ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಕೇಂದ್ರ ತೆರೆಯಲು ಸರಕಾರಕ್ಕೆ ಪ್ರಸ್ತಾವನೆ: ಜಿಲ್ಲಾಧಿಕಾರಿ
Team Udayavani, Nov 2, 2020, 6:41 PM IST
ಉಡುಪಿ: ಕೇಂದ್ರ ಸರಕಾರ ನಿಗದಿಪಡಿಸಿರುವ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯುವ ಕುರಿತಂತೆ ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಉಡುಪಿ, ಕಾರ್ಕಳ ಮತ್ತು ಕುಂದಾಪುರದಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯುವಂತೆ ಸೂಚಿಸಿದ ಅವರು, ಸಾಮಾನ್ಯ ಭತ್ತವನ್ನು ಕ್ವಿಂಟಾಲ್‌ಗೆ 1,868 ರೂ. ದರದಲ್ಲಿ ಮತ್ತು ಗ್ರೇಡ್ ಎ ಭತ್ತವನ್ನು ಕ್ವಿಂಟಾಲ್ ಗೆ 1,888 ರೂ. ದರದಲ್ಲಿ ಖರೀದಿಸುವಂತೆ ತಿಳಿಸಿದರು.
ಇದನ್ನೂ ಓದಿ:ಅಯೋಧ್ಯೆಯಲ್ಲಿ ರಾಮಲಲ್ಲಾನ ದರ್ಶನ ಪಡೆದ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥರು
ಭತ್ತ ಖರೀದಿ ಕೇಂದ್ರಕ್ಕೆ ಅಗತ್ಯವಿರುವ ಎಲ್ಲ ಪೂರ್ವ ತಯಾರಿಗಳನ್ನು ಮಾಡಿಕೊಳ್ಳಬೇಕು. ಭತ್ತ ಖರೀದಿಗೆ ಅಗತ್ಯವಿರುವ ಮೊತ್ತವನ್ನು ಕೃಷಿ ಮಾರಾಟ ಇಲಾಖೆಯ ಆವರ್ತ ನಿಧಿಯಿಂದ ಭರಿಸಲು ಸೂಚಿಸಲಾಯಿತು.
ಕೃಷಿ ಇಲಾಖೆ ವತಿಯಿಂದ ಭತ್ತ ಖರೀದಿ ಕೇಂದ್ರಕ್ಕೆ ಗ್ರೇಡರ್ ಸಿಬಂದಿ ನಿಯೋಜಿಸಲು ಮತ್ತು ಭತ್ತದ ತೇವಾಂಶ ಪರಿಶೀಲಿಸಲು ಮಾಯಿಶ್ಚರ್ ಮೀಟರ್ ಒದಗಿಸಲು ಕೃಷಿ ಇಲಾಖೆಗೆ ಜಿಲ್ಲಾಧಿಕಾರಿ ಸೂಚಿಸಿದರು. ಸಭೆಯಲ್ಲಿ ಎಪಿಎಂಸಿ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.