![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 11, 2024, 11:40 PM IST
ಬೆಂಗಳೂರು: ಪುರಸಭೆ ಮತ್ತು ಮಹಾ ನಗರ ಪಾಲಿಕೆ ವ್ಯಾಪ್ತಿಯ ಕೃಷಿ ಭೂಮಿಯನ್ನು ಕೃಷಿ ಯೇತರ ಚಟುವಟಿಕೆಗಳಿಗೆ ಬಳಸಿಕೊಳ್ಳಲು ಪ್ರತ್ಯೇಕ ವಾಗಿ ಭೂಪರಿವರ್ತನೆಯ ಅಗತ್ಯವಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.
“ಕರ್ನಾಟಕ ಭೂ ಕಂದಾಯ ಕಾಯ್ದೆ- 1964ರ ಸೆಕ್ಷನ್ 95ರಿಂದ 97ರ ಪ್ರಕಾರ ಪುರಸಭೆ ಮತ್ತು ನಗರ ಪಾಲಿಕೆಗಳ ವ್ಯಾಪ್ತಿಗೆ ಬರುವ ಕೃಷಿ ಜಮೀನುಗಳನ್ನು ಕೃಷಿಯೇತರ ಚಟುವಟಿಕೆಗಳಿಗೆ ಪರಿವರ್ತಿಸಲಾಗಿದೆ’ ಎಂದು ಪರಿಗಣಿಸಲಾಗುತ್ತದೆ. ಹಾಗಾಗಿ ಈ ಜಮೀನುಗಳಿಗೆ ಪ್ರತ್ಯೇಕವಾಗಿ ಭೂಪರಿವರ್ತನೆ ಅಗತ್ಯವಿಲ್ಲ ಎಂದು ಹೈಕೋರ್ಟ್ ಆದೇಶದಲ್ಲಿ ಸ್ಪಷ್ಟಪಡಿಸಿದೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಉದ್ಯಮಿ ಶ್ರೀಶೈಲ ಎಂಬವರು ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.
ಈ ಸಂಬಂಧ ಬಿಬಿಎಂಪಿ ವ್ಯಾಪ್ತಿ ಯಲ್ಲಿ ಬರುವ ಜಮೀನಿನ ಪ್ರಕರಣಕ್ಕೆ ಸಂಬಂಧಿಸಿ ಈ ಹಿಂದೆ ಹೈಕೋರ್ಟ್ ನೀಡಿರುವ ತೀರ್ಪನ್ನು ಉಲ್ಲೇಖೀಸಿದೆ. ಅರ್ಜಿಯಲ್ಲಿ ಪ್ರಶ್ನಿಸಲಾದ ಜಮೀನು ಪುರಸಭೆ ವ್ಯಾಪ್ತಿಗೆ ಬರುತ್ತದೆ. ಹಾಗಾಗಿ ನಗರಪಾಲಿಕೆಗೆ ಸಾಮ್ಯತೆ ಹೊಂದಿರುವ ಪುರಸಭೆಗೂ ಅದೇ ತತ್ವ ಅನ್ವಯವಾಗಲಿದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ವಿವರಿಸಿದೆ.
ಪ್ರಕರಣದ ಹಿನ್ನೆಲೆ
ಅರ್ಜಿದಾರರು ತಮ್ಮ 1.29 ಎಕರೆ ಜಮೀನನ್ನು ಕೃಷಿಯೇತರ ಚಟುವಟಿಕೆಗಳಿಗೆ ಬಳಸಲು ಅರ್ಜಿ ಸಲ್ಲಿಸಿದ್ದರು. ಜಿಲ್ಲಾಧಿಕಾರಿಗಳು ಅನುಮತಿ ನೀಡಿ ದ್ದರು. ಪರಿವರ್ತಿತ ಈ ಜಮೀನಿನಲ್ಲಿ 14,436
ಚದ ರಡಿಯಲ್ಲಿ ಅರ್ಜಿದಾರರು ಪೆಟ್ರೋಲ್
ಬಂಕ್ ನಿರ್ಮಿಸಿ ಇನ್ನುಳಿದ ಜಮೀನಿನಲ್ಲಿ
ವಾಣಿಜ್ಯ ಕಟ್ಟಡ ನಿರ್ಮಾಣಕ್ಕಾಗಿ ಪ್ರಸ್ತಾವ ಸಲ್ಲಿಸಿ ದ್ದರು. ಆದರೆ ಬೈಲಹೊಂಗಲ ಪುರಸಭೆಯು ವಾಣಿಜ್ಯ ಕಟ್ಟಡಗಳಿಗೆ ನಕ್ಷೆ ಮಂಜೂರು ಮಾಡು ವಂತೆ ಕೋರಿದ್ದ ಮನವಿಯನ್ನು 2022ರ ಅ. 13ರಂದು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಅರ್ಜಿ ದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.