ಇಂದಿನಿಂದ ವಿದ್ಯಾರ್ಥಿಗಳಿಗೆ ಲಸಿಕೆ: ದ.ಕ. 1.01 ಲಕ್ಷ ; ಉಡುಪಿ 53,555 ಮಕ್ಕಳಿಗೆ ಗುರಿ
Team Udayavani, Jan 3, 2022, 7:45 AM IST
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಜಿಲ್ಲೆಯಲ್ಲಿ 15ರಿಂದ 18 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಿಕೆ ಜ. 3ರಿಂದ ಪ್ರಾರಂಭಗೊಳ್ಳಲಿದ್ದು ಜ.10ರ ವರೆಗೆ ನಡೆಯಲಿದೆ. ದ.ಕ. ಜಿಲ್ಲೆಯಲ್ಲಿ ಒಟ್ಟು, 1,01,549 ಮತ್ತು ಉಡುಪಿ ಜಿಲ್ಲೆಯಲ್ಲಿ 53,555 ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಗುರಿಯನ್ನು ಇರಿಸಿಕೊಳ್ಳಲಾಗಿದೆ.
ಶಾಲೆಯಿಂದ ಹೊರಗುಳಿದ 15ರಿಂದ 18 ವಯಸ್ಸಿನವರನ್ನು ಪಿಡಿಒ ಮೂಲಕ ಪತ್ತೆ ಹಚ್ಚಲು ನಿರ್ಧರಿಸಲಾಗಿದ್ದು ಇವರಿಗೆ ಹತ್ತಿರದ ಪ್ರಾಥಮಿಕ ಕೇಂದ್ರಗಳಲ್ಲಿ ಲಸಿಕೆ ನೀಡಲು ಆರೋಗ್ಯ ಇಲಾಖೆ ಕ್ರಮ ವಹಿಸಿದೆ.
ಜಿಲ್ಲೆಯಲ್ಲಿ ಶಾಲೆಗಳಲ್ಲಿ, ಕಾಲೇಜುಗಳಲ್ಲಿ ಹಾಗೂ ಇತರ ಶಿಕ್ಷಣ ಸಂಸ್ಥೆಗಳಲ್ಲಿ 15 ವಯಸ್ಸಿಗಿಂತ ಮೇಲ್ಪಟ್ಟ ವಿದ್ಯಾರ್ಥಿಗಳ ಸಂಖ್ಯೆಯನ್ನು ಈಗಾಗಲೇ ಆರೋಗ್ಯ ಇಲಾಖೆ ಸಂಗ್ರಹಿಸಿದ್ದು ಲಸಿಕೆ ನೀಡಲು ಸರ್ವಸಿದ್ಧತೆಗಳನ್ನು ಮಾಡಲಾಗಿದೆ. ಸೋಮವಾರ ಬೆಳಗ್ಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಿಬಂದಿ ಕೇಂದ್ರಗಳ ವ್ಯಾಪ್ತಿಯ ಶಾಲೆ, ಕಾಲೇಜುಗಳಿಗೆ ತೆರಳಿ ಲಸಿಕೆ ನೀಡಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಕಿಶೋರ್ ಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ:ಅಕ್ರಮವಾಗಿ ಒಳನುಸುಳಲು ಯತ್ನಿಸಿದ ಪಾಕ್ ಸೈನಿಕನ ಹೊಡೆದುರುಳಿಸಿದ ಸೇನೆ
ದ.ಕ.: ಸಚಿವ ಅಂಗಾರ ಚಾಲನೆ
ಸುಬ್ರಹ್ಮಣ್ಯ: ಮೀನುಗಾರಿಕೆ ಸಚಿವ ಎಸ್.ಅಂಗಾರ ಅವರು ಜ. 3ರಂದು ಜಿಲ್ಲೆಯಲ್ಲಿ 15-18 ವರ್ಷದ ಮಕ್ಕಳ ಲಸಿಕಾಕರಣ ಯೋಜನೆಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದ ಆಡಳಿತಕ್ಕೊಳಪಟ್ಟ ಎಸ್‌ಎಸ್ ಪಿಯು ಕಾಲೇಜಿನಲ್ಲಿ ಚಾಲನೆ ನೀಡಲಿದ್ದಾರೆ. ಕಾಲೇಜಿನ ಸುಮಾರು 825 ಅರ್ಹ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುತ್ತದೆ. 2007 ಮತ್ತು ಅದಕ್ಕಿಂತ ಹಿಂದೆ ಜನಿಸಿದ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲಾಗುವುದು.
ಎಲ್ಲ ಮಕ್ಕಳು ಮತ್ತು ವಿದ್ಯಾರ್ಥಿಗಳು ಧೈರ್ಯದಿಂದ ಲಸಿಕೆ ಹಾಕಿಸಿಕೊಂಡು ಕೊರೊನಾ ಮಣಿಸಲು ಸಹಕರಿಸಬೇಕು ಎಂದವರು ವಿನಂತಿಸಿದ್ದಾರೆ.
ನಿಟ್ಟೂರು ಶಾಲೆಯಲ್ಲಿ ಆರಂಭ
ಉಡುಪಿ ಜಿಲ್ಲೆಯಲ್ಲಿ ಮಕ್ಕಳ ಲಸಿಕಾ ಅಭಿಯಾನಕ್ಕೆ ಜ.3ರ ಬೆಳಗ್ಗೆ 10ಕ್ಕೆ ತಾಂಗದಗಡಿ ನಿಟ್ಟೂರು ಪ್ರೌಢಶಾಲೆಯಲ್ಲಿ ಚಾಲನೆ ನೀಡಲಾಗುವುದು ಎಂದು ಡಿಎಚ್‌ಒ ಕಚೇರಿ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.