Uppinangady: ಹೆದ್ದಾರಿ ತಡೆಗೋಡೆ ಕುಸಿತ
Team Udayavani, May 21, 2024, 11:41 PM IST
ಉಪ್ಪಿನಂಗಡಿ: ಪುತ್ತೂರು- ಉಪ್ಪಿನಂಗಡಿ ನಡುವಣದ ರಸ್ತೆಯ ವಿಸ್ತರಣೆ ಬಿರುಸಿನಿಂದ ನಡೆಯುತ್ತಿದ್ದು, 34ನೇ ನೆಕ್ಕಿಲಾಡಿ-ಬೊಳುವಾರು ರಾಜ್ಯ ಹೆದ್ದಾರಿಯ ಆದರ್ಶನಗರದಲ್ಲಿ ಭಜನ ಮಂದಿರಕ್ಕೆ ಹೋಗುವ ರಸ್ತೆಯ ಪಾರ್ಶ್ವದಲ್ಲಿ ನಿರ್ಮಿಸಿರುವ 15 ಅಡಿ ಎತ್ತರದ ಕಾಂಕ್ರೀಟ್ ತಡೆಗೋಡೆ ಮಂಗಳವಾರ ಕುಸಿದು ಬಿದ್ದಿದೆ.
ತಡೆಗೋಡೆ ಬಾಳಿಕೆಯ ಬಗ್ಗೆ ಸ್ಥಳೀಯರಿಗೆ ನಿರ್ಮಾಣ ಹಂತದಲ್ಲೇ ಸಂಶಯ ಬಂದಿತ್ತಾದರೂ ಎಂಜಿನಿಯರ್‌ಗಳ ಮುಂದೆ ಹೇಳಲಾಗದೆ ಮೌನವಾಗಿದ್ದರು. ಸೋಮವಾರ ರಾತ್ರಿ ಸುರಿದ ಭಾರೀ ಮಳೆಗೆ ತಡೆಗೋಡೆಯ ಅರ್ಧ ಭಾಗ ಧರಾಶಾಯಿಯಾಗಿದೆ.
ಸ್ಥಳಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿ ಎಂಜಿನಿಯರ್‌ಗಳನ್ನು ಸ್ಥಳಕ್ಕೆ ಕರೆಯಿಸಿ ತರಾಟೆಗೆ ತೆಗೆದುಕೊಂಡರಲ್ಲದೆ, ಕಾಮಗಾರಿಯನ್ನು ಗುಣಮಟ್ಟ ದೊಂದಿಗೆ ನಡೆಸುವಂತೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
Kadaba: ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣ; ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.