Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Team Udayavani, Nov 25, 2024, 2:49 AM IST
ಉಡುಪಿ: ಆದಿಉಡುಪಿ ಎಪಿಎಂಸಿ ಮಾರ್ಕೆಟ್ನ ಕಟ್ಟೆಯ ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾಗಿ ಅಂದರ್ ಬಾಹರ್ ಇಸ್ಪೀಟು ಜುಗಾರಿ ಆಟ ಆಡುತ್ತಿದ್ದ ಅಡ್ಡೆಗೆ ನಗರ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ವೇಳೆ ಜುಗಾರಿ ಆಟವಾಡುತ್ತಿದ್ದ 4 ಮಂದಿ ಸ್ಥಳದಿಂದ ಪರಾರಿಯಾಗಿದ್ದು, ಅವರನ್ನು ರಮೇಶ, ಸಿದ್ದನಗೌಡ, ಸೋಮ, ಬಸವ ಎಂದು ಗುರುತಿಸಲಾಗಿದೆ. ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ನಗದು 740 ರೂ. ಹಾಗೂ ಇಸ್ಪೀಟು ಎಲೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.