Uppinangady: 12 ವರ್ಷ ಹಿಂದಿನ ಚಿನ್ನಾಭರಣ ಕಳ್ಳತನ ಪ್ರಕರಣದ ಆರೋಪಿ ಸೆರೆ
Team Udayavani, Aug 2, 2024, 10:55 PM IST
ಉಪ್ಪಿನಂಗಡಿ: ಹನ್ನೆರಡು ವರ್ಷಗಳ ಹಿಂದೆ ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಗೋಳಿತೊಟ್ಟು ಎಂಬಲ್ಲಿ ಮಹಿಳೆಯೋರ್ವರ ಕತ್ತಿನಲ್ಲಿದ್ದ ಚಿನ್ನದ ಆಭರಣವನ್ನು ಎಳೆದೊಯ್ದ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಒಳಗಾಗದೆ ತಲೆ ಮರೆಸಿಕೊಂಡಿದ್ದ ಮಹಮ್ಮದ್ ಶಾಫಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಸುರತ್ಕಲ್ ಬೊಕ್ಕಬೆಟ್ಟು ಗ್ರಾಮದ ಕೃಷ್ಣಾಪುರ 8ನೇ ಬ್ಲಾಕ್ ನಿವಾಸಿ ಮಹಮ್ಮದ್ ಶಾಫಿ 2012ರಲ್ಲಿ ಗೋಳಿತೊಟ್ಟು ಎಂಬಲ್ಲಿ ಬೈಕಿನಲ್ಲಿ ಬಂದು ಪಾದಾಚಾರಿ ಮಹಿಳೆಯ ಚಿನ್ನಾಭರಣವನ್ನು ಎಳೆದೊಯ್ದಿದ್ದ. ಬಳಿಕ ನ್ಯಾಯಾಲಯದಲ್ಲಿನ ವಿಚಾರಣೆಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ.
ಈತನ ಬಗ್ಗೆ ಶೋಧ ಕಾರ್ಯಾಚರಣೆ ನಡೆಸಿದ್ದ ಉಪ್ಪಿನಂಗಡಿ ವೃತ್ತ ನಿರೀಕ್ಷಕರಾದ ರವಿ ಬಿ. ಎಸ್. ಅವರ ತಂಡ ಆರೋಪಿಯ ಜಾಡು ಹಿಡಿದು ಉಡುಪಿ ಜಿಲ್ಲೆಯ ಅಂಪಾರು ಎಂಬಲ್ಲಿ ಗುರುವಾರ ಪತ್ತೆ ಹಚ್ಚಿ ಬಂಧಿಸಿದ್ದಾರೆ. ಆರೋಪಿಯು ಬೆಳ್ತಂಗಡಿ, ಬಂಟ್ವಾಳ, ವಿಟ್ಲ , ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಗಳಲ್ಲಿ ನಡೆಸಿದ ಅಪರಾಧ ಕೃತ್ಯಗಳಲ್ಲಿಯೂ ತಲೆ ಮರೆಸಿಕೊಂಡಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.