ಸೋಮವಾರದಿಂದ ಮಕ್ಕಳಿಗೆ ಲಸಿಕೆ: 15-18 ವಯಸ್ಸಿನವರಿಗೆ  ಇಂದಿನಿಂದ ನೋಂದಣಿ

ಮುಂಚೂಣಿ ಕಾರ್ಯಕರ್ತರಿಗೆ 10ರಿಂದ ಬೂಸ್ಟರ್‌

Team Udayavani, Jan 1, 2022, 7:00 AM IST

ಸೋಮವಾರದಿಂದ ಮಕ್ಕಳಿಗೆ ಲಸಿಕೆ

ಬೆಂಗಳೂರು/ಹೊಸದಿಲ್ಲಿ:  ಹದಿನೈದರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡಲು ತಯಾರಿ ನಡೆದಿದ್ದು, ಶನಿವಾರದಿಂದಲೇ ಕೊವಿನ್‌ ಆ್ಯಪ್‌ ಮತ್ತು ವೆಬ್‌ಸೈಟ್‌ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಸೋಮವಾರದಿಂದ  ಲಸಿಕಾ ಕಾರ್ಯ ಆರಂಭವಾಗಲಿದೆ.

ರಾಜ್ಯ ಸರಕಾರದ ಆರೋಗ್ಯ ಮತ್ತು ಶಿಕ್ಷಣ ಇಲಾಖೆಗಳು  ಮಕ್ಕಳಿಗೆ ಲಸಿಕೆ ನೀಡಲು  ಸಿದ್ಧ ವಾಗಿವೆ.  ಮಕ್ಕಳ ಪೋಷಕರ ಮೊಬೈಲ್‌ ನಂಬರ್‌ ಮೂಲಕ ನೋಂದಣಿ ಮಾಡಲಾಗುತ್ತಿದೆ. ಇದು ಸಾಧ್ಯವಾಗದ ಕಡೆಯಲ್ಲಿ  ಮುಖ್ಯೋಪಾಧ್ಯಾಯರ ದೂರವಾಣಿ ಸಂಖ್ಯೆ ಮೂಲಕ ನೋಂದಣಿ ಮಾಡಿಕೊಳ್ಳಲಾಗುತ್ತಿದೆ.  ಶಾಲೆಯ ಗುರುತಿನ ಚೀಟಿ ಹಾಗೂ ಆಧಾರ್‌ ಕಾರ್ಡ್‌ ಬಳಸಿ ಪೋಟೋ ಐಡಿಯನ್ನು ಕೋವಿನ್‌ ಪೋರ್ಟಲ್‌ ಮೂಲಕ ದಾಖಲಿಸಲಾಗಿದೆ.

ಆರೋಗ್ಯ ಇಲಾಖೆಯ ವಿಶೇಷ ತರಬೇತಿ ಪಡೆದು ಕೊಂಡ ಸಿಬಂದಿಯ ತಂಡ ಭಾಗವಹಿಸಲಿದೆ. ಇವರು ಮಕ್ಕಳ ಲಸಿಕೀಕರಣದಲ್ಲಿ ವೈದ್ಯಕೀಯ ಅರ್ಹತೆ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಮಕ್ಕಳಲ್ಲಿ ಯಾರಾದರೂ ಟಿಡಿ ಹಾಗೂ ಇತರ ಯಾವುದಾದರೂ ಲಸಿಕೆಯನ್ನು ಪಡೆದಿದ್ದರೆ ಅಂತಹ ಮಕ್ಕಳಿಗೆ 15 ದಿನಗಳ ಬಳಿಕ ಕೊವಾಕ್ಸಿನ್‌  ವಿತರಿಸಲಾಗುತ್ತದೆ.

ಬಿಬಿಎಂಪಿ ಪ್ರಥಮ
ರಾಜ್ಯದಲ್ಲಿ 15-18 ವರ್ಷದೊಳಗಿನ ಅತ್ಯಧಿಕ ವಿದ್ಯಾರ್ಥಿಗಳನ್ನು ಹೊಂದಿರುವ ಪಟ್ಟಿಯಲ್ಲಿ  ಬಿಬಿಎಂಪಿ ಮೊದಲ ಸ್ಥಾನದಲ್ಲಿದ್ದು 4.42 ಲಕ್ಷ ವಿದ್ಯಾರ್ಥಿಗಳನ್ನು ಹೊಂದಿದೆ. ಬೆಳಗಾವಿ 2.47 ಲಕ್ಷ, ಬಳ್ಳಾರಿ 1.64ಲಕ್ಷ, ಕಲಬುರಗಿ 1.59 ಲಕ್ಷ, ಮೈಸೂರು 1.47 ಲಕ್ಷ, ವಿಜಯಪುರ 1.23 ಲಕ್ಷ, ತುಮಕೂರು 1.22 ಲಕ್ಷ, ರಾಯಚೂರು 1.14, ಬೀದರ್‌ 1.5 ಲಕ್ಷ, ದ.ಕ. 1.1 ಲಕ್ಷ, ಬಾಗಲಕೋಟೆಯಲ್ಲಿ 1 ಲಕ್ಷ ವಿದ್ಯಾರ್ಥಿಗಳಿದ್ದಾರೆ.  ದಾವಣಗೆರೆ, ಉಡುಪಿ, ಉತ್ತರ ಕನ್ನಡ, ಯಾದಗಿರಿ ಸಹಿತ ಉಳಿದ ಜಿಲ್ಲೆಯಲ್ಲಿ 40,000ದಿಂದ 88,000 ಫ‌ಲಾನುಭವಿಗಳಿದ್ದಾರೆ.

ಬೂಸ್ಟರ್‌ಗೂ ಮಾರ್ಗಸೂಚಿ
ಬೂಸ್ಟರ್‌ ಡೋಸ್‌ ಪಡೆಯಲು ಅರ್ಹತೆಯುಳ್ಳ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಮತ್ತು ಇತರ ಕಾಯಿಲೆಗಳಿಂದ ನರಳುತ್ತಿರುವ 60 ವರ್ಷ ಮೇಲ್ಪಟ್ಟವರ ಮೊಬೈಲ್‌ಗೆ ಬೂಸ್ಟರ್‌ ಡೋಸ್‌ ಕುರಿತ ಸಂದೇಶ ಬರಲಿದೆ. ಇದನ್ನು ನೋಡಿಕೊಂಡು ಅವರು ಲಸಿಕೆ ಪಡೆಯಬಹುದಾಗಿದೆ.

145 ಕೋಟಿ ಡೋಸ್‌ ಲಸಿಕೆ!
ಲಸಿಕೆ ವಿತರಣೆಯಲ್ಲಿ ದೇಶ ಮತ್ತೂಂದು ಮೈಲುಗಲ್ಲು ಸಾಧಿಸಿದೆ. ಶುಕ್ರವಾರದ ವರೆಗೆ 145 ಕೋಟಿ ಡೋಸ್‌ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್‌ ಮಾಂಡವೀಯ  ಟ್ವೀಟ್‌ ಮಾಡಿ ಮಾಹಿತಿ ನೀಡಿದ್ದಾರಲ್ಲದೆ,  ಸಹಕರಿಸಿದ ಎಲ್ಲ ವೈದ್ಯರು, ಆರೋಗ್ಯ ಸಿಬಂದಿಗೆ ಧನ್ಯವಾದ ಹೇಳಿದ್ದಾರೆ.

ಜ.16ರಂದು ದೇಶದಲ್ಲಿ ಲಸಿಕಾ ಅಭಿಯಾನ ಆರಂಭಿಸಲಾಗಿತ್ತು. ಫೆ.19ಕ್ಕೆ ಒಂದು ಕೋಟಿ, ಎಪ್ರಿಲ್‌ 11ಕ್ಕೆ 10 ಕೋಟಿ, ಜೂನ್‌ 12ಕ್ಕೆ 25 ಕೋಟಿ, ಆ.6ಕ್ಕೆ 50 ಕೋಟಿ, ಸೆ.13ಕ್ಕೆ 75 ಕೋಟಿ ಹಾಗೂ ಅ.20ಕ್ಕೆ 100 ಕೋಟಿ ಡೋಸ್‌ ಲಸಿಕೆ ನೀಡಲಾಗಿತ್ತು. ಸದ್ಯ ಜಗತ್ತಿನಲ್ಲಿ  ಚೀನ ಮೊದಲ ಸ್ಥಾನದಲ್ಲಿದೆ. ಇಲ್ಲಿ 280 ಕೋಟಿ ಡೋಸ್‌ ಲಸಿಕೆ ಹಾಕಲಾಗಿದೆ. ಭಾರತ 2ನೇ ಸ್ಥಾನದಲ್ಲಿದ್ದು, 145 ಕೋಟಿ ಡೋಸ್‌ ಲಸಿಕೆ ನೀಡಲಾಗಿದೆ. 50 ಕೋಟಿ ಡೋಸ್‌ ಲಸಿಕೆ ನೀಡಿರುವ ಅಮೆರಿಕ 3ನೇ ಸ್ಥಾನದಲ್ಲಿದೆ.

 

ಟಾಪ್ ನ್ಯೂಸ್

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Tennis: ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.