![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 5, 2024, 8:05 PM IST
ಉಡುಪಿ: ನಗರಾಭಿವೃದ್ಧಿ ಇಲಾಖೆಯು ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ಪಟ್ಟಿಯನ್ನು ಇಂದು (ಸೋಮವಾರ) ಪ್ರಕಟಿಸಿದೆ.
61 ನಗರಸಭೆ, 123 ಪುರಸಭೆ ಹಾಗೂ 117 ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ ಉಪಾಧ್ಯಕ್ಷ ಹುದ್ದೆಗಳಿಗೆ ರಾಜ್ಯ ಸರ್ಕಾರ ಮೀಸಲಾತಿ ಪ್ರಕಟಿಸಿದೆ.
ಉಡುಪಿ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಕಾಪು ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಜೆ ಪರಿಶಿಷ್ಟ ಜಾತಿ, ಕಾರ್ಕಳ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಕುಂದಾಪುರ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಸಾಲಿಗ್ರಾಮ ಪಟ್ಟಣ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ (ಎ) ಮಹಿಳೆ ಹಾಗೂ ಬೈಂದೂರು ಪಟ್ಟಣ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಬಿ ಮೀಸಲಾತಿ ಪ್ರಕಟವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆ
ಮಂಗಳೂರು: ಪುತ್ತೂರು ನಗರಸಭೆ ಅಧ್ಯಕ್ಷ ಸ್ಥಾನಕ್ಕೆ “ಎಸ್‌ಸಿ (ಮಹಿಳೆ), ಉಪಾಧ್ಯಕ್ಷ ಸ್ಥಾನಕ್ಕೆ “ಸಾಮಾನ್ಯ’, ಉಳ್ಳಾಲ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ “ಎಸ್‌ಸಿ’ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ “ಹಿಂದುಳಿದ ವರ್ಗ ಎ (ಮಹಿಳೆ) ಮೀಸಲಾತಿ ಪ್ರಕಟಗೊಂಡಿದೆ.
ಬಂಟ್ವಾಳ ಪುರಸಭೆಯ ಅಧ್ಯಕ್ಷ ಸ್ಥಾನಕ್ಕೆ “ಸಾಮಾನ್ಯ’ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ “ಹಿಂದುಳಿದ ವರ್ಗ ಎ’ ಮೀಸಲಾತಿ ಪ್ರಕಟವಾಗಿದೆ. ಮೂಡುಬಿದಿರೆ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ “ಹಿಂದುಳಿದ ವರ್ಗ ಎ (ಮಹಿಳೆ)’ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ “ಸಾಮಾನ್ಯ’ ಮೀಸಲಾತಿ ಬಂದಿದೆ.
ಬಜಪೆ ಪಟ್ಟಣ ಪಂಚಾಯತ್‌ನ ಅಧ್ಯಕ್ಷ ಸ್ಥಾನಕ್ಕೆ “ಹಿಂದುಳಿದ ವರ್ಗ ಎ’ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ “ಹಿಂದುಳಿದ ವರ್ಗ ಬಿ (ಮಹಿಳೆ)’, ಬೆಳ್ತಂಗಡಿ ಪ. ಪಂ. ಅಧ್ಯಕ್ಷ ಸ್ಥಾನಕ್ಕೆ “ಸಾಮಾನ್ಯ’ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ “ಸಾಮಾನ್ಯ ಮಹಿಳೆ’, ಕಡಬ ಪ. ಪಂ. ಅಧ್ಯಕ್ಷ ಸ್ಥಾನಕ್ಕೆ “ಹಿಂದುಳಿದ ವರ್ಗ ಎ (ಮಹಿಳೆ), ಉಪಾಧ್ಯಕ್ಷ ಸ್ಥಾನಕ್ಕೆ “ಸಾಮಾನ್ಯ ಮಹಿಳೆ’, ಕಿನ್ನಿಗೋಳಿ ಪ. ಪಂ. ಅಧ್ಯಕ್ಷ ಸ್ಥಾನಕ್ಕೆ “ಹಿಂದುಳಿದ ವರ್ಗ ಎ’ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ “ಸಾಮಾನ್ಯ’ ಮೀಸಲಾತಿ ಬಂದಿದೆ.
ಕೋಟೆಕಾರ್ ಪ. ಪಂ. ಅಧ್ಯಕ್ಷ ಸ್ಥಾನಕ್ಕೆ “ಸಾಮಾನ್ಯ’ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ “ಹಿಂದುಳಿದ ವರ್ಗ ಎ’, ಮೂಲ್ಕಿ ಪ. ಪಂ. ಅಧ್ಯಕ್ಷ ಸ್ಥಾನಕ್ಕೆ “ಸಾಮಾನ್ಯ’, ಉಪಾಧ್ಯಕ್ಷ ಸ್ಥಾನಕ್ಕೆ “ಸಾಮಾನ್ಯ ಮಹಿಳೆ’, ಸುಳ್ಯ ಪ. ಪಂ. ಅಧ್ಯಕ್ಷ ಸ್ಥಾನಕ್ಕೆ “ಸಾಮಾನ್ಯ ಮಹಿಳೆ’, ಉಪಾಧ್ಯಕ್ಷ ಸ್ಥಾನಕ್ಕೆ “ಸಾಮಾನ್ಯ’, ವಿಟ್ಲ ಪ. ಪಂ. ಅಧ್ಯಕ್ಷ ಸ್ಥಾನಕ್ಕೆ “ಹಿಂದುಳಿದ ವರ್ಗ ಬಿ’, ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ ಮಹಿಳೆ)
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.