![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Apr 28, 2023, 3:44 PM IST
ಗಂಗಾವತಿ: ವಿಧಾನಸಭಾ ಕ್ಷೇತ್ರದ ಚುನಾವಣೆ ರಂಗೇರುತ್ತಿದ್ದು ಎ. 30 ರಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಗಂಗಾವತಿಗೆ ಭೇಟಿ ನೀಡಿ ವ್ಯಾಪಕ ಪ್ರಚಾರವನ್ನು ನಡೆಸಲಿದ್ದಾರೆಂದು ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಪರಣ್ಣ ಮುನವಳ್ಳಿ ತಿಳಿಸಿದ್ದಾರೆ.
ಅವರು ಶುಕ್ರವಾರ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇತಿಹಾಸ ಪ್ರಸಿದ್ಧ ಕಿಸ್ಕಿಂದ ಅಂಜನಾದ್ರಿ ಇರುವ ಕಾರಣ ಗಂಗಾವತಿ ಮತಕ್ಷೇತ್ರ ಅತ್ಯಂತ ಪ್ರತಿಷ್ಠೆಯ ಕಣವಾಗಿದೆ. ಸರ್ಕಾರದ. ಕೋಟ್ಯಾಂತರ ರೂ ಅನುದಾನದಲ್ಲಿ ಗಂಗಾವತಿಯ ಸಮಗ್ರ ಅಭಿವೃದ್ಧಿ ಬಿಜೆಪಿ ಸರ್ಕಾರದಲ್ಲಿ ಆಗಿರುವುದರಿಂದ ಮತ್ತೊಮ್ಮೆ ಇಲ್ಲಿಯ ಮತದಾರ ಬಿಜೆಪಿಯ ಪರವಾಗಿದ್ದು ಇದನ್ನು ದೃಢೀಕರಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎ 30ರಂದು 11 ಗಂಟೆಗೆ ಗಂಗಾವತಿ ನಗರಕ್ಕೆ ಆಗಮಿಸಿ ರೋಡ್ ಶೋ ಮತ್ತು ಬಹಿರಂಗ ಪ್ರಚಾರ ಭಾಷಣ ಮಾಡಲಿದ್ದಾರೆ.
ಚಿತ್ರನಟ ಸ್ಟಾರ್ ಕ್ಯಾಂಪೇನರ್ ಕಿಚ್ಚ ಸುದೀಪ್ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪ್ರವಾಸ ದಿನಾಂಕ ನಿಗದಿಯಾಗಿದ್ದು, ಇನ್ನು ಅಧಿಕೃತವಾಗಿಲ್ಲ. ಇನ್ನು ಅನೇಕ ಬಿಜೆಪಿ ಮತ್ತು ಹಿರಿಯ ಮುಖಂಡರು ಪ್ರಚಾರ ಸಭೆಗೆ ಆಗಮಿಸಲಿದ್ದು, ಮತದಾರ ಪ್ರಭುಗಳಿಗೆ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವಂತೆ ಮನವಿ ಮಾಡಲಿದ್ದಾರೆ.
ಸಚಿವ ಬಿ ರಾಮುಲು ಅವರು ಎ 29ರಂದು ಬೆಳ್ಳಿಗ್ಗೆ 10 ಗಂಟೆಗೆ ಗಂಗಾವತಿಗೆ ಆಗಮಿಸಿ ಬಿಜೆಪಿ ಪರ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಶಂಕ್ರಣ್ಣ ಮುನವಳ್ಳಿ, ವೀರಭದ್ರಪ್ಪ ನಾಯಕ, ಜೋಗದ ಹನುಮಂತಪ್ಪ ನಾಯಕ, ಕಾಶಿನಾಥ ಸೇರಿ ಅನೇಕರಿದ್ದರು.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.