Uppinangady;ರೆಖ್ಯ ಸೇತುವೆ ಕಾಮಗಾರಿ ವೇಳೆ ಅವಘಡ: ಹಲಗೆ, ಕಬ್ಬಿಣದ ಸರಳು ಕುಸಿತ
ಕಾಮಗಾರಿ ಸ್ಥಗಿತ
Team Udayavani, May 31, 2024, 6:47 AM IST
ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರ ವಿಸ್ತರಣೆಯ ಸೇತುವೆ ಕಾಮಗಾರಿ ವೇಳೆ ಕಾಂಕ್ರೀಟ್ ಭಾರ ತಾಳಲಾರದೇ ಜೋಡಿಸಲ್ಪಟ್ಟ ಕಬ್ಬಿಣದ ಸರಳು ಸಹಿತ ಹಲಗೆ ಕುಸಿದು ಬಿದ್ದ ಘಟನೆ ರೆಖ್ಯ ಗ್ರಾಮದ ಪರಕ್ಕಳದಲ್ಲಿ ಬುಧವಾರ ಸಂಭವಿಸಿದೆ.
ಅಡ್ಡಹೊಳೆ- ಬಿ.ಸಿ.ರೋಡ್ ನಡುವೆ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು ರೆಖ್ಯ ಗ್ರಾಮದ ಪರಕ್ಕಳದಲ್ಲಿ ತೋಡಿಗೆ ಹೊಸ ಸೇತುವೆ ನಿರ್ಮಾಣ ನಡೆಯುತ್ತಿದೆ. ಪಿಲ್ಲರ್ ಕಾಮಗಾರಿ ಮುಗಿದಿದ್ದು ಅದರ ಮೇಲೆ ಹಲಗೆ, ಕಬ್ಬಿಣದ ಸರಳು ಜೋಡಿಸಿ ಮೇ 29ರಂದು ಸಂಜೆ ಯಂತ್ರದ ಮೂಲಕ ಕಾಂಕ್ರಿಟ್ ತುಂಬಿಸಲಾಗುತ್ತಿತ್ತು. ಸುಮಾರು 10 ಮೀಟರ್‌ನಷ್ಟು ಕಾಂಕ್ರೀಟ್ ತುಂಬಿಸುತ್ತಿದ್ದಂತೆ ಭಾರ ತಾಳಲಾರದೇ ಜೋಡಿಸಿದ್ದ ಹಲಗೆ, ಕಬ್ಬಿಣದ ಸರಳಿನ ಜೊತೆಗೆ ಕಾಂಕ್ರಿಟ್ ತೋಡಿಗೆ ಕುಸಿದು ಬಿದ್ದಿದೆ.
ಇದರಿಂದಾಗಿ ಇಲ್ಲಿ ಕಾಮಗಾರಿ ಸ್ಥಗಿತಗೊಂಡಿದೆ. ಯಂತ್ರದ ಮೂಲಕ ಕಾಂಕ್ರಿಟ್ ಹಾಕುತ್ತಿದ್ದುದ್ದರಿಂದ ಯಾವುದೇ ಅನಾಹುತ ನಡೆದಿಲ್ಲ. ಇಲ್ಲಿ ಸಮರ್ಪಕವಾದ ಬೀಮ್ ಅಳವಡಿಸಿಲ್ಲ, ಕಳಪೆ ಕಾಮಗಾರಿಯಿಂದಾಗಿ ಅವಘಡ ಸಂಭವಿಸಿರಬಹುದು ಸಾರ್ವಜನಿಕರು ಆರೋಪಿಸಿದ್ದಾರೆ. ಇದರ ಪಕ್ಕದಲ್ಲೇ ಹೊಸ ಸೇತುವೆ ನಿರ್ಮಾಣಗೊಂಡಿದ್ದು ಕೆಲವು ದಿನಗಳಿಂದ ವಾಹನಗಳು ಸಂಚರಿಸುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mysuru: ಮೈಸೂರಲ್ಲಿ ಚಳಿ ತಡೆಯಲಾಗದೆ ರಾತ್ರಿ ಮಲಗಿದ್ದಲ್ಲೇ ವ್ಯಕ್ತಿ ಸಾವು?
ಗ್ರಾಮ ಪಂಚಾಯಿತಿ ವ್ಯಾಪ್ತಿಯ 90 ಲಕ್ಷ ಆಸ್ತಿಗಳಿಗೆ ಇ-ಸ್ವತ್ತು: ಸಚಿವ ಪ್ರಿಯಾಂಕ್
Conference: ಜ.18, 19ರಂದು ರಾಜ್ಯಮಟ್ಟದ ಬ್ರಾಹ್ಮಣ ಮಹಾ ಸಮ್ಮೇಳನ
Mahakumbh Mela 2025: 144 ವರ್ಷಗಳಿಗೆ ಒಮ್ಮೆ ನಡೆಯುವ ಆಧ್ಯಾತ್ಮಿಕ ವಿಸ್ಮಯ ಮಹಾ ಕುಂಭಮೇಳ
Udupi; ಮಕರ ಸಂಕ್ರಾಂತಿ ಸಂಭ್ರಮ: ಕೃಷ್ಣ ಗೀತಾನುಗ್ರಹ ಮಂಟಪ ಉದ್ಘಾಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.