ಉಪ್ಪಿನಂಗಡಿ; ಹಿಂದೂ ಯುವತಿಯ ಅಕ್ರಮ ಬಂಧನ; ರಕ್ಷಣೆ
ತಾನು ತನ್ನ ಪತ್ನಿಯ ಗೆಳತಿ ಮನೆಯಲ್ಲಿ ಇರುವುದನ್ನು ತಿಳಿಸಿದಾಗ ತಮಗೆ ಜೀವ ಬೆದರಿಕೆಯೊಡ್ಡಿದ್ದಾರೆಂದು ಆರೋಪಿಸಿದ್ದಾರೆ.
Team Udayavani, Feb 3, 2022, 10:51 AM IST
ಉಪ್ಪಿನಂಗಡಿ, ಫೆ. 2: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಕಣಿಯೂರು ಗ್ರಾಮದ ಪಿಲಿಗೂಡು ಎಂಬಲ್ಲಿ ಮುಸ್ಲಿಂ ಸಮುದಾಯದ ಮನೆಯಲ್ಲಿ ಹಿಂದೂ ಸಮುದಾಯದ ಯುವತಿಯನ್ನು ಅಕ್ರಮವಾಗಿ ಕೂಡಿ ಹಾಕಲಾಗಿದೆ ಎಂಬ ಮಾಹಿತಿಯಿಂದಾಗಿ ತಡ ರಾತ್ರಿ ಪೊಲೀಸ್ ಕಾರ್ಯಾಚರಣೆ ನಡೆಸಿ ಯುವತಿಯನ್ನು ವಶಕ್ಕೆ ಪಡೆದು ಆಕೆಯ ಹೆತ್ತವರ ಮನೆಗೆ ಕಳುಹಿಸಿಕೊಟ್ಟ ಘಟನೆ ವರದಿಯಾಗಿದೆ.
ಯುವತಿ ಪಿಲಿಗೂಡಿನ ಸಂಶುದ್ದೀನ್ ಎಂಬಾತನ ಮನೆಯಲ್ಲಿ ಅಕ್ರಮ ವಶದಲ್ಲಿದ್ದಾಳೆಂಬ ಮಾಹಿತಿಯನ್ನು ಸ್ಥಳೀಯ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಪೊಲೀಸರ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಠಾಣಾ ಪೊಲೀಸರು ರಾತ್ರಿ ಕಾರ್ಯಾಚರಣೆ ನಡೆಸಿ ಯುವತಿಯನ್ನು ಠಾಣೆಗೆ ಕರೆಯಿಸಿ ವಿಚಾರಣೆ ನಡೆಸಿದಾಗ, ತಾನು ಸ್ವ ಇಚ್ಚೆಯಿಂದ ನನ್ನ ಗೆಳತಿ ಮನೆಗೆ ಬಂದಿರುವುದಾಗಿ ತಿಳಿಸಿದ ಕಾರಣಕ್ಕೆ ಆಕೆಯಿಂದ ಹೇಳಿಕೆ ಪಡೆದು ಆಕೆಯ ಹೆತ್ತವರ ಮನೆಗೆ ಕಳುಹಿಸಿಕೊಡಲಾಗಿತ್ತು.
ಈ ವಿದ್ಯಮಾನದ ಬೆನ್ನಿಗೆಯೇ ಸಂಶುದ್ದೀನ್ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದು, ರಕ್ಷಿತ್, ಯಶೋಧರ, ಕಾರ್ತಿಕ್, ಹರೀಶ್, ಬಾಬು, ದೇವರಾಜ್ ಮತ್ತಿತರರು ತನ್ನ ಮನೆಯ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿ, ತನ್ನಲ್ಲಿ ಹಾಗೂ ತನ್ನ ದೊಡ್ಡಮ್ಮನಲ್ಲಿ ನಿಮ್ಮ ಮನೆಯಲ್ಲಿ ಯಾರಾದರೂ ಹಿಂದೂ ಯುವತಿ ಇದ್ದಾರಾ ಎಂದು ಪ್ರಶ್ನಿಸಿದ್ದು, ತಾನು ತನ್ನ ಪತ್ನಿಯ ಗೆಳತಿ ಮನೆಯಲ್ಲಿ ಇರುವುದನ್ನು ತಿಳಿಸಿದಾಗ ತಮಗೆ ಜೀವ ಬೆದರಿಕೆಯೊಡ್ಡಿದ್ದಾರೆಂದು ಆರೋಪಿಸಿದ್ದಾರೆ. ಈ ದೂರಿನನ್ವಯ ಉಪ್ಪಿನಂಗಡಿ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪೊಲೀಸರ ನಡೆಗೆ ಆಕ್ರೋಶ
ಯುವತಿಯ ಅಕ್ರಮ ಬಂಧನದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ, ಪೊಲೀಸರ ಸಮಕ್ಷಮವೇ ಯುವತಿಯ ರಕ್ಷಣಾ ಕಾರ್ಯಾಚರಣೆ ನಡೆದಿದ್ದು, ಘಟನಾವಳಿಯ ಸಂಪೂರ್ಣ ವೀಡಿಯೋ ಚಿತ್ರೀಕರಣ ಮಾಡಲಾಗಿದ್ದರೂ, ಸತ್ಯ ಏನೆನ್ನುವುದು ಪೊಲೀಸರಿಗೆ ಗೊತ್ತಿದ್ದರೂ ಪ್ರಕರಣದಲ್ಲಿ ಸಂಶಯಕ್ಕೆ ತುತ್ತಾದ ವ್ಯಕ್ತಿ ಪೊಲೀಸರಿಗೆ ದೂರು ನೀಡಿದ ಕೂಡಲೇ ಪ್ರಕರಣ ದಾಖಲಿಸಲು ಪೊಲೀಸರು ಮುತುವರ್ಜಿ ವಹಿಸಿರುವುದರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಪೊಲೀಸರ ಕ್ರಮವನ್ನು ಸಾರ್ವಜನಿಕರು ಕೂಡ ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
ಮಂಗಳೂರಿಗೆ ವಾಟರ್ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ
Puttur: ಮಾದಕ ವಸ್ತು ಎಂಡಿಎಂಎ ಸಾಗಾಟ ಪ್ರಕರಣ; ಆರೋಪಿಗೆ ಜಾಮೀನು
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.