Udupi: ಕಳವು ಪ್ರಕರಣದ ಆರೋಪಿ ಬಂಧನ
Team Udayavani, Aug 26, 2024, 8:56 PM IST
ಉಡುಪಿ: ಕರಾವಳಿ ಬೈಪಾಸ್ ಬಳಿ ನಡೆದ ಕಳ್ಳತನ ಪ್ರಕರಣದ ಆರೋಪಿ ಬಾಗಲಕೋಟೆಯ ಯಲ್ಲಪ್ಪ ಮಲ್ಲಪ್ಪಬೋವಿ(37)ಯನ್ನು ಪೊಲೀಸರು ಬಂಧಿಸಿದ್ದಾರೆ.
ಆ.7ರಂದು ಕರಾವಳಿ ಬೈಪಾಸ್ ಬಳಿ ಇರುವ ಈಜಿ ಲೈಫ್ ಕೃಷಿ ಯಂತ್ರೋಪಕರಣಗಳ ಮಾರಾಟ ಸಂಸ್ಥೆಯಲ್ಲಿ ಚಾಲಕರಾಗಿರುವ ಯಲ್ಲಪ್ಪ ಬೋವಿರವರು ಸಂಸ್ಥೆಯ ಮಾಲಕತ್ವದ ಬಜಾಜ್ ಗೂಡ್ಸ್‌ನಲ್ಲಿ ಅವರದೇ ತೀರ್ಥಹಳ್ಳಿಯಲ್ಲಿರುವ ಇನ್ನೊಂದು ಶಾಖೆಯಿಂದ ವಿವಿಧ ಬಗೆಯ ಸಾಮಗ್ರಿಗಳನ್ನು ತುಂಬಿಕೊಂಡು ಉಡುಪಿ ಶಾಖೆಗೆ ತಂದು ಆ.4ರಂದು ನಿಲ್ಲಿಸಿದ್ದರು.
ಆ.5ರಂದು ಬೆಳಗ್ಗೆ ಸಂಸ್ಥೆಯಲ್ಲಿ ಕೆಲಸ ಮಾಡುವ ಶ್ರೇಯಸ್ ಅವರು ಗೂಡ್ಸ್ ರಿಕ್ಷಾದಲ್ಲಿದ್ದ ವಸ್ತುಗಳನ್ನು ತೆಗೆಯುತ್ತಿದ್ದ ಸಮಯ ಅದರಲ್ಲಿದ್ದ 12ಬಗೆಯ ವಸ್ತುಗಳನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು, ಕಳವಾದ ಸೊತ್ತುಗಳ ಒಟ್ಟು ಮೌಲ್ಯ 6 ಲ.ರೂ.ಗಳಾಗಿದ್ದವು. ಈ ಬಗ್ಗೆ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಆರೋಪಿ ಮತ್ತು ಸೊತ್ತು ಪತ್ತೆಯ ಬಗ್ಗೆ ಉಡುಪಿ ಠಾಣೆಯ ಪಿಎಸ್‌ಐ ಈರಣ್ಣ ಶಿರಗುಂಪಿ, ಸಿಬಂದಿಗಳಾದ ಆನಂದ, ಶಿವಕುಮಾರ್ ಅವರನ್ನು ವಿಶೇಷ ಕರ್ತವ್ಯದಲ್ಲಿ ನೇಮಿಸಲಾಗಿದ್ದು, ಆರೋಪಿಯನ್ನು ಹಾಗೂ ಕಳವು ಮಾಡಿ ಉಡುಪಿ ಆದಿ ಉಡುಪಿ ಎಪಿಎಂಸಿ ಗೋದಾಮು ಕಟ್ಟಡಗಳ ಸಂಧಿನಲ್ಲಿ ಬಚ್ಚಿಟ್ಟಿದ್ದ 6 ಲ.ರೂ.ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹಿರಿಯಡ್ಕದ ಜಿಲ್ಲಾ ಕಾರಾಗೃಹಕ್ಕೆ ರವಾನಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Udupi: ಗೀತೆಯ ಸಂದೇಶ ಪ್ರತೀ ಮನೆಯನ್ನೂ ಪ್ರವೇಶಿಸಲಿ: ಕಾಂಚಿ ಶ್ರೀ
Udupi: ಎಂಜಿಎಂ ಕಾಲೇಜಿನಲ್ಲಿ ನ.29 ರಿಂದ ಡಿ.1ವರೆಗೆ ಅಮೃತ ಮಹೋತ್ಸವ ಸಂಭ್ರಮ
Udupi: ಗೀತಾರ್ಥ ಚಿಂತನೆ-100: ಸತ್ತಾಗ ದುಃಖ, ಸಾಯುತ್ತಿರುವಾಗಲ್ಲ!
Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Border Gavaskar Trophy: ಕಾಂಗರೂ ಚಾಲೆಂಜ್ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.