BJP ಯಿಂದ ಅನಾವಶ್ಯಕ ರಾಜಕೀಯ: ಪರಂ
Team Udayavani, Jan 4, 2024, 10:45 PM IST
ಬೆಂಗಳೂರು: ಕರ ಸೇವಕರ ಬಂಧನ ವಿಚಾರವಾಗಿ ಬಿಜೆಪಿ ನಾಯಕರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕುತ್ತಿರುವುದಕ್ಕೆ ಗೃಹ ಸಚಿವ ಜಿ. ಪರಮೇಶ್ವರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಕರ್ತವ್ಯ. ಕಾನೂನು ಪ್ರಕಾರ ಪೊಲೀಸರು ಕ್ರಮ ತೆಗೆದುಕೊಂಡಿ¨ªಾರೆ. ಅನಾವಶ್ಯಕವಾಗಿ ಬಿಜೆಪಿ ರಾಜಕೀಯ ಮಾಡುತ್ತಿದೆ. ಇದನ್ನು ನಾವು ಸಹಿಸುವುದಿಲ್ಲ ಎಂದರು.
ಹರಿಪ್ರಸಾದ್‌ಗೆ ನೋಟಿಸ್ ಅಗತ್ಯವಿಲ್ಲ
ಹರಿಪ್ರಸಾದ್ ಹೇಳಿಕೆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಸಂದರ್ಭ ಬಂದಾಗ ಅವರನ್ನೇ ಕೇಳ್ಳೋಣ. ಅವರು ನಮ್ಮ ಪಕ್ಷದ ಹಿರಿಯ ನಾಯಕರು. ಅವರು ಹೇಳುವಾಗ ಒಂದಷ್ಟು ಮಾಹಿತಿ ಇರಬಹುದು. ಅವರಿಗೆ ನೋಟಿಸ್ ಕೊಡುವ ಅಗತ್ಯ ಇಲ್ಲ ಎಂದರು.
ರಾಜ್ಯದಲ್ಲಿ ದೀರ್ಘಾವಧಿಯಿಂದ ಬಾಕಿ ಇರುವ ಸುಮಾರು 50-60 ಸಾವಿರ ಪ್ರಕರಣವಿದ್ದು, ಬೆಂಗಳೂರಿನಲ್ಲೇ 10 ಸಾವಿರ ಪ್ರಕರಣಗಳಿವೆ. ಎಲ್ಲರನ್ನೂ ಬಂಧಿಸಿದರೆ ಜೈಲಿನಲ್ಲಿ ಜಾಗ ಇರುವುದಿಲ್ಲ. ಕಾಂಗ್ರೆಸ್‌ನವರು ಬೇಕಾದವರಿಗೆ ಕಾಫಿ ಕೊಟ್ಟು ಕಳಿಸುತ್ತಾರೆ. 1,700 ಪಿಎಫ್‌ಐ ಕಾರ್ಯಕರ್ತರ ಮೇಲಿನ ದೊಂಬಿ, ಅಶಾಂತಿ ಸೃಷ್ಟಿಸುವ ಕೇಸ್ ಇದ್ದರೂ ಅದನ್ನು ಕೈಬಿಡುತ್ತಾರೆ. ಕಾಂಗ್ರೆಸ್ ಸರಕಾರಕ್ಕೆ ನಾಚಿಕೆ ಇಲ್ಲ.
-ಆರ್.ಅಶೋಕ್, ವಿಪಕ್ಷ ನಾಯಕ
ಸಿದ್ದರಾಮಯ್ಯ ಹೆಸರಿಗೆ ಅಶೋಕ್ ಆಕ್ಷೇಪ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹೆಸರಿನ ಮುಂದೆ ಇರುವ ರಾಮನನ್ನು ತೆಗೆದು ಹಾಕಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮ ಮಂದಿರ ಉದ್ಘಾಟನೆ ಕಾರ್ಯಕ್ಕೆ ಕಲ್ಲು ಹಾಕಬೇಕು, ವಿಘ್ನ ಮಾಡಬೇಕೆಂದೇ ಕರ್ನಾಟಕ ಕಾಂಗ್ರೆಸ್ ಹೊರಟಿದೆ. ಪ್ರಕರಣವಿದೆ ಎಂಬ ಕಾರಣಕ್ಕೆ ಕರ ಸೇವಕ ಶ್ರೀಕಾಂತ ಪೂಜಾರಿಯವರನ್ನು ಕ್ರಿಮಿನಲ್ ಎಂದು ಘೋಷಿಸಿರುವ ಸಿದ್ದರಾಮಯ್ಯನವರು ರಾಹುಲ್ ಗಾಂಧಿಯವರನ್ನು ಏನೆಂದು ಕರೆಯುತ್ತಾರೆ ? ಎಂದು ಪ್ರಶ್ನಿಸಿದ್ದಾರೆ.
ಇತ್ತೀಚೆಗೆ ದೇವಸ್ಥಾನದ ಉದ್ಘಾಟನೆಗೆ ಹೋಗಿದ್ದ ಸಿದ್ದರಾಮಯ್ಯ ಪೂಜೆ ಮಾಡಲು ಗರ್ಭಗುಡಿಯ ಒಳಕ್ಕೆ ಹೋಗಿಲ್ಲ. ಆದರೆ ಮಸೀದಿಗೆ ಕರೆದರೆ ಟೋಪಿ ಹಾಕಿಕೊಂಡು ಓಡುತ್ತಾರೆ. ಮೈಸೂರಿನ ಕುಸ್ತಿ ಕಾರ್ಯಕ್ರಮದಲ್ಲಿ ಕೇಸರಿ ಪೇಟವನ್ನು ಕೂಡ ಅವರು ಹಾಕಿಕೊಳ್ಳಲಿಲ್ಲ. ಮೊದಲು ರಾಮನನ್ನು ನಿಮ್ಮ ಹೆಸರಿನಿಂದ ತೆಗೆದು ಹಾಕಿ ಎಂದು ಕುಟುಕಿದರು. ಬಡ ಆಟೋ ಚಾಲಕನ ಮೇಲೆ ಸಿದ್ದರಾಮಯ್ಯ ಬ್ರಹ್ಮಾಸ್ತ್ರ ಪ್ರಯೋಗ ಮಾಡುತ್ತಿದ್ದಾರೆ. ಸಾವು ಬದುಕಿನ ನಡುವೆ ಹೋರಾಡುತ್ತಿರುವ 65 ವರ್ಷದ ಶ್ರೀಕಾಂತ್ ಪೂಜಾರಿ ವಿರುದ್ಧ ಅಪರಾಧ ಸಾಬೀತಾಗದ ಪ್ರಕರಣದಲ್ಲಿ 30 ವರ್ಷದ ಬಳಿಕ ಬಂಧಿಸುವ ಮೂಲಕ ಹೇಡಿತನದ ರಾಜಕಾರಣ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.