Uppinangady: ತಲೆಗೆ ಕಲ್ಲಿನಿಂದ ಜಜ್ಜಿ ಕಾರ್ಮಿಕನ ಕೊ*ಲೆ
ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿಯ ಕಟ್ಟಡದಲ್ಲಿ ಕೃತ್ಯ
Team Udayavani, Dec 5, 2024, 6:45 AM IST
ಉಪ್ಪಿನಂಗಡಿ: ಇಲ್ಲಿನ ಬಸ್ ನಿಲ್ದಾಣದ ಬಳಿಯ ಗ್ರಾಮ ಪಂಚಾಯತ್ ಸ್ವಾಮ್ಯದ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಅಸ್ಸಾಂ ಮೂಲದ ಕಾರ್ಮಿಕನೋರ್ವನ ತಲೆಗೆ ಕಲ್ಲಿನಿಂದ ಜಜ್ಜಿ ಕೊಲೆಗೈದ ಘಟನೆ ಬುಧವಾರ ಬೆಳಕಿಗೆ ಬಂದಿದೆ.
ಕೆಲವು ಸಮಯಗಳ ಹಿಂದೆ ಸ್ಥಳೀಯ ಬಾರ್ ಆ್ಯಂಡ್ ರೆಸ್ಟೋರೆಂಟಿನಲ್ಲಿ ಕೆಲಸ ಮಾಡಿಕೊಂಡಿದ್ದ ಎನ್ನಲಾದ ಹಾಗೂ ಇತ್ತೀಚೆಗೆ ಕಟ್ಟಡ ನಿರ್ಮಾಣ ಕಾರ್ಯ ದಲ್ಲಿ ಕಾರ್ಮಿಕನಾಗಿ ತೊಡಗಿಕೊಂಡಿದ್ದ ಅಸ್ಸಾಂ ರಾಜ್ಯದ ಕರ್ಬಿ ಅಂಗ್ಲಾಂಗ್ ಜಿಲ್ಲೆಯ ಕ್ರಿಶ್ಚಿಯನ್ ಗ್ರಾಮದ ದೀಪಕ್ ಬೆಂಗರ (34) ಕೊಲೆಗೀಡಾದವ.
ದೇಹದಲ್ಲಿ ಟಿ-ಶರ್ಟ್ ಮಾತ್ರವಿತ್ತು
ಕಾರ್ಮಿಕರು ಬುಧವಾರ ಮುಂಜಾನೆ ಕಾಮಗಾರಿಯ ಸಲುವಾಗಿ ಕಟ್ಟಡವನ್ನು ಪ್ರವೇಶಿಸಿದಾಗ ಕಟ್ಟಡದ ಮೊದಲ ಮಹಡಿಯಲ್ಲಿ ಮಲಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ತಲೆಯ ಭಾಗವನ್ನು ಕಲ್ಲಿನಂತಹ ಭಾರವಾದ ವಸ್ತುವಿನ ಸಹಾಯದಿಂದ ಜಜ್ಜಿ ಕೊಲೆಗೈದಂತೆ ಕಂಡುಬಂದಿದೆ. ದೇಹದಲ್ಲಿ ಟೀ ಶರ್ಟ್ ಮಾತ್ರ ಇತ್ತು.
ಅಧಿಕಾರಿಗಳ ಭೇಟಿ
ಘಟನ ಸ್ಥಳಕ್ಕೆ ದ.ಕ. ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ| ಯತೀಶ್ ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಜೇಂದ್ರ, ವಿಧಿವಿಜ್ಞಾನ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಂಚಾಯತ್ ಕಾರ್ಯದರ್ಶಿಯವರು ನೀಡಿದ ದೂರಿನ ಆಧಾರದಲ್ಲಿ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಮೊಬೈಲ್ ಸಿಮ್ ತೆಗೆದಿರಿಸಿದ್ದರು
ಸನಿಹದಲ್ಲೇ ಸಿಮ್ ತೆಗೆದಿರಿಸಲಾದ ಹಾಗೂ ಬ್ಯಾಟರಿ ಬೇರ್ಪಡಿಸಲಾಗಿದ್ದ ಮೊಬೈಲ್ ಫೋನ್ ಪತ್ತೆಯಾಗಿದೆ. ಸಿಮ್ ತೆಗೆದಿರುವುದರಿಂದ ಮೃತನ ಒಡನಾಟ ಇರಿಸಿಕೊಂಡವರೇ ಹತ್ಯೆ ಮಾಡಿರುವ ಸಾಧ್ಯತೆ ಇದೆ. ಮೃತದೇಹದ ಬಳಿ ಇದ್ದ ಚುನಾವಣ ಗುರುತು ಪತ್ರದ ಆಧಾರದಲ್ಲಿ ಹೆಸರು ವಿಳಾಸವನ್ನು ಪತ್ತೆ ಹಚ್ಚಲು ಸಾಧ್ಯವಾಯಿತು.
ಕೃತ್ಯಕ್ಕೆ ಅಮಲು ಪದಾರ್ಥ ಸೇವನೆ ಕಾರಣ?
ಪಂಚಾಯತ್ ಆಡಳಿತದ ಕನಸಿನ ಕೂಸಾಗಿರುವ ಹೈಟೆಕ್ ಗ್ರಂಥಾಲಯದ ಬಗ್ಗೆ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ವಲಸೆ ಕಾರ್ಮಿಕರು ಠಿಕಾಣಿ ಹೂಡಿ ರಾತ್ರಿ ವೇಳೆ ಮದ್ಯ ಸೇವಿಸಿ ಸಂಘರ್ಷ ಮಾಡುತ್ತಿರುವುದು ಇಲ್ಲಿ ಸರ್ವೆ ಸಾಮಾನ್ಯವಾಗಿತ್ತು. ಮಾದಕ ದ್ರವ್ಯದ ಅಮಲಿನಲ್ಲಿ ಜತೆಗಿದ್ದವರೇ ಕಲ್ಲಿನಿಂದ ತಲೆಯನ್ನು ಜಜ್ಜಿ ಕೊಲೆಗೈದಿರಬಹುದೆಂದು ಪ್ರಾಥಮಿಕ ತನಿಖೆಯಲ್ಲಿ ಕಂಡುಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.