![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 24, 2022, 5:40 AM IST
ಉಡುಪಿ: ಸರಕಾರಗಳು ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಹಿತರಕ್ಷಣೆಗೆ ವಿಶೇಷ ಕಾನೂನುಗಳನ್ನು ಜಾರಿಗೆ ತಂದಿದೆ. ಅವುಗಳನ್ನು ನಿಯಮಾನುಸಾರ ಅನುಷ್ಠಾನಗೊಳಿಸಿ, ದೌರ್ಜನ್ಯಕ್ಕೆ ಒಳಗಾದವರಿಗೆ ಸೂಕ್ತ ನೆರವು ಹಾಗೂ ಪರಿಹಾರ ಒದಗಿಸಿಕೊಡಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿ.ಪಂ.ಸಭಾಂಗಣದಲ್ಲಿ ಬುಧವಾರ ನಡೆದ ಪ.ಜಾತಿ ಮತ್ತು ಪಂಗಡದವರ ಹಿತರಕ್ಷಣಾ ಹಾಗೂ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
2012ರಿಂದ ಈ ವರೆಗೆ ಜಿಲ್ಲೆಯಲ್ಲಿ ಪ.ಜಾತಿ ಹಾಗೂ ಪಂಗಡದ 28 ಅಪ್ರಾಪೆ¤ಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, 26 ಪ್ರಕರಣಗಳು ದಾಖಲಾಗಿ ಅವುಗಳಲ್ಲಿ 13 ಪ್ರಕರಣಗಳು ಖುಲಾಸೆಯಾಗಿದ್ದು, 1 ಪ್ರಕರಣದಲ್ಲಿ ಶಿಕ್ಷೆಯಾಗಿದೆ. 12 ಪ್ರಕರಣಗಳು ವಿಚಾರಣಾ ಹಂತದಲ್ಲಿದೆ. ಹೆಚ್ಚಿನ ಪ್ರಕರಣಗಳು ಖುಲಾಸೆಯಾಗಲು ಸರಿಯಾದ ಕಾರಣವೇನು ಎಂಬುದನ್ನು ಅರಿತು, ಬಾಕಿ ಇರುವ ಪ್ರಕರಣಗಳಲ್ಲಿ ಆರೋಪಿತರಿಗೆ ಶಿಕ್ಷೆಯಾಗುವಂತೆ ಎಚ್ಚರವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.
ಇದನ್ನೂ ಓದಿ:ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಳಕ್ಕೆ ತೀರ್ಮಾನ: ಸಿಎಂ ಬೊಮ್ಮಾಯಿ
ಜಿಲ್ಲೆಯಲ್ಲಿ ಡಿಸಿ ಮನ್ನಾ ಭೂಮಿಯನ್ನು ಉಳ್ಳವರೇ ಅತಿಕ್ರಮಣ ಮಾಡಿ ಬಳಕೆ ಮಾಡುತಿರುವ ಬಗ್ಗೆ ಹೆಚ್ಚಿನ ದೂರುಗಳು ಕೇಳಿ ಬರುತ್ತಿವೆ. ಇವುಗಳ ಬಗ್ಗೆ ಕೂಲಂಕಷವಾಗಿ ಪರಿಶೀಲಸಿ, ಅತಿಕ್ರಮಣ ತೆರವುಗೊಳಿಸಿ, ಅರ್ಹ ಫಲಾನುಭವಿಗೆ ಹಂಚಿಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ಅರಣ್ಯ ಇಲಾಖೆಯವರು ಈ ಭೂಮಿಯನ್ನು ಅತಿಕ್ರಮಣ ಮಾಡಿದ್ದಲ್ಲಿ ಅವರಿಂದ ವಾಪಸ್ ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದರು. ಪ.ಜಾತಿ, ಪಂಗಡಕ್ಕೆ ಸೇರದಿರುವ ಅನರ್ಹರು ಸುಳ್ಳು ಜಾತಿ ಪ್ರಮಾಣಪತ್ರ ಪಡೆಯುತ್ತಿದ್ದಾರೆ ಎಂಬ
ದೂರುಗಳನ್ನು ಪರಿಶೀಲಿಸಿ, ಅಂತಹ ಪ್ರಮಾಣಪತ್ರ ರದ್ದುಮಾಡಿ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
ಜಿ.ಪಂ. ಸಿಇಒ ಡಾ| ನವೀನ್ ಭಟ್ ಮಾತನಾಡಿದರು. ಎಡಿಸಿ ವೀಣಾ, ಎಎಸ್ಪಿ ಸಿದ್ದಲಿಂಗಪ್ಪ, ಕುಂದಾಪುರ ಎಸಿ ರಾಜು, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡೂÉರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.