ಉಡುಪಿ ಜಿಲ್ಲೆ: 4 ಕಡೆ ಮಾದರಿ ಸಂಗ್ರಹದ ವಿಸ್ಕ್


Team Udayavani, Apr 20, 2020, 6:08 AM IST

ಉಡುಪಿ ಜಿಲ್ಲೆ: 4 ಕಡೆ ಮಾದರಿ ಸಂಗ್ರಹದ ವಿಸ್ಕ್

ಉಡುಪಿ: ಕೋವಿಡ್ 19 ಶಂಕಿತರ ಗಂಟಲ ದ್ರವ ಸಂಗ್ರಹದಲ್ಲಿ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿರುವ ಮತ್ತು ಸೋಂಕುಮುಕ್ತ ಜಿಲ್ಲೆ ಎನಿಸಿರುವ ಉಡುಪಿ ಜಿಲ್ಲೆಯಲ್ಲಿ ಗಂಟಲ ದ್ರವ ಮಾದರಿಗಳನ್ನು ಸಂಗ್ರಹಿಸಲು ಅನುಕೂಲವಾಗುವ ನಾಲ್ಕು ವಾಕ್‌ ಇನ್‌ ಸ್ಯಾಂಪಲ್‌ ಕಲೆಕ್ಷನ್‌ ವಿಸ್ಕ್ ಸ್ಥಾಪನೆ ಮಾಡಲಾಗಿದೆ.

ಎ. 17, 18ರಂದು ಉಡುಪಿಯ ಜಿಲ್ಲಾಸ್ಪತ್ರೆ, ಡಾ| ಟಿಎಂಎ ಪೈ ಆಸ್ಪತ್ರೆಯಲ್ಲಿ, ಕುಂದಾಪುರ ಮತ್ತು ಕಾರ್ಕಳದ ತಾಲೂಕು ಆಸ್ಪತ್ರೆಗಳಲ್ಲಿ ಭಾರತೀಯ ವೈದ್ಯರ ಸಂಘ ಕರಾವಳಿ ಶಾಖೆ ಉಡುಪಿ, ರೋಟರಿ ಕ್ಲಬ್‌, ರೆಡ್‌ಕ್ರಾಸ್‌ ಸೊಸೈಟಿ ಸಹಕಾರದಲ್ಲಿ ವಿಸ್ಕ್ ಸ್ಥಾಪಿಸಲಾಗಿದೆ. ಇದು ಗಂಟಲ ದ್ರವ ಸಂಗ್ರಹ ಮಾಡುವಾಗ ರೋಗಿಗೂ ವೈದ್ಯಕೀಯ ಸಿಬಂದಿಗೂ ತಡೆಗೋಡೆಯಾಗಿದ್ದು ಸುರಕ್ಷಿತ ಮಾರ್ಗವಾಗಿದೆ ಮತ್ತು ಪರ್ಸನಲ್‌ ಪ್ರೊಟೆಕ್ಟಿವ್‌ ಇಕ್ವಿಪ್‌ಮೆಂಟ್‌ (ಪಿಪಿಇ) ಅವಲಂಬನೆಯನ್ನು ಕಡಿಮೆ ಮಾಡಲಿದೆ ಎಂದು ಕೋವಿಡ್ 19  ನೋಡಲ್‌ ಅಧಿಕಾರಿ ಡಾ| ಪ್ರಶಾಂತ್‌ ಭಟ್‌ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಸೋಂಕು ಕಂಡುಬಂದ ಮೂವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು ಹೋಮ್‌ ಕ್ವಾರಂಟೈನ್‌ನಲ್ಲಿದ್ದಾರೆ. ಭಟ್ಕಳದ ಗರ್ಭಿಣಿಯ ಗಂಟಲುದ್ರವದ ಮಾದರಿಯನ್ನು ಕಳುಹಿಸಿದ್ದು ವರದಿ ಇನ್ನಷ್ಟೇ ಬರಬೇಕಾಗಿದೆ.

26 ಮಾದರಿ ಸಂಗ್ರಹ
ರವಿವಾರ ಒಟ್ಟು 26 ಜನರ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಇವರಲ್ಲಿ ಉಸಿರಾಟದ ಸಮಸ್ಯೆಯ ನಾಲ್ವರು, ಕೋವಿಡ್ 19 ಸಂಪರ್ಕದ 11 ಮಂದಿ, ಜ್ವರದ ಆರು, ಹಾಟ್‌ಸ್ಪಾಟ್‌ ಸಂಪರ್ಕದ ಐವರು ಇದ್ದಾರೆ. ಇದುವರೆಗೆ 894 ಮಾದರಿಗಳನ್ನು ಜಿಲ್ಲೆಯಲ್ಲಿ ಸಂಗ್ರಹಿಸಲಾಗಿದೆ.

ರವಿವಾರದ ಎಲ್ಲ ವರದಿ ನೆಗೆಟಿವ್‌
ರವಿವಾರ ಬಂದ ಎಲ್ಲ 118 ವರದಿಗಳೂ ನೆಗೆಟಿವ್‌ ಆಗಿದ್ದು ಇದುವರೆಗೆ 796 ವರದಿಗಳು ನೆಗೆಟಿವ್‌ ಆಗಿವೆ. 95 ವರದಿಗಳನ್ನು ನಿರೀಕ್ಷಿಸಲಾಗುತ್ತಿದೆ.

57 ಮಂದಿ ಐಸೊಲೇಶನ್‌ ವಾರ್ಡ್‌ನಲ್ಲಿ
ರವಿವಾರ ತೀವ್ರ ಉಸಿರಾಟ ಸಮಸ್ಯೆಯ ಮೂವರು ಪುರುಷರು, ಕೋವಿಡ್ 19 ಶಂಕೆ, ಜ್ವರದ ತಲಾ ಒಬ್ಬರು ಒಟ್ಟು ಐವರು ಆಸ್ಪತ್ರೆಗಳ ಐಸೊಲೇಶನ್‌ ವಾರ್ಡ್‌ಗೆ ಸೇರ್ಪಡೆಯಾಗಿದ್ದಾರೆ. ಪ್ರಸ್ತುತ 57 ಮಂದಿ ಐಸೊಲೇಶನ್‌ ವಾರ್ಡ್‌ನಲ್ಲಿದ್ದಾರೆ. ರವಿವಾರ ನಾಲ್ವರು ಬಿಡುಗಡೆಗೊಂಡಿದ್ದಾರೆ.

109 ಮಂದಿ ನೋಂದಣಿ
ರವಿವಾರ ಒಟ್ಟು 109 ಮಂದಿ ನೋಂದಣಿ ಮಾಡಿಸಿಕೊಂಡಿದ್ದಾರೆ. ರವಿವಾರ 63 ಮಂದಿ 28 ದಿನಗಳ, 25 ಮಂದಿ 14 ದಿನಗಳ ಕ್ವಾರಂಟೈನ್‌ ಮುಗಿಸಿದ್ದಾರೆ. ಇದುವರೆಗೆ 1,825 ಮಂದಿ 28 ದಿನಗಳ, 2,162 ಮಂದಿ 14 ದಿನಗಳ ಕ್ವಾರಂಟೈನ್‌ ಮುಗಿಸಿದ್ದಾರೆ. ಪ್ರಸ್ತುತ 572 ಮಂದಿ ಮನೆಗಳಲ್ಲಿ ಮತ್ತು 35 ಮಂದಿ ಆಸ್ಪತ್ರೆ ಕ್ವಾರಂಟೈನ್‌ನಲ್ಲಿದ್ದಾರೆ.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.