ಸರಕಾರದ ಧೋರಣೆಗೆ ಮೇಲ್ಮನೆಯಲ್ಲಿ ಗದ್ದಲ- 7ನೇ ವೇತನ ಆಯೋಗ ಜಾರಿಗೆ ಆಗ್ರಹ
ಗದ್ದಲದಿಂದ ಸದನ ಮುಂದೂಡಿಕೆ
Team Udayavani, Dec 5, 2023, 11:09 PM IST
ಬೆಳಗಾವಿ: ಸರಕಾರಿ ನೌಕರರಿಗೆ 7ನೇ ವೇತನ ಆಯೋಗಕ್ಕೆ ಸಂಬಂಧಿಸಿದ ವರದಿ ವಿಚಾರದಲ್ಲಿ ಸರಕಾರದ ಧೋರಣೆ ಖಂಡಿಸಿ ಮೇಲ್ಮನೆಯಲ್ಲಿ ಬಾವಿಗಿಳಿದ ವಿಪಕ್ಷಗಳು, ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ನೀಡಬೇಕು ಎಂದು ಪಟ್ಟುಹಿಡಿದವು. ಇದರಿಂದ ಉಂಟಾದ ಗದ್ದಲದಿಂದ ಸದನವನ್ನು ಬುಧವಾರಕ್ಕೆ ಮುಂದೂಡಲಾಯಿತು.
ಮಂಗಳವಾರ ಮಧ್ಯಾಹ್ನ ಸದನ ಆರಂಭವಾಗುತ್ತಿದ್ದಂತೆ ನಿಯಮ 330ರ ಅಡಿ ವಿಷಯ ಪ್ರಸ್ತಾವಿಸಿದ ಬಿಜೆಪಿಯ ವೈ.ಎ. ನಾರಾಯಣಸ್ವಾಮಿ, ಸರಕಾರಿ ನೌಕರರಿಗೆ 7ನೇ ವೇತನ ಆಯೋಗ ವರದಿ ಪೂರ್ಣಗೊಂಡಿದ್ದರೂ, ವಿನಾಕಾರಣ ಸರಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ. ಎರಡೂವರೆ ಲಕ್ಷ ಹುದ್ದೆಗಳು ಖಾಲಿ ಇವೆ. ಅದರಿಂದ ವೇತನ ರೂಪದಲ್ಲಿ ಪಾವತಿಸಬಹುದಾದ ವಾರ್ಷಿಕ ಅಂದಾಜು ಹತ್ತು ಸಾವಿರ ಕೋಟಿ ರೂ.ಉಳಿಯುತ್ತದೆ. ಅದೇ ಹಣವನ್ನು ಈ ವೇತನ ಆಯೋಗ ಜಾರಿಗೆ ವಿನಿಯೋಗಿಸಲು ಅವಕಾಶವಿದೆ. ಆದ್ದರಿಂದ ಕೂಡಲೇ ಜಾರಿಗೊಳಿಸಬೇಕೆಂದು ಆಗ್ರಹಿಸಿದರು.
ಇದಕ್ಕೆ ಬಿಜೆಪಿ ಮತ್ತು ಜೆಡಿಎಸ್‌ನ ಬಹುತೇಕ ಎಲ್ಲ ಸದಸ್ಯರು ದನಿಗೂಡಿಸಿದರು. ಆಗ ಪ್ರತಿಕ್ರಿಯಿಸಿದ ಸಭಾ ನಾಯಕ ಬೋಸರಾಜ, ಸೂಕ್ತ ಅಧ್ಯಯನ ನಡೆಸುವ ಅಗತ್ಯತೆ ಮನಗಂಡು ಬರುವ ಮಾರ್ಚ್ 15ರವರೆಗೆ ವಿಸ್ತರಿಸಲಾಗಿದೆ. ಈಗಾಗಲೇ ಡಿಸೆಂಬರ್‌ನಲ್ಲಿದ್ದೇವೆ. ವರದಿ ಕೈಸೇರುತ್ತಿದ್ದಂತೆ ನ್ಯಾಯ ಒದಗಿಸಲು ಸರಕಾರ ಬದ್ಧ ಎಂದರು. ಇದಕ್ಕೆ ತೃಪ್ತರಾಗದ ಪ್ರತಿಪಕ್ಷಗಳ ಸದಸ್ಯರು, ವರದಿ ಪೂರ್ಣಗೊಂಡಾಗಿದೆ. ಆದರೆ, ತೆಗೆದುಕೊಳ್ಳಲು ಸರಕಾರ ತಯಾರಿಲ್ಲ. ಈ ಧೋರಣೆ ಯಾಕೆ? ಈ ವಿಚಾರದಲ್ಲಿ ಸ್ವತಃ ಮುಖ್ಯಮಂತ್ರಿಗಳು ಸದನದಲ್ಲಿ ಸ್ಪಷ್ಟ ನಿಲುವು ಪ್ರಕಟಿಸಬೇಕೆಂದು ಒತ್ತಾಯಿಸಿದರು.
ಮಧ್ಯಪ್ರವೇಶಿಸಿದ ಸಭಾಪತಿಗಳು, ಮನವೊಲಿಸಲು ಯತ್ನಿಸಿದರು. ಆದರೆ, ಪಟ್ಟುಸಡಿಲಿಸದ ಕಾರಣ ಸದನ ಮುಂದೂಡಲಾಯಿತು. ಇದಕ್ಕೂ ಮುನ್ನ ಸದಸ್ಯರಾದ ಶಶೀಲ ನಮೋಶಿ, ಭೋಜೇಗೌಡ, ತೇಜಸ್ವಿನಿಗೌಡ, ಎಸ್.ವಿ. ಸಂಕನೂರ, ಅನಿಲ್ ಕುಮಾರ್, ಮರಿತಿಬ್ಬೇಗೌಡ, ಎಚ್. ವಿಶ್ವನಾಥ್ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.