Udupi 71 ವರ್ಷದ ಮಹಿಳೆಯ 8 ಕೆಜಿ ಗಡ್ಡೆ ಬೇರ್ಪಡಿಸಿದ ವೈದ್ಯರು
ಅಜ್ಜರಕಾಡು ಸರಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ
Team Udayavani, Jun 29, 2024, 7:10 AM IST
ಉಡುಪಿ: ಸುಮಾರು 32 ವರ್ಷಗಳಿಂದ ದುರ್ಮಾಂಸ ಗಡ್ಡೆಯಿಂದ ಬಳಲುತ್ತಿದ್ದ ಮಹಿಳೆಗೆ ಶಸ್ತ್ರಚಿಕಿತ್ಸೆ ಮೂಲಕ ಸುಮಾರು 8 ಕೆಜಿ ದುಮಾಂಸವನ್ನು ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಾ ತಜ್ಞರು ಯಶಸ್ವಿಯಾಗಿ ಬೇರ್ಪಡಿಸಿದ್ದಾರೆ.
ಕಾರ್ಕಳದ ನಿವಾಸಿ ಪುಷ್ಪಾ (71) ಅವರ ಭುಜದ ಭಾಗದಲ್ಲಿ ಈ ಗಡ್ಡೆ ಇತ್ತು. ಅವರನ್ನು ಚಿಕಿತ್ಸೆಗಾಗಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಜೂ.26ರಂದು ಶಸ್ತ್ರಚಿಕಿತ್ಸ ತಜ್ಞ ಡಾ| ಸುಜಿತ್ ಅವರು ತಮ್ಮ ತಂಡದೊಂದಿಗೆ ಸುಮಾರು 3 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿ ಈ ಗಡ್ಡೆಯನ್ನು ಹೊರತೆಗೆದಿದ್ದಾರೆ.
ಆಸ್ಪತ್ರೆಯ ಜನರಲ್ ಸರ್ಜನ್ ಆಗಿರುವ ಡಾ| ಸುಜಿತ್ ಅವರ ನೇತೃತ್ವದಲ್ಲಿ ಅರವಳಿಕೆ ತಜ್ಞರಾದ ಡಾ| ಉಮೇಶ್ ಉಪಾಧ್ಯಾಯ ಹಾಗೂ ಡಾ| ವಿಶ್ವನಾಥ್ ಶೆಟ್ಟಿ ಹಾಗೂ ನುರಿತ ಶುಶ್ರೂಷಕ ಅಧಿಕಾರಿಗಳ ಸಹಯೋಗದೊಂದಿಗೆ ಈ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಪ್ರಸ್ತುತ ರೋಗಿಯು ಚೇತರಿಕೆ ಕಾಣುತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Udupi: ಗೀತೆಯ ಸಂದೇಶ ಪ್ರತೀ ಮನೆಯನ್ನೂ ಪ್ರವೇಶಿಸಲಿ: ಕಾಂಚಿ ಶ್ರೀ
Udupi: ಎಂಜಿಎಂ ಕಾಲೇಜಿನಲ್ಲಿ ನ.29 ರಿಂದ ಡಿ.1ವರೆಗೆ ಅಮೃತ ಮಹೋತ್ಸವ ಸಂಭ್ರಮ
Udupi: ಗೀತಾರ್ಥ ಚಿಂತನೆ-100: ಸತ್ತಾಗ ದುಃಖ, ಸಾಯುತ್ತಿರುವಾಗಲ್ಲ!
Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.