Udupi: ಪತ್ತೆಯಾಗದ ಮುಸುಕುಧಾರಿ ಕಳ್ಳರು
ಉಡುಪಿ ಇನ್‌ಸ್ಪೆಕ್ಟರ್ ನೇತೃತ್ವದಲ್ಲಿ ವಿಶೇಷ ತಂಡ ರಚನೆ, ಸಿಸಿಟಿವಿ ಸಹಿತ ಇತರ ತಾಂತ್ರಿಕ ಪರಿಶೀಲನೆ
Team Udayavani, Aug 3, 2024, 11:47 PM IST
ಉಡುಪಿ: ಉಡುಪಿಯ ಬ್ರಹ್ಮಗಿರಿಯಲ್ಲಿರುವ ಮೂರು ಅಪಾರ್ಟ್‌ಮೆಂಟ್‌ಗಳಿಗೆ ಜು. 31ರ ತಡರಾತ್ರಿ ನಾಲ್ಕೈದು ಮಂದಿ
ಮುಸುಕುಧಾರಿಗಳು ಮಾರಕಾಯುಧಗಳೊಂದಿಗೆ ತೆರಳಿ ಕಳ್ಳತನ ಮಾಡಿದ ಘಟನೆಗೆ ಸಂಬಂಧಿಸಿ ತನಿಖೆ ಮುಂದುವರಿದಿದ್ದು, ಇನ್ನೂ ಯಾವುದೇ ಸುಳಿವು ಲಭ್ಯವಾಗಿಲ್ಲ ಎಂದು ಪೊಲೀಸ್ ಇಲಾಖೆ ಮೂಲಗಳಿಂದ ತಿಳಿದು ಬಂದಿದೆ.
ಸಿಸಿಟಿವಿ ದೃಶ್ಯಾವಳಿಯಿಂದ ಘಟನೆ ಬೆಳಕಿಗೆ ಬಂದಿದ್ದು, ತಮ್ಮ ಮುಖವನ್ನು ಬಟ್ಟೆಯಿಂದ ಮುಚ್ಚಿಕೊಂಡು ಫ್ಲ್ಯಾಟ್‌ನ ಒಳಗೆ ನುಗ್ಗಿ ಕಳ್ಳತನ ಯತ್ನಿಸುತ್ತಿರುವ ಬಗ್ಗೆ ತಿಳಿದು ಬಂದಿತ್ತು. ಆರೋಪಿಗಳ ಪತ್ತೆಗಾಗಿ ಉಡುಪಿ ಇನ್‌ಸ್ಪೆಕ್ಟರ್ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದ್ದು, ಸಿಸಿಟಿವಿ ಸಹಿತ ಇತರ ತಾಂತ್ರಿಕ ಪರಿಶೀಲನೆ ನಡೆಯುತ್ತಿದ್ದು, ಎಲ್ಲ ಆಯಾಮಗಳಿಂದ ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಬೀಟ್ ವ್ಯವಸ್ಥೆ ಬಿಗಿ
ಜಿಲ್ಲೆಯ ಎಲ್ಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೀಟ್ ವ್ಯವಸ್ಥೆ ಬಿಗುಗೊಳಿಸಲಾಗಿದೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಮನೆ ಕಳ್ಳತನ ಮತ್ತು ಚೈನ್ ಸ್ನ್ಯಾಚಿಂಗ್ ಗಣನೀಯ ಕಡಿಮೆಯಾಗಿದೆ. 2022ರಲ್ಲಿ 16 ಕೊಲೆ, ಸರಕಳ್ಳತನ 8, ಹಗಲು ಮನೆ ಕಳ್ಳತನ 15, ರಾತ್ರಿ ಮನೆಕಳ್ಳತನ 96, 2023ರಲ್ಲಿ 12 ಕೊಲೆ, ಸರಕಳ್ಳತನ 10, ಹಗಲು ಮನೆ ಕಳ್ಳತನ 17, ರಾತ್ರಿ ಮನೆಕಳ್ಳತನ 80, ಈ ವರ್ಷ 2024 ರ ಜು.31 ರವರೆಗೆ 2 ಕೊಲೆ, ಸರಕಳ್ಳತನ 2, ಹಗಲು ಮನೆ ಕಳ್ಳತನ 11, ರಾತ್ರಿ ಮನೆಕಳ್ಳತನ 43 ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಪೊಲೀಸ್ ಡಾ. ಅರುಣ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.