ವಿ.ವಿ. ಕಾಯ್ದೆ ತಿದ್ದುಪಡಿಗೆ ಮುಂದಾದ ಸರಕಾರ- ಕುಲಪತಿಗಳ ಕಾಮಗಾರಿಗೆ ಅಂಕುಶ

ಕುಲಪತಿಗಳ ಕಾಮಗಾರಿ, ನೇಮಕಾತಿ ಅಧಿಕಾರ ಮೊಟಕು?

Team Udayavani, Nov 18, 2023, 11:24 PM IST

UNIVERSITY STUDENTS

ಬೆಂಗಳೂರು: ಉಪನ್ಯಾಸಕರನ್ನು ಶೈಕ್ಷಣಿಕ ಮತ್ತು ಸಂಶೋಧನಾತ್ಮಕವಾಗಿ ಹೆಚ್ಚು ತೊಡಗಿಸಲು ಮತ್ತು ವಿಶ್ವವಿದ್ಯಾಲಯಗಳ ಕುಲಪತಿಗಳ ಹಣಕಾಸು ಮತ್ತು ನೇಮಕಾತಿ ಅಧಿಕಾರವನ್ನು ಮೊಟಕುಗೊ ಳಿಸಲು ಸರಕಾರದ ಮಟ್ಟದಲ್ಲಿ ಚಿಂತನೆ ನಡೆದಿದೆ.

ವಿ.ವಿ.ಗಳಲ್ಲಿ ನಡೆಯುತ್ತಿರುವ ಕಾಮಗಾರಿಗಳ ಅವ್ಯವಹಾರಕ್ಕೆ ಲಗಾಮು ಹಾಕಿ ಅಲ್ಲಿ ಸರಕಾರದ ಪಾತ್ರವನ್ನು ಹೆಚ್ಚಿಸುವ ಉದ್ದೇಶದಿಂದಲೇ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಅಧಿನಿಯಮ -2000ಕ್ಕೆ ತಿದ್ದುಪಡಿ ತರಲು ಸರಕಾರ ಮುಂದಾಗಿದೆ.

ಕಳೆದ ಒಂದೂವರೆ ದಶಕಗಳಿಂದ ವಿ.ವಿ.ಗಳಲ್ಲಿ ಸಾಲು ಸಾಲು ಅಕ್ರಮಗಳು ವರದಿಯಾಗಿವೆ. ಈ ಅಕ್ರಮಗಳಲ್ಲಿ ಕುಲಪತಿ, ಕುಲಸಚಿವರ ಹೆಸರು ದೊಡ್ಡ ಮಟ್ಟದಲ್ಲಿ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸರಕಾರ ಎಚ್ಚೆತ್ತುಕೊಂಡು ಅವರ ಅಧಿಕಾರಕ್ಕೆ ಕಡಿವಾಣ ಹಾಕಲು ಪ್ರಯತ್ನ ಆರಂಭಿಸಿದೆ.

ಆದರೆ ಇದಕ್ಕೆ ವಿರುದ್ಧವಾಗಿ ಅಕ್ರಮದ ಹೆಸರಿ ನಲ್ಲಿ ಕುಲಪತಿಗಳ ಅಧಿಕಾರ ಮೊಟಕುಗೊಳಿಸಿ ಅಧಿಕಾರಿಗಳ ಮೂಲಕ ವಿ.ವಿ.ಗಳನ್ನು ನಡೆಸುವ ಹುನ್ನಾರವಿದು ಎಂಬ ಆರೋಪವೂ ಕೇಳಿ ಬಂದಿದೆ. ಕುಲಪತಿ ನೇಮಕದಲ್ಲಿಯೇ ಅಕ್ರಮ ನಡೆಯುತ್ತಿದೆ. ಅನರ್ಹರನ್ನು ಕುಲಪತಿಯನ್ನಾಗಿ ನೇಮಿಸಿ ಪ್ರಾಮಾಣಿಕತೆಯನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಅದೇ ರೀತಿ ಕಾಮಗಾರಿಗಳ ಬಗ್ಗೆ ಕುಲಪತಿಗಳು ಏಕಪಕ್ಷೀಯ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ಕುಲಪತಿಗಳೊಬ್ಬರನ್ನೇ ಅಕ್ರಮಕ್ಕೆ ಹೊಣೆ ಮಾಡುವುದು ಸರಿಯಲ್ಲ ಎಂಬುದು ಮಾಜಿ ಕುಲಪತಿಗಳ ಅಭಿಪ್ರಾಯ.

ಕುಲಪತಿ ನೇಮಕಾತಿಯು ಆಯ್ಕೆ ಸಮಿತಿಯ ವರದಿಯ ಆಧಾರದಲ್ಲಿ ನಡೆಯುತ್ತದೆ. ಆದ್ದರಿಂದ ಕುಲಪತಿಗಳ ಅಧಿಕಾರ ಕಿತ್ತುಕೊಳ್ಳುವುದಕ್ಕಿಂತ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಬೇಕು ಎಂದು ಮಾಜಿ ಕುಲಪತಿಗಳು ಹೇಳುತ್ತಾರೆ.

ವಿ.ವಿ.ಗಳು ಸರಿಯಾಗಿ ನಡೆಯುತ್ತಿಲ್ಲ ಎಂಬ ಬಗ್ಗೆ ನಮಗೆ ಸಾಕಷ್ಟು ದೂರು ಗಳು ಬಂದಿವೆ. ಆದ್ದರಿಂದ ಲೋಪದೋಷಗಳನ್ನು ಪತ್ತೆ ಹಚ್ಚಿ ಸರಿಪಡಿಸುವ ವಿಧಾನದ ಬಗ್ಗೆ ಸಲಹೆ ನೀಡುವಂತೆ ಸಮಿತಿ ರಚಿಸಲು ಇಲಾಖೆಗೆ ಸೂಚಿಸಿದ್ದೇನೆ. ಯುಜಿಸಿ ನಿಯಮಗಳ ಸಹಿತ ಕುಲಪತಿಗಳ ಅಧಿಕಾರದ ಬಗ್ಗೆ ಸಮಿತಿ ನೀಡುವ ವರದಿಯನ್ನು ಪಾಲಿಸುತ್ತೇವೆ.

-ಡಾ| ಎಂ.ಸಿ. ಸುಧಾಕರ್‌, ಉನ್ನತ ಶಿಕ್ಷಣ ಸಚಿವ

  ರಾಕೇಶ್‌ ಎನ್‌.ಎಸ್‌.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.