ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಗಂಗಾಧರ ಹಿರೇಗುತ್ತಿ ಆಯ್ಕೆ
Team Udayavani, Sep 19, 2020, 5:54 PM IST
ಬ್ರಹ್ಮಾವರ: ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಪ್ರತಿ ವರ್ಷ ಮುಂಗಾರು ಪತ್ರಿಕೆಯ ಸಂಪಾದಕ ದಿ| ವಡ್ಡರ್ಸೆ ರಘುರಾಮ ಶೆಟ್ಟಿ ಹೆಸರಲ್ಲಿ ಕೊಡಮಾಡುವ ಪತ್ರಿಕೋದ್ಯಮ ಪ್ರಶಸ್ತಿಗೆ ಕರಾವಳಿ ಮುಂಜಾವು ದಿನಪತ್ರಿಕೆಯ ಸಂಪಾದಕ ಗಂಗಾಧರ ಹಿರೇಗುತ್ತಿ ಈ ಬಾರಿ ಆಯ್ಕೆಯಾಗಿದ್ದಾರೆ ಎಂದು ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ಬ್ರಹ್ಮಾವರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪತ್ರಿಕಾ ವಿತರಕರಾಗಿ ವೃತ್ತಿ ಜೀವನವನ್ನು ಆರಂಭಿಸಿದ ಗಂಗಾಧರ ಹಿರೇಗುತ್ತಿಯವರು ಪತ್ರಿಕೋದ್ಯಮದ ಕುರಿತು ಬಾಲ್ಯದಲ್ಲೇ ಹಲವು ಕನಸುಗಳನ್ನು ಕಂಡಿದ್ದರು. ಅನಂತರ ‘ಮುಂಗಾರು’ ದಿನಪತ್ರಿಕೆಯಲ್ಲಿ ಉತ್ತರ ಕನ್ನಡದ ವರದಿಗಾರನಾಗಿ 10ವರ್ಷ ಸೇವೆ ಸಲ್ಲಿಸಿ, ಅನಂತರ ಕಾರವಾರದ ಜಿಲ್ಲಾ ಕೇಂದ್ರದಿಂದ ‘ಕರಾವಳಿ ಮುಂಜಾವು’ ದಿನಪತ್ರಿಕೆ ಆರಂಭಿಸಿದ್ದು ಪ್ರಸ್ತುತ ಈ ಪತ್ರಿಕೆ ರಾಜ್ಯದ ಪ್ರಸಿದ್ಧ ದಿನಪತ್ರಿಕೆಗಳ ಸಾಲಿನಲ್ಲಿ ಗುರುತಿಸಿಕೊಂಡಿದೆ ಹಾಗೂ ಪತ್ರಿಕೋದ್ಯಮ ಕ್ಷೇತ್ರದ ಅತ್ಯುನ್ನತ ಸಾಧನೆಗಾಗಿ ಹಿರೇಗುತ್ತಿಯವರಿಗೆ ಮೊಹರೆ ಹನುಮಂತರಾಯ ಪ್ರಶಸ್ತಿ, ಸಾಧನ ರಾಷ್ಟ್ರೀಯ ಪ್ರಶಸ್ತಿಗಳು ಸಂದಿದೆ. ವಡ್ಡರ್ಸೆಯವರ ಪತ್ರಿಕೋದ್ಯಮದ ಆದರ್ಶ ಮತ್ತು ಸಮಾಜವಾದಿ ನಿಲುವನ್ನು ಮೈಗೂಡಿಸಿಕೊಂಡ ಹಿರೇಗುತ್ತಿಯವರಿಗೆ ಈ ಪ್ರಶಸ್ತಿ ನೀಡಿ ಗೌರವಿಸುವುದು ಹೆಮ್ಮೆಯ ವಿಚಾರ ಎಂದರು.
ಅ.11ರಂದು ಅಪರಾಹ್ನ 4.30ಕ್ಕೆ ಬ್ರಹ್ಮಾವರದ ಬಂಟರ ಭವನದಲ್ಲಿ ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದ್ದು , ಖ್ಯಾತ ಸಾಹಿತಿ ಅಂಬಾತನಯ ಮುದ್ರಾಡಿ ಪ್ರಶಸ್ತಿ ಪ್ರದಾನಗೈಯಲಿದ್ದಾರೆ ಹಾಗೂ ಜಿಲ್ಲೆಯ ವಿವಿಧ ಕ್ಷೇತ್ರದ ಗಣ್ಯರು ಉಪಸ್ಥಿತರಿರುವವರು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.