Udupi: ಉಡುಪಿ ರಸ್ತೆಯ ಹೊಂಡ ಅಳತೆಗೈದ ಯಮಧರ್ಮ-ಚಿತ್ರಗುಪ್ತ!
ಪ್ರೇತಾತ್ಮದಿಂದ ರಸ್ತೆಯ ಗುಂಡಿಯ ಲಾಂಗ್‌ಜಂಪ್, ಶ್ರೀಕೃಷ್ಣಜನ್ಮಾಷ್ಟಮಿ ಪ್ರಯುಕ್ತ ವಿಶಿಷ್ಟವಾಗಿ ಪ್ರತಿಭಟಿಸಿದ ವೇಷಧಾರಿಗಳು
Team Udayavani, Aug 27, 2024, 6:07 PM IST
ಉಡುಪಿ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಗರದಲ್ಲಿವಿವಿಧ ವೇಷ ಭೂಷಣಗಳ ತೊಟ್ಟು ವಿನೋದಾವಳಿ ಪ್ರದರ್ಶಿಸುತ್ತಿದ್ದರೆ, ಈ ವೇಷಧಾರಿಗಳು ಹಲವು ದಿನಗಳಿಂದ ಸಾರ್ವಜನಿಕರಿಗೆ ಸಂಚರಿಸಲು ಸಮಸ್ಯೆಯಾಗಿರುವ ರಸ್ತೆಗಳ ದುರಸ್ತಿಗಾಗಿ ಆಗ್ರಹಿಸಿ ವಿಶಿಷ್ಟವಾಗಿ ಪ್ರತಿಭಟಿಸಿ ಜನರ ಗಮನ ಸೆಳೆದಿದ್ದಾರೆ.
ಈ ರಸ್ತೆಯಲ್ಲಿ ಸಂಚರಿಸಿದರೆ ಅಪಾಯ ಖಚಿತ.. ಯಮಧರ್ಮನೂ ಅಳತೆ ಮಾಡುವಷ್ಟು ಗುಂಡಿಗಳು ಬಿದ್ದಿವೆ.. ಇದು ಆದಿ ಉಡುಪಿ-ಮಲ್ಪೆೆ ಸಂಪರ್ಕಿಸುವ ರಸ್ತೆಯಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಸಂದರ್ಭದಲ್ಲಿ ವೇಷಧಾರಿಗಳು ಯಮಧರ್ಮ, ಚಿತ್ರಗುಪ್ತ ಹಾಗೂ ಪ್ರೇತಾತ್ಮದ ವೇಷತೊಟ್ಟು ರಸ್ತೆಯಲ್ಲಿ ಲಾಂಗ್‌ಜಂಪ್ ಮಾಡುವ ಮೂಲಕ ಅಪಾಯ ಕಟ್ಟಿಟ್ಟಬುತ್ತಿ ಎಂದು ಸಾರುವ ಅಣಕು ಪ್ರದರ್ಶಿಸಿ ವಿಶಿಷ್ಟವಾಗಿ ಪ್ರತಿಭಟಿಸಿದ ದೃಶ್ಯ ಜನರ ಗಮನಸೆಳೆಯಿತು.
ಸಾರ್ವಜನಿಕರಿಂದ ಬೆಂಬಲ:
ಯಮಧರ್ಮ, ಚಿತ್ರಗುಪ್ತ ಹಾಗೂ ಪ್ರೇತಾತ್ಮದ ವೇಷತೊಟ್ಟು ರಸ್ತೆಯಲ್ಲಿ ಲಾಂಗ್‌ಜಂಪ್ ಮಾಡುತ್ತಿದ್ದರೆ ನೆರೆದವರು ಶಿಳ್ಳೆೆ-ಸೀಟಿ ಹೊಡೆದು ಸಾಥ್ ನೀಡಿದರು. ಯಾವ ಪ್ರೇತ ಎಷ್ಟು ದೂರು ಜಂಪ್ ಮಾಡಿದೆ ಎಂಬುದು ಯಮಧರ್ಮವೇಷ ಧರಿಸಿದ ವೇಷಧಾರಿ ಅಳತೆ ಮಾಪನದ ಮೂಲಕ ಗುರುತಿಸಿದ ಘಟನೆ ನಡೆಯಿತು. ಹಲವು ಸಮಯದಿಂದ ರಸ್ತೆಯಲ್ಲಿನ ಹೊಂಡ- ಗುಂಡಿಗಳಿಂದಾಗಿ ಸಾರ್ವಜನಿಕರು ರಸ್ತೆೆಯಲ್ಲಿ ಸಂಚರಿಸುವುದೇ ದುಸ್ತರವಾಗಿತ್ತು.
ಇಲ್ಲಿನ ರಸ್ತೆೆ ಸಮಸ್ಯೆೆಯ ಬಗ್ಗೆೆ ಹಲವಾರು ಬಾರಿ ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತದ ಗಮನಕ್ಕೆೆ ತಂದರೂ ಪ್ರಯೋಜನವಾಗಿಲ್ಲ. ಉಡುಪಿಯ ವಿಶೇಷ ಹಬ್ಬವಾದ ಶ್ರೀಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ವೇಷಧಾರಿಗಳು ವಿನೂತನ ಪ್ರತಿಭಟನೆ ನಡೆಸಿ ಗಮನಸೆಳೆಯುವ ಕೆಲಸ ಮಾಡಿದ್ದು, ಇನ್ನಾದರೂ ಸಂಬಂಧಪಟ್ಟವರು ಇತ್ತ ಗಮನಹರಿಸಿ ಇಲ್ಲಿನ ಹೊಂಡ-ಗುಂಡಿ ರಸ್ತೆೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.