ಕೋವಿಡ್ ನಿಯಂತ್ರಿಸಲು‌ ಜವಾಬ್ದಾರಿ ಅರಿತು ಕೆಲಸ ನಿರ್ವಹಿಸಿ: ಜಗದೀಶ್‌ ಕರೆ

Team Udayavani, Apr 17, 2021, 5:30 AM IST

dc

ಉಡುಪಿ: ಜಿಲ್ಲೆಯಲ್ಲಿ ಕೋವಿಡ್‌ 2ನೇ ಅಲೆ ನಿಯಂತ್ರಿಸಲು ನಿಯೋಜಿಸಿರುವ ಎಲ್ಲ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್‌ ಹೇಳಿದ್ದಾರೆ.

ಶುಕ್ರವಾರ ನಡೆದ ಕೋವಿಡ್‌ ನಿಯಂತ್ರಣ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕೋವಿಡ್‌ ನಿಯಂತ್ರಣಕ್ಕಾಗಿ ಈ ಹಿಂದೆ ರಚಿಸಲಾಗಿದ್ದ ಎಲ್ಲ ಸಮಿತಿಗಳನ್ನು ತತ್‌ಕ್ಷಣದಿಂದ ಬರುವಂತೆ ಪುನಃ ರಚಿಸಲಾಗಿದೆ ಎಂದರು.

ಕೋವಿಡ್‌ ಪರೀಕ್ಷೆ ನಡೆಸಲು ವಿರೋಧಿಸುವವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕು. ಎಲ್ಲ ತಹಶೀಲ್ದಾರ್‌, ತಾ.ಪಂ. ಇಒಗಳು, ತಾಲೂಕು ಆರೋಗ್ಯ ಅಧಿಕಾರಿಗಳು ತಂಡ ರಚಿಸಿಕೊಂಡು ಕೋವಿಡ್‌ ಪರೀಕ್ಷೆ ನಡೆಸುವ ಸಿಬಂದಿಗೆ ಅಗತ್ಯ ಸಹಕಾರ ನೀಡುವಂತೆ ಸೂಚಿಸಿದರು.

ದಂಡ: ತೀವ್ರ ಕಾರ್ಯಾಚರಣೆ
ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಧರಿಸದವರ ವಿರುದ್ಧ ದಂಡ ವಿಧಿಸುವ ಅಧಿಕಾರವನ್ನು ನೀಡಿದ್ದರೂ ಹಲವು ಅಧಿಕಾರಿಗಳು ದಂಡ ವಿಧಿಸದಿರುವುದರ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿ ಕಾರ್ಯಾಚರಣೆಯನ್ನು ತೀವ್ರಗೊಳಿಸುವಂತೆ ಸೂಚನೆ ನೀಡಿದರು.

ತಪಾಸಣೆ ಹೆಚ್ಚಳಕ್ಕೆ ತಜ್ಞರ ಸಮಿತಿ ಸಭೆ ಸಲಹೆ
ಜಿಲ್ಲೆಯಲ್ಲಿ ಕೋವಿಡ್‌ 2ನೇ ಅಲೆಯನ್ನು ನಿಯಂತ್ರಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತಂತೆ ಜಿಲ್ಲಾ ತಜ್ಞರ ಸಮಿತಿ ಸಭೆಯು ಜಿಲ್ಲಾಧಿಕಾರಿ ಜಿ.ಜಗದೀಶ್‌ ಅಧ್ಯಕ್ಷತೆಯಲ್ಲಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.

ಕೋವಿಡ್‌ 2ನೇ ಅಲೆ ನಿಯಂತ್ರಿಸುವ ಕುರಿತಂತೆ ಹೆಚ್ಚಿನ ಸಂಖ್ಯೆಯಲ್ಲಿ ತಪಾಸಣೆ, ಪತ್ತೆ ಹಚ್ಚುವಿಕೆ, ಚಿಕಿತ್ಸೆ ನೀಡುವುದನ್ನು ಶೀಘ್ರವಾಗಿ ಕೈಗೊಳ್ಳಬೇಕು. ಹೃದಯ ಸಂಬಂಧಿ ರೋಗಿಗಳು, ಕಿಡ್ನಿ ಸಮಸ್ಯೆಯಿರುವವರು, ಕ್ಯಾನ್ಸರ್‌ ರೋಗಿಗಳು ಕೋವಿಡ್‌ನಿಂದ ಮರಣ ಹೊಂದುವುದು ಅಧಿಕವಾಗಿದ್ದು, ಇಂತಹ ರೋಗಿಗಳನ್ನು 15 ದಿನಗಳಿಗೊಮ್ಮೆ ನಿಯಮಿತವಾಗಿ ತಪಾಸಣೆ ಮಾಡುವುದರ ಮೂಲಕ ಬೇಗ ರೋಗ ಪತ್ತೆ ಹಚ್ಚಿ ಚಕಿತ್ಸೆ ನೀಡುವುದರಿಂದ ಸಾವು ಸಂಭವಿಸುವುದನ್ನು ತಪ್ಪಿಸಬಹುದಾಗಿದೆ ಎಂದು ತಜ್ಞರ ಸಮಿತಿ ತಿಳಿಸಿತು.

ಜಿ.ಪಂ. ಸಿಇಒ ಡಾ| ನವೀನ್‌ ಭಟ್‌, ಅಪರ ಜಿಲ್ಲಾದಿಕಾರಿ ಸದಾಶಿವ ಪ್ರಭು, ಉಪ ವಿಬಾಗಾಧಿಕಾರಿ ರಾಜು, ಜಿ.ಪಂ. ಉಪ ಕಾರ್ಯದರ್ಶಿ ಕಿರಣ್‌ ಪೆಡೆ°àಕರ್‌, ಡಿಎಚ್‌ಒ ಡಾ| ಸುಧೀರ್‌ಚಂದ್ರ ಸೂಡ, ಜಿಲ್ಲಾ ಕೋವಿಡ್‌ ನೋಡಲ್‌ ಅಧಿಕಾರಿ ಡಾ| ಪ್ರಶಾಂತ ಭಟ್‌, ಜಿಲ್ಲಾ ಸರ್ಜನ್‌ ಡಾ| ಮಧುಸೂದನ್‌ ನಾಯಕ್‌ ಉಪಸ್ಥಿತರಿದ್ದರು.

ಎಂಐಟಿ ಕ್ರಮ: ಪ್ರಧಾನಿ ಶ್ಲಾಘನೆ
ಜಿಲ್ಲಾಧಿಕಾರಿ ಜಿ.ಜಗದೀಶ್‌ ಮಾತನಾಡಿ, ಎಂಐಟಿಯಲ್ಲಿ ಕಂಟೈನ್‌ಮೆಂಟ್‌ ವಲಯ ರಚಿಸಿ ಕೋವಿಡ್‌ ನಿಯಂತ್ರಣಕ್ಕೆ ತಂದ ಕ್ರಮದ ಕುರಿತು ಪ್ರಧಾನ ಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಎಲ್ಲ ಖಾಸಗಿ ಆಸ್ಪತ್ರೆಗಳು ಅಗತ್ಯ ಪ್ರಮಾಣದ ಬೆಡ್‌ಗಳನ್ನು ಕೋವಿಡ್‌ ರೋಗಿಗಳಿಗೆ ಮೀಸಲಿಡಬೇಕು. ತಮ್ಮಲ್ಲಿಗೆ ಬರುವ ಐಎಲ್‌ಐ ಮತ್ತು ಸಾರಿ ಪ್ರಕರಣಗಳ ಕುರಿತು ಮಾಹಿತಿ ನೀಡಬೇಕು. ಎಲ್ಲ ಖಾಸಗಿ ಸಂಸ್ಥೆಗಳು, ಮಾಲ್‌ಗ‌ಳು, ಶಿಕ್ಷಣ ಸಂಸ್ಥೆಗಳು, ಹೊಟೇಲ್‌ ಸಹಿತ ಎಲ್ಲಡೆ ಕೋವಿಡ್‌ ಪರೀಕ್ಷೆಗೆ ಸಹಕಾರ ನೀಡಬೇಕು ಎಂದರು.

ಟಾಪ್ ನ್ಯೂಸ್

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ: ದಿಲ್ಲಿ ಸರಕಾರ

Delhi Government: ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Supreme Court: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

SC: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

3

Udupi: ಕೂಲಿ ಕಾರ್ಮಿಕನ ಮೇಲೆ ಹಲ್ಲೆ; ಗಾಯ

Brahmavar

Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

4

Udupi: ಕೊಳಚೆಯಿಂದ ಕಂಗಾಲಾದ ನಿಟ್ಟೂರು, ಕಲ್ಮಾಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ: ದಿಲ್ಲಿ ಸರಕಾರ

Delhi Government: ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.