತ ವಿವಿಧ ಕಾರ್ಯಕ್ರಮಗಳು ಜರಗಿದವು. ಲಲಿತಾ ಪಂಚಮಿ ಪ್ರಯುಕ್ತ ಸಾವಿರಾರು ಸುಮಂಗಲೆಯರಿಂದ ಸಾಮೂಹಿಕ ಕುಂಕುಮಾರ್ಚನೆ ಜರಗಿತು.
ದ. ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ, ಪ್ರಧಾನ ಅರ್ಚಕ ವೇ| ಮೂ| ರಾಘವೇಂದ್ರ ಉಪಾಧ್ಯಾಯ, ಉಚ್ಚಿಲ ದಸರಾ ಸಮಿತಿ ಅಧ್ಯಕ್ಷ ವಿನಯ ಕರ್ಕೇರ, ಕ್ಷೇತ್ರಾಡಳಿತ ಸಮಿತಿ ಮಾಜಿ ಅಧ್ಯಕ್ಷ ವಾಸುದೇವ ಸಾಲ್ಯಾನ್, ಜೀರ್ಣೋದ್ಧಾರ ಸಮಿತಿ ಮಾಜಿ ಅಧ್ಯಕ್ಷ ಗುಂಡು ಬಿ. ಅಮೀನ್, ಮಹಾಜನ ಸಂಘದ ಪ್ರಧಾನ ಕಾರ್ಯದರ್ಶಿ ಶರಣ್ ಮಟ್ಟು, ಮಹಿಳಾ ಮಹಾಜನ ಸಂಘದ ಅಧ್ಯಕ್ಷೆ ಉಷಾ ರಾಣಿ, ಕಾಪು ನಾಲ್ಕುಪಟ್ಣ ಮೊಗವೀರ ಮಹಾಸಭಾದ ಅಧ್ಯಕ್ಷ ಮನೋಜ್ ಕಾಂಚನ್, ಕಾಪು ನಾಲ್ಕು ಪಟ್ಣ ಮೊಗವೀರ ಮಹಿಳಾ ಸಭಾದ ಅಧ್ಯಕ್ಷೆ ಸುಗುಣ ಕರ್ಕೇರ ಮೊದಲಾದವರಿದ್ದರು. ಸಾಂಸ¢ತಿಕ ಕಾರ್ಯಕ್ರಮ ಸಮಿತಿ ಸಂಚಾಲಕ ಸತೀಶ್ ಅಮೀನ್ ಪಡುಕೆರೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಅ.8ರ ಕಾರ್ಯಕ್ರಮಗಳು
ಬೆಳಗ್ಗೆ 9ಕ್ಕೆ ಚಂಡಿಕಾ ಹೋಮ, 9.30ರಿಂದ 4.45ರ ಭಜನೆ, ಮಧ್ಯಾಹ್ನ 12ಕ್ಕೆ ನವದುರ್ಗೆಯರಿಗೆ ಮಹಾಮಂಗಳಾರತಿ, 12.30ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ 5ರಿಂದ ಧಾರ್ಮಿಕ ಸಭೆ, ಸಂಜೆ 5.45ರಿಂದ ಸುಮಂಗಲೆಯರಿಂದ ಸಾಮೂಹಿಕ ಕುಂಕುಮಾರ್ಚನೆ, 6.30ರಿಂದ ಸ್ಥಳೀಯ ಮಹಿಳೆಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 8ರಿಂದ ರಾಘವೇಂದ್ರ ಆಚಾರ್ಯ ಜನ್ಸಾಲೆ ನೇತೃತ್ವದ ಯಕ್ಷ ರಾಘವ ಜನ್ಸಾಲೆ ಪ್ರತಿಷ್ಠಾನದ ಯಕ್ಷ ಕಲಾ ತಂಡದವರಿಂದ ಚಕ್ರ ಚಂಡಿಕೆ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
Naxal Encounter: ದಕ್ಷಿಣ ಭಾರತದಲ್ಲಿ ಇನ್ನುಳಿದಿರುವುದು ಎಂಟೇ ಮಂದಿ ನಕ್ಸಲರು!
Naxal Encounter: ಬಂಧಿತ ಸುರೇಶ್ ಅಂಗಡಿ ಮಾಹಿತಿಯಂತೆ ʼಆಪರೇಷನ್ ವಿಕ್ರಂ ಗೌಡʼ
Naxal Encounter: ನಕ್ಸಲ್ ವಿಕ್ರಂ ಗೌಡ ಅಪಾಯಕಾರಿ ಶಸ್ತ್ರಾಸ್ತ್ರ ಹೊಂದಿದ್ದ: ಡಿಜಿಪಿ
MUST WATCH
ಹೊಸ ಸೇರ್ಪಡೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.