Udupi ಮನೆಕಳ್ಳತನ ಪ್ರಕರಣ: ಆರೋಪಿಯ ಬಂಧನ
Team Udayavani, Aug 26, 2024, 6:45 AM IST
ಉಡುಪಿ: ಕಾಡಬೆಟ್ಟುವಿನಲ್ಲಿ ಇತ್ತೀಚೆಗೆ ಮನೆಯಲ್ಲಿ ಕಳವು ನಡೆಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಆರೀಫ್ ಮುನ್ನಾ ಮೊಹಮ್ಮದ್ ಆರೀಫ್ ಬಂಧಿತ ಆರೋಪಿ.
ಕಾಡಬೆಟ್ಟು ರಾಮಣ್ಣ ಶೆಟ್ಟಿ ಕಾಲನಿಯ ಜೀವನ ನಗರ ಎಂಬಲ್ಲಿ ಟಿ. ಪ್ರಶಾಂತ್ ಪೈ ಅವರ ವಾಸ್ತವ್ಯದ ಮನೆಯಲ್ಲಿ ಇತ್ತೀಚೆಗೆ ಈತ ಕಳ್ಳತನ ನಡೆಸಿದ್ದ. ಮನೆಯ ಮುಖ್ಯ ಬಾಗಿಲನ್ನು ಯಾವುದೋ ಸಾಧನದಿಂದ ಮೀಟಿ ಮುರಿದು ಮನೆಯ ಒಳಗೆ ಪ್ರವೇಶಿಸಿ ದೇವರ ಫೋಟೋ ಮೇಲಿದ್ದ ಸುಮಾರು ತಲಾ ಒಂದು ಗ್ರಾಂ ತೂಕವಿರುವ 7 ಚಿನ್ನದ ಲಕ್ಷ್ಮೀ ಪದಕವಿರುವ ಮಾಲೆಯನ್ನು ಕಳ್ಳತನ ಮಾಡಿಕೊಂಡು ಹೋಗಿದ್ದು ಕಳವಾದ ಸೊತ್ತುಗಳ ಅಂದಾಜು ಮೌಲ್ಯ 35,000 ರೂ. ಆಗಿತ್ತು.
ಮೇಲಧಿಕಾರಿಗಳ ಮಾರ್ಗದರ್ಶನದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ ನಿರೀಕ್ಷಕ ಶ್ರೀಧರ್ ವಿ. ಸತಾರೆ ನೇತೃತ್ವದಲ್ಲಿ ಪತ್ತೆ ಕಾರ್ಯ ಕೈಗೊಂಡು ತನಿಖೆ ನಡೆಸಿದ್ದು, ಎಸ್‌ಐ ಪುನೀತ್ ಕುಮಾರ್ ಬಿ.ಇ., ಈರಣ್ಣ ಶಿರಗುಂಪಿ, ಭರತೇಶ್ ಕಂಕಣವಾಡಿ, ಸಿಬಂದಿಯವರಾದ ಸುರೇಶ್ ಮೆಂಡನ್ , ಹರೀಶ್ ಮಾಳ, ಆನಂದ ಎಸ್., ಹೇಮಂತ್‌ಕುಮಾರ್ ಎಂ.ಆರ್., ಶಿವಕುಮಾರ್ ಹಾಗೂ ತಾಂತ್ರಿಕ ವಿಭಾಗದ ಸಿಬಂದಿ ದಿನೇಶ್ ಮತ್ತು ನಿತಿನ್ ಕುಮಾರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಆರೋಪಿ ಮೇಲೆ
15ಕ್ಕೂ ಅಧಿಕ ಪ್ರಕರಣ
ಪೊಲೀಸರ ವಿಶೇಷ ತಂಡವು ಆ. 24ರಂದು ಆರೋಪಿಯನ್ನು ಉಡುಪಿಯ ಕೃಷ್ಣ ಮಠದ ರಾಜಾಂಗಣದ ಬಳಿ ಬೈಕ್ ಸಹಿತ ವಶಕ್ಕೆ ಪಡೆದು ಕೊಂಡಿದ್ದಾರೆ. ಆರೋಪಿಯು ನಗರ ಪೊಲೀಸ್ ಠಾಣೆಯ ವ್ಯಾಪ್ತಿಯ್ಲಿ ಕಳವು ಮಾಡಿದ್ದ ಒಟ್ಟು 35,964ರೂ. ಮೌಲ್ಯದ 5.400 ಗ್ರಾಂ ಚಿನ್ನಾಭರಣ ಹಾಗೂ ಕಳವು ಮಾಡಲು ಬಳಸಿದ ಹೀರೋ ಹೊಂಡಾ ಸ್ಪೆಂಡರ್ ಪ್ಲಸ್ ಬೈಕ್ ಮತ್ತು ಕಬ್ಬಿಣದ ರಾಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯ ವಿರುದ್ಧ ಈಗಾಗಲೇ ಹಾಸನ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ 15 ಕ್ಕೂ ಹೆಚ್ಚಾ ಪ್ರಕರಣಗಳು ದಾಖಲಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal: ಸಾಲದಿಂದ ಬೇಸತ್ತು ಮಹಿಳೆ ಆತ್ಮಹ*ತ್ಯೆ
AjekarCase: ತನಿಖೆ ದಿಕ್ಕು ತಪ್ಪುತ್ತಿದೆ: ದಿಲೀಪ್ ತಂದೆ ವಿರುದ್ದ ಬಾಲಕೃಷ್ಣ ಮನೆಯವರ ಆರೋಪ
Katpadi: ಭತ್ತದ ತೆನೆಯಿಂದಲೇ ಆಟೋ ರಿಕ್ಷಾ ಅಲಂಕರಿಸಿ ಸಂಭ್ರಮಿಸಿದ ಚಾಲಕ
Udupi: ಗೀತಾರ್ಥ ಚಿಂತನೆ-83: ಅಪೇಕ್ಷಿತ-ಅನಪೇಕ್ಷಿತ ವಂಶವಾಹಿಗಳು
Congress Govt.,: ರಾಜ್ಯ ಸರಕಾರದ ವಿರುದ್ಧ ಮೂರು ಹಂತದ ಪ್ರತಿಭಟನೆ: ಕಿಶೋರ್
MUST WATCH
ಹೊಸ ಸೇರ್ಪಡೆ
Pro Kabaddi;ಬೆಂಗಳೂರು ಬುಲ್ಸ್ ಜಯಭೇರಿ: ತಮಿಳ್ ತಲೈವಾಸ್‌ಗೆ 32-36 ಅಂಕಗಳ ಸೋಲು
Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡರ್ ಸ್ಫೋ*ಟ: ಅಪಾರ ಹಾನಿ
Kasaragod: ಪಟಾಕಿ ದುರಂತ ಪ್ರಕರಣ; ಸಾವಿನ ಸಂಖ್ಯೆ 4ಕ್ಕೆ ಏರಿಕೆ
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
Manipal: ಸಾಲದಿಂದ ಬೇಸತ್ತು ಮಹಿಳೆ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.