ಕ್ರೀಡೆಗೆ 700 ಕೋಟಿ ರೂ. ಅಧಿಕ ಉತ್ತೇಜನ
Team Udayavani, Feb 1, 2023, 11:13 PM IST
ಹೊಸದಿಲ್ಲಿ: ಮುಂಬರುವ ಏಷ್ಯನ್ ಗೇಮ್ಸ್ ಮತ್ತು 2024ರ ಪ್ಯಾರಿಸ್ ಒಲಿಂಪಿಕ್ಸ್‌ಗೆ ತಯಾರಿ ನಡೆಸುವ ನಿಟ್ಟಿನಲ್ಲಿ ಭಾರತೀಯ ಆ್ಯತ್ಲೀಟ್‌ಗಳಿಗೆ ನೆರವಾಗಲು ಕೇಂದ್ರ ಸರಕಾರವು ಬಜೆಟ್‌ನಲ್ಲಿ ಕ್ರೀಡಾ ಸಚಿವಾಲಯಕ್ಕೆ 3,397.32 ಕೋಟಿ ರೂ.ಗಳನ್ನು ಹಂಚಿಕೆ ಮಾಡಿದೆ. ಇದು ಕಳೆದ ವರ್ಷಕ್ಕಿಂತ 723.97 ಕೋಟಿ ರೂ. ಹೆಚ್ಚಳವಾಗಿದೆ.
ಈ ಮೊತ್ತವು ಹಿಂದಿನ ಹಣಕಾಸು ವರ್ಷದ (2022-23) ಪರಿಷ್ಕೃತ ಬಜೆಟ್‌ಗಿಂತ ಹೆಚ್ಚಿದ್ದು, ಸಚಿವಾಲಯವು ಕಳೆದ ವರ್ಷ 2,673.35 ಕೋಟಿ ರೂ.ಪಡೆದಿತ್ತು. 3,062.60 ಕೋಟಿ ರೂ. ನಿಜವಾದ ಹಂಚಿಕೆಯಾಗಿತ್ತು. ಆದರೆ ಹ್ಯಾಂಗ್‌ಝೂ ಏಷ್ಯನ್ ಗೇಮ್ಸ್ ಈ ವರ್ಷಕ್ಕೆ ಮುಂದೂಡಲ್ಪಟ್ಟ ಕಾರಣ ಕಳೆದ ವರ್ಷ ನೀಡಬೇಕಾಗಿದ್ದ ನಿಜವಾದ ಹಂಚಿಕೆಯನ್ನು ಪರಿಷ್ಕೃತಗೊಳಿಸಲಾಗಿತ್ತು.
ಸಚಿವಾಲಯದ ಕಾರ್ಯಕ್ರಮ “ಖೇಲೋ ಇಂಡಿಯಾ -ಕ್ರೀಡೆಗಳ ಅಭಿವೃದ್ಧಿಗಾಗಿ ರಾಷ್ಟ್ರೀಯ ಕಾರ್ಯಕ್ರಮ’ ಸರಕಾರದ ಆದ್ಯತೆಯಾಗಿ ಮುಂದುವರಿಯಲಿದೆ. ಇದಕ್ಕಾಗಿ ಕಳೆದ ಹಣಕಾಸು ವರ್ಷದಲ್ಲಿ 606 ಕೋಟಿ ರೂ. ನೀಡಿದ್ದರೆ ಈ ಬಾರಿ 1,045 ಕೋಟಿ ರೂ. ಹಂಚಿಕೆ ಮಾಡಲಾಗಿದೆ. ಈ ಕಾರ್ಯಕ್ರಮಕ್ಕಾಗಿ 439 ಕೋಟಿ ರೂ. ಹೆಚುjವರಿಯಾಗಿ ನೀಡಲಾಗಿದೆ. ಒಲಿಂಪಿಕ್ಸ್, ಏಷ್ಯನ್ ಗೇಮ್ಸ್ ಮತ್ತು ಕಾಮನ್ವೆಲ್ತ್ ಗೇಮ್ಸ್‌ಗಾಗಿ ಆ್ಯತ್ಲೀಟ್‌ಗಳ ತಯಾರಿಗಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
By Election: ಯೋಗೇಶ್ವರ್ ನಿಂದಿಸಿದ್ದ ಡಿ.ಕೆ.ಸುರೇಶ್ ಆಡಿಯೋ ಎಚ್ಡಿಕೆ ಬಿಡುಗಡೆ
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್ ಅನುಮತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.