Udupi ಜಿಲ್ಲಾ ಪಂಚಾಯತ್ ಗೆ ದೇಶದ ಸರ್ವೋತ್ತಮ ಜಿ.ಪಂ. ಗರಿ
Team Udayavani, Dec 10, 2024, 1:31 AM IST
ಉಡುಪಿ: ಶಿಕ್ಷಣ, ಆರ್ಥಿಕ ಕ್ರೋಢೀಕರಣ ಸಹಿತ ವಿವಿಧ ವಿಷಯ ಗಳಲ್ಲಿನ ವಿಶೇಷ ಸಾಧನೆಗಾಗಿ ಕೇಂದ್ರ ಸರಕಾರದ ಪಂಚಾಯತ್‌ರಾಜ್ ಇಲಾಖೆಯ ರಾಷ್ಟ್ರೀಯ ಪುರಸ್ಕಾರಕ್ಕೆ ಉಡುಪಿ ಜಿ.ಪಂ. ಆಯ್ಕೆಯಾಗಿದೆ.
ಡಿ.11ರಂದು ದಿಲ್ಲಿಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದ್ದು, ಜಿ.ಪಂ. ಸಿಇಒ ಪ್ರತೀಕ್ ಬಾಯಲ್ 2 ಕೋ.ರೂ. ನಗದಿನ ಪ್ರಶಸ್ತಿ ಸ್ವೀಕರಿಸುವರು.
ಈ ಹಣವನ್ನು ಯಾವ ಉದ್ದೇಶಕ್ಕೆ ಬಳಸಬೇಕು ಎಂಬುದರ ಮಾರ್ಗ ಸೂಚಿಯನ್ನು ಇಲಾಖೆ ನೀಡಲಿದೆ. ಈ ಮೂಲಕ ಉಡುಪಿಯು ದೇಶದ ಸರ್ವೋತ್ತಮ ಜಿ.ಪಂ. ಹೆಗ್ಗಳಿಕೆಗೆ ಪಾತ್ರವಾಗಿದೆ.
ಉಡುಪಿಯ ಸಾಧನೆಯ ಹಾದಿ
ಉಡುಪಿಯು 155 ಗ್ರಾ. ಪಂ. ಹೊಂದಿದ್ದು, ಪ್ರತಿ ಸೋಮವಾರ ಜಿಪಂ ಸಿಇಒ ಗ್ರಾ.ಪಂ. ಗಳ ನೀರು ಪೂರೈಕೆ ಸಹಿತ ವಿವಿಧ ಕಾರ್ಯಯೋಜನೆ ಅನುಷ್ಠಾನ ಏಜೆನ್ಸಿಗಳೊಂದಿಗೆ ಪ್ರಗತಿ ಪರಿಶೀಲಿಸುತ್ತಿದ್ದರು. ಬಳಿಕ ಸಮಸ್ಯೆಗಳ ಪರಿಹಾರಕ್ಕೆ ತಿಂಗಳಿಗೆ 2 ಬಾರಿ ಜಿಲ್ಲಾಧಿಕಾರಿಗಳ ಜತೆ ಸಭೆ, ಇಲಾಖೆಗಳ ಜತೆ ಸಮನ್ವಯ, ಅಭಿವೃದ್ಧಿಗಾಗಿ ಕಳೆದ ವರ್ಷದ ಸೂಚ್ಯಂಕದ ಆಧಾರದಲ್ಲಿ ಯೋಜನೆ ರೂಪಿಸಿ ಅನುಷ್ಠಾನ,ವಾರ್ಡ್ ಸಭೆ, ಗ್ರಾಮ ಸಭೆ, ಜಮಾಬಂದಿಗೆ ಒತ್ತು, ಶಾಲಾಭಿವೃದ್ಧಿಗೆ ಪ್ರತ್ಯೇಕ ಸಮಿತಿ ರಚನೆ, ಶೈಕ್ಷಣಿಕ ಕಾರ್ಯಕ್ರಮ ಅನುಷ್ಠಾನ ಗುಣಮಟ್ಟ ಪರಿಶೀಲನೆ, ಶಿಶು, ಗರ್ಭಿಣಿ ಮರಣ ಸಂಭವಿಸ ದಂತೆ ನಿಗಾ, ಅಪೌಷ್ಟಿಕತೆ ನಿವಾರಣೆ, ಸಾಂಕ್ರಾಮಿಕ ರೋಗಗಳ ಸಮರ್ಥ ನಿರ್ವಹಣೆ ಇತ್ಯಾದಿ ಕ್ರಮಗಳಿಗೆ ಈ ಪ್ರಶಸ್ತಿ ಸಂದಿದೆ.
ಸಂಪನ್ಮೂಲ ಕ್ರೋಢೀಕರಣಕ್ಕೆ ಒತ್ತು ನೀಡಿ ಶೇ.90ಕ್ಕೂ ಜಾಸ್ತಿ ತೆರಿಗೆ ವಸೂಲು, ಆನ್‌ಲೈನ್ ತೆರಿಗೆ ಪಾವತಿಗೆ ಕ್ರಮ, ತ್ಯಾಜ್ಯ ನಿರ್ವಹಣೆಯಲ್ಲಿ ದೇಶಕ್ಕೆ ಮಾದರಿ, ಗ್ರಾಮೀಣ ಭಾಗದಲ್ಲಿ ಎಂಆರ್‌ಎಫ್ ಘಟಕ ಸ್ಥಾಪನೆ, ಆನ್‌ಲೈನ್ ಮೂಲಕ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ನೀಟ್, ಸಿಇಟಿ ಕೋಚಿಂಗ್ ಮೂಲಕ ಎಸೆಸೆಲ್ಸಿ, ಪಿಯುಸಿಯಲ್ಲಿ ಅಗ್ರಸ್ಥಾನ ಪಡೆದದ್ದು, ಸಂಜೀವಿನಿ ಸಂಘಗಳ ಮೂಲಕ ಹಡಿಲು ಭೂಮಿ ಕೃಷಿ, ಇತ್ಯಾದಿ ಕ್ರಮಗಳಿಗೆ ನಾನಾಜಿ ದೇಶ್‌ಮುಖ್ ಸರ್ವೋತ್ತಮ ಪಂಚಾಯತ್ ಪ್ರಶಸ್ತಿಗೆ 3ನೇ ಅತ್ಯುತ್ತಮ ಜಿಲ್ಲೆಯಾಗಿ ಆಯ್ಕೆಯಾಗಿದೆ ಎಂದು ಜಿ.ಪಂ. ಸಹಾಯಕ ಕಾರ್ಯದರ್ಶಿ ಪ್ರಶಾಂತ್ ಅವರು ಮಾಹಿತಿ ನೀಡಿದರು.
ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾ.ಪಂ.ಗೆ ಪ್ರಥಮ ಸ್ಥಾನ ಬಂದಿದ್ದು, 1 ಕೋ.ರೂ. ಬಹುಮಾನಪಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal: ಡಂಪಿಂಗ್ ಯಾರ್ಡ್ ಆದ ಮಣ್ಣಪಳ್ಳ!
Udupi: ಒಂದೇ ವೃತ್ತ; ಪೊಲೀಸ್ ಚೌಕಿ 5!; ಕಲ್ಸಂಕ ಜಂಕ್ಷನ್‌ನಲ್ಲಿ ಮುಗಿಯದ ಸಂಚಾರ ಸಮಸ್ಯೆ
Karkala: ಶಿರ್ಲಾಲು ಪರಿಸರದಲ್ಲಿ ಒಂದೇ ಟವರ್; ಮಾತನಾಡಲು ಮುಖ್ಯ ರಸ್ತೆಗೇ ಬರಬೇಕು!
Trasi: ಸಾಂಪ್ರದಾಯಿಕ ಮೀನುಗಾರರಿಂದ ಬೃಹತ್ ಪ್ರತಿಭಟನೆ; ಗಂಟಿಹೊಳೆ, ಗೋಪಾಲ ಪೂಜಾರಿ ಭಾಗಿ
Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.