ಉಡುಪಿ ಜಿಲ್ಲೆ 5 ಕಡೆ ಕಂಟೈನ್‌ಮೆಂಟ್ ವಲಯ
Team Udayavani, Jan 3, 2022, 6:48 AM IST
ಸಾಂದರ್ಭಿಕ ಚಿತ್ರ
ಉಡುಪಿ: ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಉಡುಪಿಯ ಎಂಐಟಿ ಕ್ಯಾಂಪಸ್‌ನ 7 ಹಾಗೂ 10ನೇ ಬ್ಲಾಕ್, ನ್ಯೂ ಇಂಟರ್‌ನ್ಯಾಶನಲ್ ಹಾಸ್ಟೆಲ್, ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಪರ್ಕಿಸುವ ಬಳಿ ಇರುವ 2 ಅಪಾರ್ಟ್‌ಮೆಂಟ್‌ಗಳನ್ನು ಕಂಟೈನ್‌ಮೆಂಟ್ ವಲಯ ಮಾಡಲಾಗಿದೆ.
ಸಚಿವ ಸುನಿಲ್ ಸೂಚನೆ
ಜಿಲ್ಲೆಯಲ್ಲಿ ಕಳೆದ 2 ದಿನಗಳಿಂದ ಕೋವಿಡ್ ಸೋಂಕಿತರ ಸಂಖ್ಯೆ ಅಲ್ಪ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ. ಸೋಂಕು ಇರುವ ಸ್ಥಳಗಳಲ್ಲಿ ಹೆಚ್ಚು ಹೆಚ್ಚು ಪರೀಕ್ಷೆಯನ್ನು ಮಾಡುವುದರ ಜತೆ ಅವರನ್ನು ಗುರುತಿಸಿ ಚಿಕಿತ್ಸೆ ನೀಡಬೇಕು. ಮಾತ್ರವಲ್ಲದೇ ಕಂಟೈನ್‌ಮೆಂಟ್ ವಲಯಗಳನ್ನಾಗಿ ಘೋಷಿಸಿ ಸೋಂಕು ಹರಡದಂತೆ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸಚಿವ ಸುನಿಲ್ ಕುಮಾರ್ ಸೂಚನೆ ನೀಡಿದರು.
ಇದನ್ನೂ ಓದಿ:ನವೆಂಬರ್‌ನಲ್ಲಿ 17.5 ಲಕ್ಷ ವಾಟ್ಸ್‌ಆ್ಯಪ್ ಖಾತೆ ಬ್ಯಾನ್
ದ.ಕ. : 63 ಮಂದಿಗೆ ಕೊರೊನಾ; 1 ಸಾವು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರವಿವಾರ 63 ಮಂದಿಗೆ ಸೋಂಕು ದೃಢಪಟ್ಟಿದೆ. ಒಬ್ಬರು ಮೃತಪಟ್ಟಿದ್ದಾರೆ. 18 ಮಂದಿ ಗುಣಮುಖ ಹೊಂದಿದ್ದಾರೆ. ಪ್ರಸ್ತುತ 231 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಾಸಿಟಿವಿಟಿ ದರ ಶೇ. 0.78 ರಷ್ಟಿದೆ.
ಉಡುಪಿ: 54 ಪ್ರಕರಣ
ಉಡುಪಿ: ಜಿಲ್ಲೆಯಲ್ಲಿ ರವಿವಾರ 54 ಪ್ರಕರಣ ದೃಢಪಟ್ಟಿದೆ. 5,777 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದ್ದು, 8 ಮಂದಿ ಬಿಡುಗಡೆಯಾಗಿದ್ದಾರೆ. 186 ಪ್ರಕರಣಗಳು ಸಕ್ರಿಯವಾಗಿವೆ.
ಕಾಸರಗೋಡು: 42 ಮಂದಿಗೆ ಸೋಂಕು
ಕಾಸರಗೋಡು: ಜಿಲ್ಲೆಯಲ್ಲಿ ರವಿವಾರ 42 ಪ್ರಕರಣ ದೃಢಪಟ್ಟಿದೆ. 104 ಮಂದಿ ಗುಣಮುಖರಾಗಿದ್ದಾರೆ. 321 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೊಡಗು: 10 ಮಂದಿಗೆ ಸೋಂಕು
ಮಡಿಕೇರಿ: ಜಿಲ್ಲೆಯಲ್ಲಿ ರವಿವಾರ 10 ಪ್ರಕರಣ ದೃಢಪಟ್ಟಿದ್ದು 85 ಮಂದಿ ಗುಣಮುಖರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.