Madanthyar: ಉರುವಾಲು; ಸಿಡಿಲು ಬಡಿದು ಮನೆಗೆ ಹಾನಿ
Team Udayavani, Oct 1, 2024, 12:59 AM IST
ಮಡಂತ್ಯಾರು: ಇಲ್ಲಿನ ಉರುವಾಲು ಗ್ರಾಮದಲ್ಲಿ ಸೋಮವಾರ ಸಂಜೆ ಮನೆಗೆ ಸಿಡಿಲು ಬಡಿದು ಅಪಾರ ಹಾನಿ ಉಂಟಾಗಿದೆ.
ತಾರಿದಡಿ ನಿವಾಸಿ ಸೇಸಪ್ಪ ಅವರ ಮನೆಗೆ ಸಂಜೆ ನಾಲ್ಕು ಗಂಟೆ ಸುಮಾರಿಗೆ ಸಿಡಿಲು ಬಡಿದಿದ್ದು, ಗೋಡೆ ಬಿರುಕು ಬಿಟ್ಟಿದೆ. ಜತೆಗೆ ವಿದ್ಯುತ್ ಉಪಕರಣಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಈ ಸಂದರ್ಭ ಸೇಸಪ್ಪ ಗೌಡರು ಮಕ್ಕಳನ್ನು ಶಾಲೆಯಿಂದ ಕರೆದುಕೊಂಡು ಬರಲು ಹೋಗಿದ್ದರು. ಆದ್ದರಿಂದ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. 9 ವರ್ಷಗಳ ಹಿಂದೆ ಕಟ್ಟಿದ್ದ ಈ ಕಾಂಕ್ರೀಟ್ ಮನೆ ಸಂಪೂರ್ಣ ಹಾನಿಗೀಡಾಗಿದೆ ಎಂದು ಸೇಸಪ್ಪ ತಿಳಿಸಿದ್ದಾರೆ.
ಉಪ್ಪಿನಂಗಡಿ: ಭಾರೀ ಮಳೆ
ಉಪ್ಪಿನಂಗಡಿ: ಸೋಮವಾರ ರಾತ್ರಿ ಉಪ್ಪಿನಂಗಡಿಯಲ್ಲಿ ಸಿಡಿಲಬ್ಬರದೊಂದಿಗೆ ಸುರಿದ ಭಾರೀ ಗಾಳಿ ಮಳೆಗೆ ಅಪಾರ ಹಾನಿ ಸಂಭವಿಸಿದೆ.
ಉಪ್ಪಿನಂಗಡಿಯಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದ್ದು, ಸಿಡಿಲಿನ ತೀವ್ರತೆಗೆ ವಿದ್ಯುತ್ ಸರಬರಾಜಿನಲ್ಲಿ ಅಳವಡಿಸಲಾದ ಸಲಕರಣೆಗಳು ಹಾನಿಗೀಡಾಗಿವೆ. ಇದರಿಂದಾಗಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವುಂಟಾಯಿತು. ಪರಿಸರದಲ್ಲಿ 5 ವಿದ್ಯುತ್ ಕಂಬಗಳು ತುಂಡಾಗಿವೆ. ಮಧ್ಯಾಹ್ನದ ವರೆಗೆ ಸುಡುವ ಬಿಸಿಲಿನ ವಾತಾವರಣವಿದ್ದು, ಸಾಯಂಕಾಲವಾಗುತ್ತಿದ್ದಂತೆಯೇ ಮೋಡ ಆವರಿಸಿ ರಾತ್ರಿ ಬಿರುಸಿನ ಮಳೆ ಸುರಿಯಲಾರಂಭಿಸಿತ್ತು. ಭಾರೀ ಗಾಳಿಗೆ ಸಿಲುಕಿದ ಕೆಲವು ಛಾವಣಿಯ ಶೀಟುಗಳು ಶೀಟ್‌ಗಳು, ಜಾಹೀರಾತು ಫಲಕಗಳು ಹಾರಿ ಹೋಗಿವೆ. ಕೃಷಿ ಬೆಳೆಗಳಿಗೂ ಹಾನಿಯಾಗಿದೆ.
ವಿವಿಧೆಡೆ ಗುಡುಗು ಸಹಿತ ಮಳೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಸೋಮವಾರ ಸಂಜೆ ವೇಳೆ ಗುಡುಗು ಸಹಿತ ಮಳೆಯಾಗಿದೆ.
ಬೆಳ್ತಂಗಡಿಯಲ್ಲಿ ಮಧ್ಯಾಹ್ನ ಬಳಿಕ ಗುಡುಗು ಸಹಿತ ಮಳೆಯಾಗಿದೆ. ಬಂಟ್ವಾಳ ತಾಲೂಕಿನ ಹಲವೆಡೆ ಸಂಜೆ ಮಳೆ ಸುರಿದಿದೆ.
ಪುತ್ತೂರಿನಲ್ಲೂ ಗುಡುಗು ಸಹಿತ ಉತ್ತಮ ಮಳೆಯಾಗಿದೆ. ಮಂಗಳೂರಿನಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಸಾಮಾನ್ಯ ಮಳೆಯಾಗಿದೆ. ಕರಾವಳಿಯ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಂಗಳೂರಿನಲ್ಲಿ ದಿನದ ಗರಿಷ್ಠ ತಾಪಮಾನ 32 ಡಿ.ಸೆ. ಮತ್ತು ಕನಿಷ್ಠ ತಾಪಮಾನ 25.2 ಡಿ.ಸೆ. ದಾಖಲಾಗಿತ್ತು.
ಉಡುಪಿಯಲ್ಲಿ
ಉಡುಪಿ: ಜಿಲ್ಲೆಯಲ್ಲಿ ಸೋಮವಾರ ಹಲವೆಡೆ ಬಿಸಿಲು ವಾತಾವರಣವಿದ್ದು, ಸಂಜೆ ವೇಳೆ ಉತ್ತಮ ಮಳೆಯಾಗಿದೆ. ಉಡುಪಿ, ಮಣಿಪಾಲ, ಮಲ್ಪೆ, ಕುಂದಾಪುರ, ಕಾರ್ಕಳ ಸುತ್ತಮುತ್ತ ಬಿಟ್ಟುಬಿಟ್ಟು ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
MUST WATCH
ಹೊಸ ಸೇರ್ಪಡೆ
Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು
NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ
Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.