ಮಹಿಳಾ ಶಕ್ತಿ ಉದ್ದಿಮೆಗಳ ಅಭಿವೃದ್ಧಿಗೆ ವಿನಿಯೋಗ

ಅಮೃತ್‌ ಯೋಜನೆಯಡಿ ಸ್ತ್ರೀಶಕ್ತಿ ಗುಂಪುಗಳಿಗೆ ಚೆಕ್‌ ವಿತ ರಿಸಿ ಸಚಿವ ಸುನಿಲ್‌

Team Udayavani, Apr 23, 2022, 5:15 AM IST

ಮಹಿಳಾ ಶಕ್ತಿ ಉದ್ದಿಮೆಗಳ ಅಭಿವೃದ್ಧಿಗೆ ವಿನಿಯೋಗ

ಮಂಗಳೂರು: ಮಹಿಳೆಯರ ಶಕ್ತಿ ಸಾಮರ್ಥ್ಯ ಕುಟುಂಬಕ್ಕೆ ಸೀಮಿತವಾಗದೆ, ಉದ್ದಿಮೆಗಳ ಬೆಳವಣಿಗೆಗೆ, ತನ್ಮೂಲಕ ಆರ್ಥಿಕ ಅಭಿವೃದ್ಧಿಗೆ ವಿನಿಯೋಗವಾಗಬೇಕು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಖಾತೆಯ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್‌ ಕುಮಾರ್‌ ಹೇಳಿದರು.

ಅವರು ಶುಕ್ರವಾರ ದ.ಕ. ಜಿಲ್ಲಾಡಳಿತ, ಜಿ.ಪಂ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಸಹಯೋಗದಲ್ಲಿ ಜಿ.ಪಂ. ಸಭಾಂಗಣದಲ್ಲಿ ಅಮೃತ್‌ ಸ್ವಸಹಾಯ ಉದ್ದಿಮೆ ಯೋಜನೆಯಡಿ ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳ ಸದಸ್ಯರಿಗೆ ಚೆಕ್‌ ವಿತರಿಸಿ ಮಾತನಾಡಿದರು.

ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಅಂಗವಾಗಿ ರಾಷ್ಟ್ರಾದ್ಯಂತ ವಿವಿಧ ವಿಶೇಷ ಕಾರ್ಯ ಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ರಾಜ್ಯದಲ್ಲಿ “ಅಮೃತ್‌’ ಹೆಸರಿನಲ್ಲಿ ಎಲ್ಲ ಇಲಾಖೆಗಳಲ್ಲಿ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ. ಸ್ತ್ರೀಶಕ್ತಿ ಸಂಘಟನೆಗಳು ವಿವಿಧ ಉದ್ದಿಮೆಗಳನ್ನು ಆರಂಭಿಸುವಂತೆ ಉತ್ತೇಜಿಸಲು ಬೀಜಧನ ಒದಗಿಸುವ ಕಾರ್ಯಕ್ರಮ ಈ ಪೈಕಿ ಒಂದು. ದ.ಕ. ಜಿಲ್ಲೆಯಲ್ಲಿ 185 ಸ್ತ್ರೀಶಕ್ತಿ ಸಂಘಟನೆಗಳಿಗೆ ತಲಾ 1 ಲಕ್ಷ ರೂ. ವಿತರಿಸಲಾಗುತ್ತದೆ. ಇದು ಸಾಲವಲ್ಲ; ಮರು ಪಾವತಿಯ ಪ್ರಮೇಯವಿಲ್ಲ. ಇದನ್ನು ಉದ್ಯಮಕ್ಕೆ ಮೂಲ ಬಂಡವಾಳವಾಗಿ ಬಳಸಬೇಕು ಎಂದು ವಿವರಿಸಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಡಿ. ವೇದವ್ಯಾಸ ಕಾಮತ್‌ ಮಾತನಾಡಿ, ಈ ಯೋಜನೆಯನ್ನು ನಗರ ಪ್ರದೇಶಕ್ಕೂ ವಿಸ್ತರಿಸುವಂತೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗುವುದು ಎಂದರು.

ಜಿ.ಪಂ. ಸಿಇಒ ಡಾ| ಕುಮಾರ್‌ ಸ್ವಾಗತಿಸಿ, ಜಿಲ್ಲೆಯಲ್ಲಿ 5,200 ಸ್ವ ಸಹಾಯ ಗುಂಪುಗಳಿದ್ದು, 65,000 ಸದಸ್ಯರಿದ್ದಾರೆ. ಈ ಪೈಕಿ ಅಮೃತ ಸ್ವಸಹಾಯ ಉದ್ದಿಮೆ ಯೋಜನೆಗೆ 185 ಸ್ವ ಸಹಾಯ ಸಂಘಗಳನ್ನು ಆಯ್ಕೆ ಮಾಡುವುದು ಬಹಳ ಕಷ್ಟವಾಗಿತ್ತು. ಈ ಎಲ್ಲ ಸಂಘಗಳು ಆಹಾರ ಉತ್ಪನ್ನಗಳನ್ನು ತಯಾರಿಸುವ ಉದ್ದಿಮೆ ಪ್ರಾರಂಭಿಸುವ ಪ್ರಸ್ತಾವನೆ ಸಲ್ಲಿಸಿವೆ ಎಂದು ತಿಳಿಸಿದರು.

ತರಕಾರಿ ಕೃಷಿ
ಫ‌ಲಾನುಭವಿಗಳ ಪರವಾಗಿ ಕಡಬ ತಾಲೂಕಿನ ಉಜ್ವಲ ಸ್ತ್ರೀಶಕ್ತಿ ಗುಂಪಿನ ಸುನಿಲ ಅನಿಲ್‌ ಮಾತನಾಡಿ, ಗುಂಪಿನ ಸದಸ್ಯರು ಒಟ್ಟುಗೂಡಿ ಈಗಾಗಲೇ ತರಕಾರಿ ಬೆಳೆಸಿದ್ದಾರೆ.ಈ ಬೀಜಧನವನ್ನು ಉಪಯೋಗಿಸಿ ಇನ್ನೂ ಉತ್ತಮ ರೀತಿಯಲ್ಲಿ ಕೃಷಿ ಮಾಡಲಾಗುವುದು ಎಂದರು.

ಮೇಯರ್‌ ಪ್ರೇಮಾನಂದ ಶೆಟ್ಟಿ, ಸಚೇತಕ ಸುಧೀರ್‌ ಶೆಟ್ಟಿ ಕಣ್ಣೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಪಾಪ ಬೋವಿ ವೇದಿಕೆಯಲ್ಲಿದ್ದರು.

ಜಿಲ್ಲಾ ಪಂಚಾಯತ್‌ ಸಹಾಯಕ ಯೋಜನಾಧಿಕಾರಿ ಸರೋಜಿನಿ ಅವರು ವಂದಿಸಿದರು.

ರಾಜ್ಯದಲ್ಲಿ ಮೊದಲು
ಒಂದೇ ಜಿಲ್ಲೆಯಲ್ಲಿ 185 ಸ್ತ್ರೀಶಕ್ತಿ ಸಂಘಗಳಿಗೆ ತಲಾ 1 ಲಕ್ಷ ರೂ. ಬೀಜ ಧನ ಒದಗಿಸುತ್ತಿರುವುದು ರಾಜ್ಯದಲ್ಲಿಯೇ ಮೊದಲು ಎಂದು ಸಚಿವ ಸುನಿಲ್‌ ತಿಳಿಸಿದರು.

 

ಟಾಪ್ ನ್ಯೂಸ್

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sand 1

Padubidri: ಮರಳು ಅಕ್ರಮ ಸಾಗಾಟ; ವಶ

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.