Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಮಲ್ಪೆಯಲ್ಲಿ ಸಂಜೆ 6ಕ್ಕೆ ಬೃಹತ್ ಸಾರ್ವಜನಿಕ ಸಭೆ
Team Udayavani, Apr 23, 2024, 11:55 AM IST
ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯ ಪ್ರಯುಕ್ತ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಸಾರ್ವಜನಿಕ ಸಭೆ ಏ.23ರ ಸಂಜೆ 5.30ಕ್ಕೆ ಬ್ರಹ್ಮಾವರ ಬಸ್ ಸ್ಟಾಂಡ್ ಬಳಿ (ಬಂಟರ ಭವನ ಎದುರು) ನಡೆಯಲಿದೆ.
ಇದನ್ನೂ ಓದಿ:Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
ಮಾಜಿ ಸಚಿವ ಕೆ.ಆರ್. ರಮೇಶ್ ಕುಮಾರ್, ಕೆ.ಪಿ.ಸಿ.ಸಿ. ವಕ್ತಾರರಾದ ತೇಜಸ್ವಿನಿ ರಮೇಶ್, ಸುದೀರ್ ಕುಮಾರ್ ಮುರೋಳ್ಳಿ ಪ್ರಧಾನ ಭಾಷಣ ಮಾಡಲಿದ್ದಾರೆ. ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಕೆ.ಪಿ.ಸಿ.ಸಿ. ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಗೋಪಾಲ್ ಪೂಜಾರಿ , ಕೆ.ಪಿ.ಸಿ.ಸಿ ಉಪಾಧ್ಯಕ್ಷ ಎಂ.ಎ. ಗಫೂರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಪಕ್ಷದ ಮುಖಂಡ ಪ್ರಸಾದ್‌ರಾಜ್ ಕಾಂಚನ್, ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಳೆಬೈಲು, ಕೆ.ಪಿ.ಸಿ. ಸಿ ಸದಸ್ಯೆ ವೆರೋನಿಕಾ ಕರ್ನೇಲಿಯೋ ಹಾಗೂ ಮತ್ತಿತರರು ಉಪಸ್ಥಿತ ರಿರುವರು ಎಂದು ಪ್ರಕಟನೆ ತಿಳಿಸಿದೆ.
ಮಲ್ಪೆಯಲ್ಲಿ ಇಂದು ಬೃಹತ್ ಸಾರ್ವಜನಿಕ ಸಭೆ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯ ಪ್ರಯುಕ್ತ ಕಾಂಗ್ರೆಸ್ ಸಮಿತಿಯಿಂದ ಬೃಹತ್ ಸಾರ್ವಜನಿಕ ಸಭೆಯನ್ನು ಏ.23ರ ಸಂಜೆ 6ಕ್ಕೆ ಮಲ್ಪೆ ಕಡಲ ಕಿನಾರೆಯ ಸೀವಾಕ್‌ನಲ್ಲಿ ಹಮ್ಮಿಕೊಳ್ಳಲಾಗಿದೆ. ಕಾಂಗ್ರೆಸ್‌ನ ಸಮಸ್ತ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖೆಯಲ್ಲಿ ಭಾಗವಹಿಸುವಂತೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ
ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು
Putin Apologizes: ಅಜರ್‌ಬೈಜಾನ್ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !
Udupi; ಗೀತಾರ್ಥ ಚಿಂತನೆ 139: ನಿರಂತರಾಭ್ಯಾಸದಿಂದ ಅಭಿಮಾನತ್ಯಾಗ ಸಾಧ್ಯ
Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.