Udupi: ಕೊನೆಗೂ ಮಗನನ್ನು ಸೇರಿದ ತಾಯಿ
Team Udayavani, Oct 2, 2024, 1:17 AM IST
ಉಡುಪಿ: ಮಾನಸಿಕ ಅಸ್ವಸ್ಥರಾಗಿದ್ದ ಮಹಿಳೆಯನ್ನು ಇಪ್ಪತ್ತು ದಿನಗಳ ಹಿಂದೆ ಸಮಾಜ ಸೇವಕ ವಿಶು ಶೆಟ್ಟಿಯವರು ರಕ್ಷಿಸಿ ಬಾಳಿಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಸಖೀ ಕೇಂದ್ರದ ನೆರವಿನಿಂದ ಮಗನಿಗೆ ಹಸ್ತಾಂತರಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಹಿಳೆ ಕಮಲಮ್ಮ (50) ಮೂಲತಃ ಹುಬ್ಬಳ್ಳಿಯವರಾಗಿದ್ದು ಕೆಲವು ದಿನ ಗಳಿಂದ ನಗರದಲ್ಲಿ ಸುತ್ತಾಡಿಕೊಂಡು ಅಸಹಾಯಕರಾಗಿ ಮಾನಸಿಕ ಖಿನ್ನತೆ ಗೊಳಗಾಗಿದ್ದರು. ರಾತ್ರಿ ಹೊತ್ತು ರಸ್ತೆ ಬದಿ ದುಃಖದಿಂದ ಇದ್ದ ಇವರನ್ನು ವಿಶು ಶೆಟ್ಟಿಯವರು ಬಾಳಿಗಾ ಆಸ್ಪತ್ರೆಗೆ ದಾಖಲಿಸಿದ್ದರು. 15 ದಿನಗಳ ಚಿಕಿತ್ಸೆಗೆ ಸ್ಪಂದಿಸಿದ ಮಹಿಳೆಯನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಿ ಕುಟುಂಬಿಕರು ಪತ್ತೆಯಾಗದ ಹಿನ್ನೆಲೆಯಲ್ಲಿ ಸಖಿ ಕೇಂದ್ರಕ್ಕೆ ದಾಖಲಿಸಿದ್ದರು. ಮಹಿಳೆ ನೀಡಿದ ಮಾಹಿತಿ ಮೇರೆಗೆ ಮನೆಯವರ ಪತ್ತೆಗಾಗಿ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಬಿತ್ತರಿಸಲಾಗಿತ್ತು. ಸಖೀ ಕೇಂದ್ರದ ಸಿಬಂದಿ ಮಹಿಳೆ ನೀಡಿದ ಮಾಹಿತಿಯ ಅನುಸಾರ ಹುಬ್ಬಳ್ಳಿ- ಧಾರವಾಡದಲ್ಲಿ ಮನೆಯವರ ಪತ್ತೆಗಾಗಿ ಪ್ರಯತ್ನಿಸಿ ಕುಟುಂಬಿಕರನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದರು.
ಮಹಿಳೆಯ ಮಗ ಹುಬ್ಬಳ್ಳಿಯಿಂದ ಉಡುಪಿಗೆ ಆಗಮಿಸಿ ಮಹಿಳೆಯನ್ನು ವಶಕ್ಕೆ ಪಡೆದು ಊರಿಗೆ ಕರೆದುಕೊಂಡು ಹೋಗಿದ್ದಾರೆ.
ಮಹಿಳೆಯ ರಕ್ಷಣ ಕಾರ್ಯದಲ್ಲಿ ಮಹಿಳಾ ಪೊಲೀಸ್ ಠಾಣೆಯ ಸಿಬಂದಿ, ಜಯಶ್ರೀ ಉದ್ಯಾವರ, ಬಾಳಿಗಾ ಆಸ್ಪತ್ರೆ ವೈದ್ಯರು, ಸಿಬಂದಿ, ಸಖಿ ಕೇಂದ್ರದ ಸಿಬಂದಿ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Udupi: ಗೀತೆಯ ಸಂದೇಶ ಪ್ರತೀ ಮನೆಯನ್ನೂ ಪ್ರವೇಶಿಸಲಿ: ಕಾಂಚಿ ಶ್ರೀ
Udupi: ಎಂಜಿಎಂ ಕಾಲೇಜಿನಲ್ಲಿ ನ.29 ರಿಂದ ಡಿ.1ವರೆಗೆ ಅಮೃತ ಮಹೋತ್ಸವ ಸಂಭ್ರಮ
Udupi: ಗೀತಾರ್ಥ ಚಿಂತನೆ-100: ಸತ್ತಾಗ ದುಃಖ, ಸಾಯುತ್ತಿರುವಾಗಲ್ಲ!
Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ
MUST WATCH
ಹೊಸ ಸೇರ್ಪಡೆ
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.