Udupi video case: ಸಿಐಡಿ ಮೊದಲ ಹಂತದ ತನಿಖೆ ಪೂರ್ಣ
Team Udayavani, Aug 16, 2023, 11:29 PM IST
ಉಡುಪಿ: ಇಲ್ಲಿನ ಕಾಲೇಜಿನ ಬಾಲಕಿಯರ ಶೌಚಾಲಯದಲ್ಲಿ ನಡೆದ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂ ಧಿಸಿ ಮೊದಲ ಹಂತದ ಸಿಐಡಿ ತನಿಖೆ ಪೂರ್ಣಗೊಂಡಿದ್ದು, ಅಧಿಕಾರಿಗಳು ಬೆಂಗಳೂರಿಗೆ ತೆರಳಿದ್ದಾರೆ.
ಸಿಐಡಿ ತನಿಖಾಧಿಕಾರಿ ಡಿವೈಎಸ್ಪಿ ಅಂಜುಮಾಲಾ ನಾಯಕ್ ಅವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಸಂತ್ರಸ್ತೆ ಹಾಗೂ ಆರೋಪಿತರ ವಿಚಾರಣೆ ನಡೆಸಿ ಹೇಳಿಕೆ ಪಡೆದುಕೊಂಡಿದ್ದಾರೆ. ಈ ಹಿಂದೆ ಪೊಲೀಸರು ನಡೆಸಿದ ತನಿಖೆಗಳ ಮಾಹಿತಿಯನ್ನೂ ಸಂಗ್ರಹಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ ಮೊಬೈಲ್, ಸಿಸಿ ಟಿವಿ ದೃಶ್ಯಾವಳಿ ಸಹಿತ ಕೆಲ ತಾಂತ್ರಿಕ ವಿಚಾರಗಳ ಎಫ್ಎಸ್ಎಲ್ ವರದಿಗೆ ಸಿಐಡಿ ಅಧಿಕಾರಿಗಳು ಕಾಯುತ್ತಿದ್ದು, ಈ ವರದಿ ಕೆಲವೇ ದಿನಗಳಲ್ಲಿ ಸಿಐಡಿಗೆ ಸಿಗಲಿದೆ ಎಂದು ಮೂಲಗಳಿಮದ ತಿಳಿದು ಬಂದಿದೆ.
ಇತ್ತೀಚೆಗೆ ಉಡುಪಿಗೆ ಸಿಐಡಿ ಎಡಿಜಿಪಿ ಮನೀಶ್ ಕರ್ಬೀಕರ್ ಹಾಗೂ ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ ಉಡುಪಿಗೆ ಭೇಟಿ ಸಿಐಡಿ ಮತ್ತು ಉಡುಪಿ ಪೊಲೀಸ್ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿ, ಹಿಂದಿನ ತನಿಖಾ ಕಾರಿಗಳಿಂದಲೂ ಪ್ರಕರಣಕ್ಕೆ ಸಂಬಂಧಿ ಸಿ ವಿವರಗಳನ್ನು ಸಂಗ್ರಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.