Udyavara: ಸ್ನಾನದ ಮನೆಯಲ್ಲಿ ಬಿದ್ದು ಮಹಿಳೆ ಸಾವು
Team Udayavani, Oct 21, 2023, 9:56 PM IST
ಕಾಪು: ಸ್ನಾನದ ಮನೆಯಲ್ಲಿ ಕಾಲು ಜಾರಿ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಉದ್ಯಾವರದಲ್ಲಿ ನಡೆದಿದೆ.
ಉದ್ಯಾವರ ನಿವಾಸಿ ಲಲಿತಾ (61) ಮೃತ ಮಹಿಳೆ. ಶುಕ್ರವಾರ ಸಂಜೆ ಮನೆಯಲ್ಲಿ ಸ್ನಾನದ ಮನೆಗೆ ಹೋಗಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಪ್ರಜ್ಞಾಹೀನರಾಗಿದ್ದ ಅವರನ್ನು ಉಡುಪಿಯ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಕೆಎಂಸಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಕಾಪು ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.