Ullala: ಗ್ಯಾಸ್ ಸೋರಿಕೆ: ಚಿಕಿತ್ಸೆ ಫಲಿಸದೇ ಗೃಹಿಣಿ ಸಾವು
Team Udayavani, Dec 14, 2024, 3:03 AM IST
ಉಳ್ಳಾಲ: ಮಂಜನಾಡಿ ಗ್ರಾಮದ ಕಂಡಿಕದಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಮನೆಯೊಳಗೆ ಸ್ಫೋಟಗೊಂಡು ಗಂಭೀರ ಗಾಯಗೊಂಡು ದೇರಳಕಟ್ಟೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖುಬ್ರ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ತಡರಾತ್ರಿ ಮೃತಪಟ್ಟಿದ್ದಾರೆ. ಖುಬ್ರ ಅವರ ಮೂವರು ಮಕ್ಕಳು ಗಂಭೀರ ಸ್ಥಿತಿಯಲ್ಲಿದ್ದು ಚಿಕಿತ್ಸೆ ನಡೆಯುತ್ತಿದೆ.
ಮಂಜನಾಡಿ ಕಂಡಿಕ ನಿವಾಸಿ ಮುತ್ತಲಿಬ್ ವಿದೇಶದಲ್ಲಿ ಉದ್ಯೋಗದಲ್ಲಿದ್ದು ಅವರ ಪತ್ನಿ ಖುಬ್ರ ಮತ್ತು ಅವರ ಮೂವರು ಪುತ್ರಿಯರು ಶನಿವಾರ ಊಟ ಮುಗಿಸಿ ಮಲಗಿದ್ದರು. ತಡರಾತ್ರಿ ಖುಬ್ರ ಶೌಚಾಲಯಕ್ಕೆ ತೆರಳಲು ಕೋಣೆಯ ವಿದ್ಯುತ್ ದೀಪ ಉರಿಸಲು ಸ್ವಿಚ್ ಹಾಕಿದಾಗ ಬೆಂಕಿಯುಂಡೆಯಂತೆ ಮನೆಯೊಳಗೆ ಬೆಂಕಿ ಆವರಿಸಿ ನಾಲ್ವರು ಸುಟ್ಟ ಗಾಯಗಳೊಂದಿಗೆ ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಾಗಿದ್ದರು.
ಘಟನೆ ಸಂದರ್ಭದಲ್ಲಿ ಮನೆಯಲ್ಲಿ ನಾಲ್ವರು ಮಾತ್ರವಿದ್ದು, ಬೆಡ್ರೂಂ ಬಳಿ ಇಟ್ಟಿದ್ದ ಗ್ಯಾಸ್ ಸಿಲಿಂಡರ್ನಲ್ಲಿ ಗ್ಯಾಸ್ ಸೋರಿಕೆಯಾಗಿ ಈ ಘಟನೆ ಸಂಭವಿಸಿತ್ತು ಎನ್ನಲಾಗಿದೆ. ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Alvas: ವಿರಾಸತ್ನಲ್ಲಿ ನೀಲಾದ್ರಿ ಕುಮಾರ್ ಬೆರಳ ಮಾಂತ್ರಿಕತೆಗೆ ಜನಸ್ತೋಮ ನಿಬ್ಬೆರಗು
Navy: ಪಶ್ಚಿಮ ಕಮಾಂಡ್ನ ಮೆಡಿಕಲ್ ಮುಖಸ್ಥರಾಗಿ ಉಡುಪಿಯ ಡಾ.ಕೃಷ್ಣಮೂರ್ತಿ ಅಧಿಕಾರಿ ನೇಮಕ
Udupi: ಸಿಎಸ್ಆರ್ ನಿಧಿಗಳ ಸದುಪಯೋಗವಾಗಲಿ: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ
Manipal Kasturba Hospital: ಶಿಶುವಿನ ಯಕೃತ್ ಗೆಡ್ಡೆ ಶಸ್ತ್ರಚಿಕಿತ್ಸೆ: ಕೆಎಂಸಿ ಸಾಧನೆ
Mangaluru: ಗ್ರಾಮೀಣ ಭಾಗದ ದಬ್ಬಾಳಿಕೆ ಕಥೆ ಹೇಳುವ ಸಿನೆಮಾಕ್ಕೆ ಉತ್ತಮ ಸ್ಪಂದನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.