Udupi: ಕಾರ್ಮಿಕರ ದಾಖಲೆ ಪಡೆಯಲು ಜಿಲ್ಲಾಧಿಕಾರಿ ಸೂಚನೆ
Team Udayavani, Nov 6, 2024, 7:20 PM IST
ಉಡುಪಿ: ಕಾರ್ಮಿಕರ ಸೇವೆಯನ್ನು ಪಡೆಯಲು ಕೆಲಸಗಾರರನ್ನು ನಿಯೋಜಿಸಿಕೊಳ್ಳುವ ಪ್ರತಿಯೊಬ್ಬ ಮಾಲಕರು ಅವರ ಗುರುತಿನ ಚೀಟಿ, ಶಾಶ್ವತ ಹಾಗೂ ತಾತ್ಕಾಲಿಕ ವಾಸ ಸ್ಥಾನದ ವಿವರಗಳನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಈ ವಿವರಗಳನ್ನು ಸಂಬಂಧಿಸಿದ ಸರಕಾರಿ ಕಚೇರಿಗಳಿಗೆ ತಪ್ಪದೇ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ.ವಿದ್ಯಾಕುಮಾರಿ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರಗಿದ ಅಕ್ರಮ ಬಾಂಗ್ಲಾದೇಶೀಯ ವಲಸೆ ಕಾರ್ಮಿಕರಿಗೆ ಹಾಗೂ ನಾಗರಿಕರಿಗೆ ಸಂಬಂಧಿಸಿ ವಿವಿಧ ಸಂಸ್ಥೆಗಳ ಮೂಲಕ ಜಿಲ್ಲೆಯ ಜನರನ್ನು ಜಾಗೃತಗೊಳಿಸುವ ಸಭೆಯಲ್ಲಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಅಕ್ರಮವಾಗಿ ಬಾಂಗ್ಲಾದೇಶದ ಕಾರ್ಮಿಕರು ಜಿಲ್ಲೆಯಲ್ಲಿ ವಿವಿಧ ಕೆಲಸಗಳಲ್ಲಿ ತೊಡಗಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ಅಲ್ಲದೆ ಸ್ಥಳೀಯವಾಗಿ ಕೆಲವು ದಾಖಲೆಗಳನ್ನು ಸೃಷ್ಟಿಸಿಕೊಂಡು ಕಾನೂನು ಬಾಹಿರವಾಗಿ ವಾಸವಿದ್ದರೆ, ಸರಕಾರ ಈ ಬಗ್ಗೆ ಗಂಭೀರವಾಗಿ ಪರಿಗಣಿಸಿ ಎಚ್ಚರ ವಹಿಸಲು ನಿರ್ದೇಶನ ನೀಡಿದೆ. ಕಾರ್ಮಿಕ, ಕೈಗಾರಿಕೆ, ಮೀನುಗಾರಿಕೆ ಮತ್ತಿತರ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬಂದಿ ಈ ಬಗ್ಗೆ ಪರಿಶೀಲಿಸಬೇಕು ಎಂದು ಸೂಚನೆ ನೀಡಿದರು.
ಸೂಕ್ತ ದಾಖಲೆಗಳು ಅಧಿಕಾರಿಗಳ ಕೈಸೇರಿದ ಬಳಿಕವೂ ಆಗಿಂದಾಗ್ಗೆ ಅವರು ಕೆಲಸ ನಿರ್ವಹಿಸುವ ಸ್ಥಳಗಳಿಗೆ ಅನಿರೀಕ್ಷಿತ ಭೇಟಿ ನೀಡಿ ತಪಾಸಣೆ ನಡೆಸಬೇಕು ಎಂದರು.
ಹೊರ ರಾಜ್ಯಗಳಿಂದ ಮೀನುಗಾರಿಕೆ ಚಟುವಟಿಕೆಗಳಿಗೆ ಕಾನೂನು ಬಾಹಿರವಾಗಿ ಮೀನುಗಾರಿಕೆ ಬೋಟ್‌ಗಳು ಬಂದ ಸಂದರ್ಭದಲ್ಲಿ ಕಾನೂನಿನ ಅನ್ವಯ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ಇದನ್ನು ಮಾಡುವುದನ್ನು ತಪ್ಪಿದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸರಕಾರಕ್ಕೆ ವರದಿ ಸಲ್ಲಿಸುವುದಾಗಿ ತಿಳಿಸಿದರು.
ಮನೆಯ ಮಾಲಕರು ತಮ್ಮ ಮನೆಯನ್ನು ಬಾಡಿಗೆಗೆ ನೀಡುವ ಮುನ್ನ ಸೂಕ್ತ ದಾಖಲೆಗಳನ್ನು ಪಡೆದುಕೊಳ್ಳುವುದು ಸೂಕ್ತ. ಕಾರ್ಮಿಕ, ಉದ್ಯೋಗ ಪರ ಸಂಘಟನೆಗಳು ಸಹ ಅಕ್ರಮ ವಿದೇಶಿ ವಲಸಿಗರ ಬಗ್ಗೆ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದರು.
ಮೀನುಗಾರಿಕೆ ಬಂದರಿನಲ್ಲಿ ನಿಗದಿತ ಸೂಕ್ತ ಸ್ಥಳಗಳಲ್ಲಿ ಸಿಸಿಟಿವಿ ಕೆಮರಾಗಳನ್ನು ಆಳವಡಿಸಬೇಕು ಎಂದು ಬಂದರು ಹಾಗೂ ಸಿ.ಆರ್.ಝೆಡ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಕೆ.ಅರುಣ್ ಮಾತನಾಡಿ, ಕೆಲಸ ಕಾರ್ಯಗಳಿಗೆ ಕಾರ್ಮಿಕರನ್ನು ನಿಯೋಜಿಸಿಕೊಳ್ಳುವ ಮೊದಲು ಅವರ ಪೂರ್ವಾಪರ ಮಾಹಿತಿ ಹಾಗೂ ಅವರ ಗುರುತಿನ ಚೀಟಿಯನ್ನು ಪಡೆದುಕೊಳ್ಳುವುದರ ಜತೆಗೆ ದಾಖಲೆಗಳನ್ನು ಪರಿಶೀಲಿಸಿಕೊಳ್ಳಬೇಕು. ಒಂದೊಮ್ಮೆ ಕಾನೂನು ಬಾಹಿರ ವ್ಯಕ್ತಿಗಳನ್ನು ಕೆಲಸಕ್ಕೆ ತೊಡಗಿಸಿಕೊಂಡ ಪ್ರಕರಣಗಳು ಕಂಡುಬಂದಲ್ಲಿ ಕಾರ್ಮಿಕರ ಜತೆಗೆ ನೇಮಿಸಿಕೊಂಡ ಮಾಲಕರನ್ನು ಹೊಣೆಗಾರರನ್ನಾಗಿ ಮಾಡಿ ಕಾನೂನಿನ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದರು.
ಆಧಾರ್ ಕಾರ್ಡ್ ಮೂಲವನ್ನು ಪರಿಶೀಲಿಸುವ ಬಗ್ಗೆ ಪ್ರಾಯೋಗಿಕ ತರಬೇತಿ ನೀಡಲಾಯಿತು.
ಕರಾವಳಿ ಕಾವಲು ಪಡೆಯ ಎಸ್ಪಿ ಮಿಥುನ್ ಎಚ್.ಎನ್., ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮದ್, ಕೈಗಾರಿಕೆ ಕೇಂದ್ರದ ಜಂಟಿ ನಿರ್ದೇಶಕ ನಾಗರಾಜ್ ವಿ. ನಾಯಕ್, ವಿವಿಧ ಸಂಘಟನೆಗಳ-ಸಂಸ್ಥೆಗಳ ಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.