Padubidri: ಅಪರಿಚಿತ ಬೈಕ್ ಢಿಕ್ಕಿ: ಪಾದಚಾರಿಗೆ ಗಾಯ
Team Udayavani, Feb 3, 2024, 9:35 PM IST
ಪಡುಬಿದ್ರಿ: ಅಪರಿಚಿತ ಬೈಕ್ ಢಿಕ್ಕಿಯಾಗಿ ನಡೆದುಕೊಂಡು ಹೋಗುತ್ತಿದ್ದ ಪಲಿಮಾರಿನ ಸುಧಾಕರ್ (68) ಅವರ ತಲೆಗೆ ತೀವ್ರ ಗಾಯಗೊಂಡ ಘಟನೆ ಪಲಿಮಾರು ಮಠದ ಬಳಿ ಗುರುವಾರ ಸಂಭವಿಸಿದೆ. ಸ್ಥಳೀಯರು ಗಾಯಾಳುವಿಗೆ ಪಡುಬಿದ್ರಿ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ನಡೆದ ಸ್ಥಳದಿಂದ ಬೈಕ್ ಸವಾರ ದ್ವಿಚಕ್ರ ವಾಹನ ಸಹಿತ ಪರಾರಿಯಾಗಿದ್ದಾನೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಟೋಗೆ ಲಾರಿ ಢಿಕ್ಕಿ: ಮಹಿಳೆಗೆ ಗಾಯ
ಪಡುಬಿದ್ರಿ: ರಸ್ತೆ ಬದಿ ನಿಲ್ಲಿಸಿದ್ದ ಈಚರ್ ಲಾರಿಯನ್ನು ಅದರ ಚಾಲಕ ಹಠಾತ್ ಹೆದ್ದಾರಿಗೆ ನುಗ್ಗಿಸಿದ ಪರಿಣಾಮ ಪಡುಬಿದ್ರಿಯಿಂದ ಕಂಚಿನಡ್ಕಕ್ಕೆ ಹೋಗುತ್ತಿದ್ದ ಆಟೋಗೆ ಢಿಕ್ಕಿಯಾಗಿ ಅದರಲ್ಲಿ ಪ್ರಯಾಣಿಸುತ್ತಿದ್ದ ಬೀನಾ (44) ಅವರು ಗಾಯಗೊಂಡ ಘಟನೆ ಮೂಕಾಂಬಿಕಾ ಗ್ಯಾರೇಜ್ ಬಳಿ ಗುರುವಾರ ರಾತ್ರಿ ನಡೆದಿದೆ. ಅಪಘಾತದಿಂದ ಎಡಗೈ ಮೂಳೆ ಮುರಿತಗೊಂಡಿದ್ದ ಬೀನಾ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಟೋ ಜಖಂಗೊಂಡಿದ್ದು ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ಪ್ಯಾನಿಕ್ ಬಟನ್, ಜಿಪಿಎಸ್ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ
BJP; ವಿಪಕ್ಷ ನಾಯಕ ಆರ್. ಅಶೋಕ್ ನಡೆಗೆ ಕಾಂಗ್ರೆಸ್ ಖಂಡನೆ
Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!
Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ
Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.