ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್-2021 ಪೂರ್ವಭಾವಿ ಸಿದ್ಧತೆ ಪರಿಶೀಲಿಸಿದ ಸಚಿವ ನಾರಾಯಣಗೌಡ
Team Udayavani, Oct 18, 2021, 7:29 PM IST
ಬೆಂಗಳೂರು/ರಾಮನಗರ : ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್ – 2022 ರ ಹಿನ್ನೆಲೆಯಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರು ಬೆಂಗಳೂರಿನ ಕನಕಪುರ ರಸ್ತೆಯ ಜೈನ್ ವಿವಿಗೆ ಭೇಟಿ ನೀಡಿ ಪೂರ್ವ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದರು. ವಿವಿಯ ಆವರಣದಲ್ಲಿರುವ ಕ್ರೀಡಾ ಅಂಕಣಗಳಿಗೆ ಸಚಿವ ನಾರಾಯಣ ಗೌಡ ಅವರು ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
2022 ರ ಮಾರ್ಚ್‌ನಲ್ಲಿ ಖೇಲೋ ಇಂಡಿಯಾದ ಯೂನಿವರ್ಸಿಟಿ ಗೇಮ್ಸ್ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟಿಸಲು ತೀರ್ಮಾನಿಸಲಾಗಿದ್ದು, ಶೀಘ್ರದಲ್ಲೇ ಮುಖ್ಯಮಂತ್ರಿಗಳ ಜೊತೆ ತೆರಳಿ ಅಧಿಕೃತವಾಗಿ ಆಹ್ವಾನ ನೀಡಲಾಗುವುದು ಎಂದು ಸಚಿವ ಡಾ. ನಾರಾಯಣ ಗೌಡ ಅವರು ತಿಳಿಸಿದರು.
ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಉನ್ನತಮಟ್ಟದ ಸಮಿತಿ ರಚಿಸಲಾಗಿದ್ದು, ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಕಾರ್ಯಕಾರಿ ಸಮಿತಿ ರಚಿಸಲಾಗಿದೆ. ಶೀಘ್ರದಲ್ಲೇ ಸಮಿತಿಯ ಸಭೆಗಳನ್ನ ನಡೆಸಿ ಹಲವು ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಪ್ರತ್ಯೇಕ ಲೋಗೋ ರಚನೆ, ಥೀಮ್ ಸಾಂಗ್ ರಚಿಸಲು ಸಿದ್ದತೆ ನಡೆದಿದೆ. ತಿಂಗಳಾಂತ್ಯದಲ್ಲಿ ಲೋಗೋ ಮತ್ತು ಥೀಮ್ ಸಾಂಗ್ ಸಿದ್ದವಾಗಲಿದೆ. ನವೆಂಬರ್ ಎರಡನೇ ವಾರದಲ್ಲಿ
ಕೇಂದ್ರ ಕ್ರೀಡಾ ಸಚಿವರ ಉಪಸ್ಥಿತಿಯಲ್ಲಿ ಲೋಗೋ ಮತ್ತು ಥೀಮ್ ಸಾಂಗ್ ಲಾಂಚ್ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಇದನ್ನೂ ಓದಿ : ಮುಂಬರುವ ದಿನಗಳಲ್ಲಿ ಕರ್ನಾಟಕ ಎಲ್ಲಾ ಕ್ಷೇತ್ರದಲ್ಲೂ ಅಗ್ರಸ್ಥಾನ ಪಡೆಯಲಿದೆ :ಅಶ್ವತ್ಥನಾರಾಯಣ
ಒಟ್ಟು 20 ಕ್ರೀಡೆಗಳು ನಡೆಯಲಿದ್ದು, ಸುಮಾರು 12 ಕ್ರೀಡೆಗಳು ಜೈನ್ ವಿವಿಯಲ್ಲಿ ನಡೆಯಲಿವೆ. ಉಳಿದಂತೆ ಕಂಠೀರವ ಕ್ರೀಡಾಂಗಣ, ಸ್ಪೋರ್ಟ್ ಸ್ಕೂಲ್, ಸಾಯ್‌ನಲ್ಲಿ ವಿವಿಧ ಕ್ರೀಡೆಗಳು ನಡೆಯಲಿವೆ. ಅದಕ್ಕೆ ಅಗತ್ಯವಿರುವ ಮೂಲ ಸೌಕರ್ಯ ಒದಗಿಸುವ ಬಗ್ಗೆ ಸಚಿವ ಡಾ. ನಾರಾಯಣ ಗೌಡ ಅವರು ಮಾಹಿತಿ ಪಡೆದರು.
ವಿಜಯಪುರದಲ್ಲಿ ಸೈಕ್ಲಿಂಗ್ ನಡೆಸಲು ಸಾಧ್ಯಸಾಧ್ಯತೆ ಬಗ್ಗೆ ವರದಿ ನೀಡುವಂತೆ ಸೂಚಿಸಿದರು. ಸಾಧ್ಯವಾದರೇ ಸೈಕ್ಲಿಂಗ್ ಸ್ಪರ್ಧೆಯನ್ನು ವಿಜಯಪುರದಲ್ಲೇ ಆಯೋಜಿಸಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವ ನಾರಾಯಣ ಗೌಡ ಸೂಚಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಕಾರ್ಯಕ್ರಮ ಇದಾಗಿದ್ದು, ಯಶಸ್ವಿಗೊಳಿಸಿದರೆ ಕರ್ನಾಟಕಕ್ಕೆ ಉತ್ತಮ ಹೆಸರು ಬರಲಿದೆ. ಆ ನಿಟ್ಟಿನಲ್ಲಿ ನಾವೆಲ್ಲರೂ ಕೆಲಸ ಮಾಡೋಣ. ಖೇಲೋ ಇಂಡಿಯಾ ಎರಡನೇ ಆವೃತ್ತಿಯನ್ನು ಯಶಸ್ವಿಗೊಳಿಸಲು ಹಣಕಾಸು ಸೇರಿದಂತೆ ರಾಜ್ಯ ಸರ್ಕಾರದಿಂದ ಎಲ್ಲಾ ರೀತಿಯ ನೆರವು ನೀಡಲಾಗುತ್ತದೆ ಎಂದು ಸಚಿವ ನಾರಾಯಣ ಗೌಡ ಅವರು ತಿಳಿಸಿದರು.
ಯುವ ಸಬಲೀಕರಣ, ಕ್ರೀಡಾ ಇಲಾಖೆ ಆಯುಕ್ತರಾದ ಗೋಪಾಲಕೃಷ್ಣ, ಜೈನ್ ವಿವಿ ಚಾನ್ಸಲರ್ ಚೆನ್‌ರಾಜ್ ರಾಯ್‌ಚಂದ್ ಸೇರಿದಂತೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!
MUST WATCH
ಹೊಸ ಸೇರ್ಪಡೆ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.