ಬಜೆಟ್ ವಿಶ್ಲೇಷಣೆ: ಶಿಕ್ಷಣ ಕ್ಷೇತ್ರ ಸುಧಾರಣೆಗೆ ರಚನಾತ್ಮಕ ಕ್ರಮ ಬೇಕಿತ್ತು
Team Udayavani, Feb 2, 2022, 5:50 AM IST
ಕೇಂದ್ರ ಮುಂಗಡ ಪತ್ರದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಏನಿರ ಬಹುದು ಎನ್ನುವ ಕುತೂಹಲವಿತ್ತು. ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ಹಿನ್ನೆಲೆಯಲ್ಲಿ ಕಳೆದ ವರ್ಷದ ಮುಂಗಡ ಪತ್ರದಲ್ಲಿ ಶಿಕ್ಷಣಕ್ಕೆ ಒದಗಿಸಿದ ಹಣಕಾಸು ನಿರಾಸೆ ಮೂಡಿಸಿತ್ತು. ಈ ವರ್ಷವೂ ಅದೇ ಭಾವನೆ ಮೂಡಿದೆ.
ಪ್ರಸಕ್ತ ಬಜೆಟ್ ಆರ್ಥಿಕ ಪುನಶ್ಚೇತನಕ್ಕೆ ಹೆಚ್ಚು ಒತ್ತು ನೀಡಿದೆ. ಕೊರೊನಾ ಸಾಂಕ್ರಾಮಿಕದಿಂದಾಗಿ ಹದಗೆಟ್ಟಿದ್ದ ಆರ್ಥಿಕತೆಯನ್ನು ಸರಿದಾರಿಗೆ ತರುವ ಕ್ರಮಗಳೇ ಹೆಚ್ಚು ಇವೆ. ಮೂಲಸೌಕರ್ಯ ಸೃಷ್ಟಿ ಕ್ಷೇತ್ರದಲ್ಲಿ ಹೆಚ್ಚು ಖರ್ಚು ಮಾಡಿ ಉಳಿದ ಕ್ಷೇತ್ರಕ್ಕೆ ಆರ್ಥಿಕ ಶಿಸ್ತು, ವಿತ್ತೀಯ ಕೊರತೆಯನ್ನು ತಗ್ಗಿಸುವ ಕ್ರಮಗಳ ಬಗ್ಗೆ ಹೆಚ್ಚು ಯೋಚಿಸಿರುವುದು ಕಂಡು ಬರುತ್ತಿದೆ.
ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನ ಮಾಡುವಾಗ ಶೈಕ್ಷಣಿಕ ಸುಧಾರಣೆ ಕ್ರಮಗಳಿಗೆ ಸಂಪನ್ಮೂಲ ಒದಗಿಸಲೇ ಬೇಕಾಗಿತ್ತು. ಹಂತ ಹಂತವಾಗಿ ರಾಷ್ಟ್ರೀಯ ಉತ್ಪನ್ನದ ಶೇ. 6ರಷ್ಟನ್ನು ಶಿಕ್ಷಣಕ್ಕೆ ವಿನಿಯೋಗಿಸಲೇ ಬೇಕಾಗಿತ್ತು. ಆದರೆ ಆ ನಿಟ್ಟಿನಲ್ಲಿ ಯಾವುದೇ ರಚನಾತ್ಮಕ ಕ್ರಮಗಳು ಕಳೆದ ವರ್ಷದ ಬಜೆಟ್‌ನಲ್ಲಿಯೂ ಇರಲಿಲ್ಲ, ಈ ವರ್ಷವೂ ಕಾಣಿಸುತ್ತಿಲ್ಲ. ಆರ್ಥಿಕ ಪುನಶ್ಚೇತನಕ್ಕೆ ಹೆಚ್ಚು ಒತ್ತು ನೀಡುವುದರ ಜತೆಗೆೆ ಶಿಕ್ಷಣ ಕ್ಷೇತ್ರದ ಸುಧಾರಣೆಗೆ ರಚನಾತ್ಮಕ ಕ್ರಮಗಳ ಅಗತ್ಯವಿದೆ.
ಇದು ಉತ್ತಮ ಹೆಜ್ಜೆ
ಕೊರೊನಾದಿಂದಾಗಿ ಮಕ್ಕಳಿಗೆ ತೊಂದರೆಯಾಗಿದ್ದನ್ನು ಗಮನಿಸಿ ಆನ್‌ಲೈನ್ ಶಿಕ್ಷಣದ ವ್ಯವಸ್ಥೆಗೆ ಮತ್ತಷ್ಟು ಕ್ರಮ ಕೈಗೊಳ್ಳಲಾಗಿದೆ. ಇ-ವಿದ್ಯಾ ಯೋಜನೆಯಲ್ಲಿ ಟಿವಿ ಚಾನೆಲ್‌ಗಳ ಮೂಲಕ ಶಿಕ್ಷಣ ಪಡೆಯುವ ನಿಟ್ಟಿನಲ್ಲಿ 200 ಚಾನೆಲ್‌ಗಳ ಮುಖಾಂತರ ಸೌಲಭ್ಯ ಕಲ್ಪಿಸ ಲಾಗುವುದು ಎಂದು ತಿಳಿಸಲಾಗಿದೆ. ಇದು ಉತ್ತಮ ಹೆಜ್ಜೆ.
ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಡಿಜಿಟಲ್ ವಿಶ್ವವಿದ್ಯಾನಿಲಯವನ್ನು ರಾಷ್ಟ್ರೀಯ ಮಟ್ಟದಲ್ಲಿ ಸ್ಥಾಪನೆ ಮಾಡುವ ಯೋಜನೆ ಪ್ರಕಟಿಸ ಲಾಗಿದೆ. ದೇಶದ ಅನೇಕ ಸಾರ್ವಜನಿಕ ವಿಶ್ವವಿದ್ಯಾನಿಲಯಗಳನ್ನೂ ಈ ವ್ಯಾಪ್ತಿಯಲ್ಲಿ ಬಳಸಿಕೊಂಡು ಸರ್ವರಿಗೂ ಉನ್ನತ ಶಿಕ್ಷಣ ನೀಡುವ ಪ್ರಸ್ತಾವ ಸ್ವಲ್ಪ ಗಮನ ಸೆಳೆಯುವಂಥದ್ದು. ಡಿಜಿಟಲೀಕರಣದ ನಿಟ್ಟಿನಲ್ಲಿ ಇದೊಂದು ಉತ್ತಮ ಉಪಕ್ರಮ. ಪ್ರಾಥಮಿಕ ಶಿಕ್ಷಣದಲ್ಲಿ ಎರಡು ಲಕ್ಷ ಅಂಗನವಾಡಿಗಳನ್ನು ಮೇಲ್ದರ್ಜೆಗೆ ಏರಿಸುವ ಪ್ರಸ್ತಾವ ಮಾತ್ರ ಕಾಣಿಸುತ್ತಿದೆ. ಇದರ ಹೊರತಾಗಿ ಬೇರೆ ಯಾವುದೇ ಕ್ರಮಗಳು ಕಾಣುತ್ತಿಲ್ಲ.
ಕೃಷಿ ವಿ.ವಿ.ಗಳ ಪಠ್ಯಕ್ರಮವನ್ನು ಆಧುನಿಕ ಕೃಷಿ ಪದ್ಧತಿ ಹಾಗೂ ಅಗತ್ಯಗಳಿಗೆ ಸ್ಪಂದಿಸುವಂತೆ ಪರಿಷ್ಕರಿಸುವ ಮತ್ತು ಉದ್ಯಮಗಳ ಅಗತ್ಯಕ್ಕೆ ತಕ್ಕಂತೆ ಕೌಶಲಗಳನ್ನು ರೂಪಿಸುವ ಪ್ರಸ್ತಾವಗಳು ಹೊಸದಾಗಿ ಕಾಣಿಸುವುದಿಲ್ಲ. ಒಟ್ಟಾರೆ, ನೀತಿಗೆ ಮತ್ತಷ್ಟು ನೀತಿಗಳನ್ನು ಸೇರಿಸಿ ಶಿಕ್ಷಣ ನೀತಿಗಳ ಅನುಷ್ಠಾನ ಜವಾಬ್ದಾರಿಯನ್ನು ರಾಜ್ಯ ಸರಕಾರಗಳು ಹಾಗೂ ಖಾಸಗಿ ಕ್ಷೇತ್ರಕ್ಕೆ ಬಿಟ್ಟುಕೊಡುವ ನಿಲುವು ಈ ಬಜೆಟ್‌ನಲ್ಲಿ ಕಾಣಿಸುತ್ತಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಘೋಷಣೆಯ ಅಬ್ಬರ ಈಗ ಕಾಣಿಸುತ್ತಿಲ್ಲ.
-ಪ್ರೊ| ಎ.ಎಂ. ನರಹರಿ
ಶಿಕ್ಷಣ ತಜ್ಞ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಹೊಸ ವರ್ಷದ ಮುನ್ನಾದಿನ 17,800 ವಾಹನ ಚಾಲಕರಿಗೆ ದಂಡ, 89 ಲಕ್ಷ ರೂ. ಸಂಗ್ರಹ
Delhi: ಕೇಜ್ರಿವಾಲ್ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ
2025 ‘ಸುಧಾರಣೆಗಳ ವರ್ಷ’ಎಂದು ಘೋಷಣೆ ಮಾಡಿದ ರಕ್ಷಣ ಸಚಿವಾಲಯ
Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್
Manipur ಘಟನೆಗಳಿಗೆ ಕ್ಷಮೆ ಕೇಳಿದ ಸಿಎಂ: ಪ್ರಧಾನಿ ಏಕೆ ಭೇಟಿ ನೀಡಿಲ್ಲ ಎಂದ ಕಾಂಗ್ರೆಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Contractor Case: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಪ್ರಶ್ನೆಯೇ ಉದ್ಭವಿಸಲ್ಲ: ಸಿಎಂ
Murdeshwar:ಅಶುಭ- ಪ್ರವಾಸಿಗರಿಲ್ಲದೆ ಮುರ್ಡೇಶ್ವರ ಕಿನಾರೆ ಭಣ ಭಣ!
KD Movie: ಕೆಡಿ ಶಿವ ಮೊಗದಲ್ಲಿ 25 ಮಿಲಿಯನ್ ನಗು
Mumbai: ಹೊಸ ವರ್ಷದ ಮುನ್ನಾದಿನ 17,800 ವಾಹನ ಚಾಲಕರಿಗೆ ದಂಡ, 89 ಲಕ್ಷ ರೂ. ಸಂಗ್ರಹ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.