Uchila Dasara 2023: ಮಹಾ ಚಂಡಿಕಾಯಾಗ, ಮಹಾ ಅನ್ನಸಂತರ್ಪಣೆ

Team Udayavani, Oct 24, 2023, 10:58 PM IST

Uchila Dasara 2023: ಮಹಾ ಚಂಡಿಕಾಯಾಗ, ಮಹಾ ಅನ್ನಸಂತರ್ಪಣೆ

ಕಾಪು: ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಶರನ್ನವರಾತ್ರಿ ಮತ್ತು ಉಚ್ಚಿಲ ದಸರಾ ಉತ್ಸವದ ಪ್ರಯುಕ್ತ ಮಂಗಳವಾರ ಮಹಾಚಂಡಿಕಾ ಯಾಗ ಮತ್ತು ಮಹಾಅನ್ನಸಂತರ್ಪಣೆ ಸಂಪನ್ನಗೊಂಡಿತು.

ಪ್ರಧಾನ ತಂತ್ರಿ ವೇ| ಮೂ| ರಾಘವೇಂದ್ರ ತಂತ್ರಿ ಕೊರಂಗ್ರಪಾಡಿ ಮತ್ತು ಪ್ರಧಾನ ಅರ್ಚಕ ವೇ| ಮೂ| ರಾಘವೇಂದ್ರ ಉಪಾಧ್ಯಾಯ ಅವರ ನೇತೃತ್ವದಲ್ಲಿ ಮಹಾಚಂಡಿಕಾ ಯಾಗ ನಡೆಯಿತು. 30 ಸಾವಿರಕ್ಕೂ ಅಧಿಕ ಮಂದಿ ಅನ್ನಪ್ರಸಾದ ಸ್ವೀಕರಿಸಿದ್ದು ಉದ್ಯಮಿ ಭುವನೇಂದ್ರ ಕಿದಿಯೂರು ಅವರ ಸೇವಾರ್ಥ ಹಾಲು ಪಾಯಸ ವಿತರಿಸಲಾಯಿತು.

ಸೇವೆಗಳಲ್ಲಿ ದಾಖಲೆ
ನವರಾತ್ರಿ ಮತ್ತು ದಸರಾ ಉತ್ಸವದ ಪ್ರಯುಕ್ತ ಉಚ್ಚಿಲ ಮಹಾಲಕ್ಷ್ಮೀ ಸನ್ನಿಧಾನದಲ್ಲಿ 10 ದಿನಗಳ ಅವಧಿಯಲ್ಲಿ ಮಹಾಚಂಡಿಕಾ ಯಾಗ ಸೇರಿದಂತೆ 129 ಚಂಡಿಕಾ ಯಾಗ, 50 ಕಲೊ³àಕ್ತ ಪೂಜೆ ನಡೆದಿದೆ. ಮಂಗಳವಾರ ಸಾಮೂಹಿಕ ಮಹಾಚಂಡಿಕಾ ಯಾಗದಲ್ಲಿ 5 ಸಾವಿರಕ್ಕೂ ಅಧಿಕ ಮಂದಿ ಸೇವಾರ್ಥಿಗಳು ಪಾಲ್ಗೊಂಡಿದ್ದರು. 9ದಿನಗಳ ಸಹಸ್ರ ಕುಂಕುಮಾರ್ಚನೆ ಸೇವೆಯಲ್ಲಿ ಹತ್ತು ಲಕ್ಷ ಸಂಖ್ಯೆಯಲ್ಲಿ ಕುಂಕುಮಾರ್ಚನೆ ಸಮರ್ಪಿಸ ಲಾಯಿತು. ಮೂರು ಲಕ್ಷಕ್ಕೂ ಅಧಿಕ ಮಂದಿ ಅನ್ನಪ್ರಸಾದ ಮತ್ತು ಸಂಜೆ ಉಪಾಹಾರ ಪ್ರಸಾದ ಸ್ವೀಕರಿಸಿದರು.

ಉಚ್ಚಿಲ ದಸರಾ ರೂವಾರಿ ಡಾ| ಜಿ. ಶಂಕರ್‌, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ವಾಸುದೇವ ಸಾಲ್ಯಾನ್‌, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗುಂಡು ಅಮೀನ್‌, ಶಾಸಕ ಯಶ್‌ಪಾಲ್‌ ಸುವರ್ಣ, ಉದ್ಯಮಿ ಭುವನೇಂದ್ರ ಕಿದಿಯೂರು, ಮಹಾಜನ ಸಂಘದ ಮಾಜಿ ಅಧ್ಯಕ್ಷ ಕೇಶವ ಕುಂದರ್‌, ಕ್ಷೇತ್ರಾಡಳಿತ ಸಮಿತಿ ಮಾಜಿ ಅಧ್ಯಕ್ಷ ಶಿವಪ್ಪ ಕಾಂಚನ್‌, ಮಹಾಜನ ಸಂಘದ ಉಪಾಧ್ಯಕ್ಷ ಸುಭಾಶ್ಚಂದ್ರ ಕಾಂಚನ್‌, ಕಾರ್ಯದರ್ಶಿ ಸುಧಾಕರ್‌ ಕುಂದರ್‌, ಕೋಶಾಧಿಕಾರಿ ಭರತ್‌ ಎರ್ಮಾಳು, ಮಹಿಳಾ ಸಂಘದ ಅಧ್ಯಕ್ಷೆ ಉಷಾ ರಾಣಿ, ನಾಲ್ಕು ಪಟ್ಣ ಮೊಗವೀರ ಮಹಾಸಭಾದ ಆಧ್ಯಕ್ಷ ಮನೋಜ್‌ ಕಾಂಚನ್‌, ಮಹಿಳಾ ಸಭಾದ ಅಧ್ಯಕ್ಷೆ ಸುಗುಣಾ ಕರ್ಕೇರ, ಮೊಗವೀರ ಯುವ ಸಂಘಟನೆೆಯ ಅಧ್ಯಕ್ಷ ರಾಜೇಂದ್ರ ಸುವರ್ಣ ಹಿರಿಯಡಕ, ಪ್ರಮುಖರಾದ ಶೇಖರ ಸಾಲ್ಯಾನ್‌, ಶಂಕರ ಸಾಲ್ಯಾನ್‌, ಮೋಹನ್‌ ಬೆಂಗ್ರೆ, ಅನಿಲ್‌ ಕುಮಾರ್‌, ವೈ. ಗಂಗಾಧರ ಸುವರ್ಣ, ಹರಿಯಪ್ಪ ಕೋಟ್ಯಾನ್‌, ಚೇತನ್‌ ಬೆಂಗ್ರೆ, ಉಮೇಶ್‌ ಟಿ. ಕರ್ಕೇರ, ಭರತ್‌ ಕುಮಾರ್‌ ಉಳ್ಳಾಲ, ಹರಿಯಪ್ಪ ಕೋಟ್ಯಾನ್‌, ವಿನಯ್‌ ಕರ್ಕೇರ, ಸತೀಶ್‌ ಕುಂದರ್‌, ಶರಣ್‌ ಕುಮಾರ್‌ ಮಟ್ಟು, ಶಿವಕುಮಾರ್‌ ಮೆಂಡನ್‌, ಸರ್ವೋತ್ತಮ ಕುಂದರ್‌, ದಿನೇಶ್‌ ಎರ್ಮಾಳು, ಮೋಹನ್‌ ಬಂಗೇರ, ವಿಶ್ವಾಸ್‌ ಅಮೀನ್‌, ಸತೀಶ್‌ ಅಮೀನ್‌ ಪಡುಕೆರೆ, ಶ್ರೀಪತಿ ಭಟ್‌ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

6

ಒಲವಿನ ಊಟಕ್ಕೆ ಅಕ್ಕಂದಿರು ಸಿದ್ಧ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.