CSR ಅನುದಾನದ ಮೂಲಕ ಆರೋಗ್ಯ ಕೇಂದ್ರಗಳ ಉನ್ನತೀಕರಣ
100 ಕೋಟಿ ರೂ. ವೆಚ್ಚದಲ್ಲಿ 200 ಕೇಂದ್ರಗಳಿಗೆ ಮೂಲ ಸೌಕರ್ಯ
Team Udayavani, Dec 26, 2023, 11:52 PM IST
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಖಾಸಗಿ ಕಂಪೆನಿಗಳ ಸಿಎಸ್‌ಆರ್ ಅನುದಾನವನ್ನು ಬಳಸಿಕೊಂಡು ಸರಕಾರಿ ಆರೋಗ್ಯ ಕೇಂದ್ರಗಳ ಮೂಲಸೌಕರ್ಯ ಹಾಗೂ ಯಂತ್ರೋಪಕರಣಗಳ ಉನ್ನತೀಕರಣಕ್ಕೆ ಮುಂದಾಗಿದೆ.
ವಿವಿಧ ಖಾಸಗಿ ಕಂಪೆನಿಗಳ ಸಾಮಾಜಿಕ ಹೊಣೆಗಾರಿಕೆ ನಿಧಿಯನ್ನು ಬಳಸಿಕೊಂಡು ರಾಜ್ಯದಲ್ಲಿ ಆವಶ್ಯವಿರುವ 200 ಸರಕಾರಿ ಆರೋಗ್ಯ ಕೇಂದ್ರಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ಮಂಗಳವಾರ ಆರೋಗ್ಯ ಸೌಧದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸಿಎಸ್‌ಆರ್ ಬಾಕ್ಸ್ ಕಂಪೆನಿಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.
10 ಕೇಂದ್ರಗಳು ಆಯ್ಕೆ
ಮೊದಲ ಹಂತದಲ್ಲಿ ರಾಯಚೂರು ಜಿಲ್ಲೆಯ10 ಸರಕಾರಿ ಆರೋಗ್ಯ ಕೇಂದ್ರಗಳ ಮೂಲಸೌಕರ್ಯಗಳ ಕಾಮಗಾರಿಯನ್ನು 3 ಕೋಟಿ ರೂ. ಸಿಎಸ್‌ಆರ್ ಅನುದಾನದಲ್ಲಿ ಮಾಡಲಾಗುತ್ತಿದೆ. ಇದರ ಕಾರ್ಯ ಪ್ರಗತಿಯಲ್ಲಿದೆ. 2024ರ ಫೆ. ಅಂತ್ಯಕ್ಕೆ ಕಾಮಗಾರಿ ಮುಕ್ತಾಯವಾಗಲಿದೆ.
ರಾಜ್ಯದಲ್ಲಿ ಮೂಲಸೌಕರ್ಯ ಹಾಗೂ ಯಂತ್ರೋಪಕರಣಗಳ ಅಗತ್ಯವಿರುವ 200 ಸರಕಾರಿ ಆರೋಗ್ಯ ಕೇಂದ್ರಗಳನ್ನು ಗುರುತಿಸಲಾಗಿದೆ. ಆಸ್ಪತ್ರೆಗಳ ಅಗತ್ಯಕ್ಕೆ ತಕ್ಕಂತೆ ಕಟ್ಟಡ ನಿರ್ಮಾಣ, ಶೌಚಾಲಯ, ಕಟ್ಟಡ ಮೇಲ್ಛಾವಣಿ, ಕೊಠಡಿ ಸೇರಿದಂತೆ ಇತರ ನಿರ್ಮಾಣ ಕಾಮಗಾರಿ ಮಾಡಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.