ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೃಷಿ ಉತ್ಪನ್ನ ಬೇಡಿಕೆ ಹೆಚ್ಚಿಸಲು ಸಂಶೋಧನೆ ಕೈಗೊಳ್ಳಿ
Team Udayavani, Sep 22, 2021, 10:00 PM IST
ಬೆಂಗಳೂರು: ದೇಶದ ಕೃಷಿ ಉತ್ಪನ್ನಗಳಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೇಡಿಕೆ ಹೆಚ್ಚಿಸುವ ನಿಟ್ಟಿನಲ್ಲಿ ಕೃಷಿ ವಿಶ್ವವಿದ್ಯಾಲಯಗಳು ಹಾಗೂ ಭಾರತೀಯ ಕೃಷಿ ಸಂಶೋಧನಾ ಪರಿಷತ್ತು (ಐಸಿಎಆರ್) ಸಂಶೋಧನೆ ಕೈಗೊಳ್ಳಬೇಕು ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
75ನೇ ಸ್ವಾತಂತ್ರೋತ್ಸವದ ನೆನಪಿನ ಆಜಾದಿ ಕಾ ಅಮೃತ್ ಮಹೋತ್ಸವ ಕಾರ್ಯಕ್ರಮದ ಭಾಗವಾಗಿ ನಗರದ ಅಶೋಕ ಹೋಟೆಲ್‌ನಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಾಣಿಜ್ಯ ಉತ್ಸವ – ಕೃಷಿ ಉದ್ಯಮದಾರರ ಸಮಾವೇಶ ಮತ್ತು ಪ್ರದರ್ಶನ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ದೇಶದ ಕೃಷಿ ಉತ್ಪನ್ನಗಳು ಗುಣಮಟ್ಟದಲ್ಲಿ ವಿದೇಶಿ ಮಾರುಕಟ್ಟೆಗಳಿಗೆ ಸವಾಲು ಒಡ್ಡುವ ರೀತಿಯಲ್ಲಿ ನಮ್ಮ ಕೃಷಿ, ತೋಟಗಾರಿಕೆ ಮತ್ತು ಪಶುಸಂಗೋಪನಾ ಇಲಾಖೆಗಳು ಹಾಗೂ ವಿಶ್ವವಿದ್ಯಾಲಯಗಳು ಒಗ್ಗೂಡಿ ಕಾರ್ಯಗಳನ್ನು ಕೈಗೊಳ್ಳುವ ಹಾಗೂ ಸಂಶೋಧನೆ ನಡೆಸುವ ಕಾರ್ಯ ಆಗಬೇಕಿದೆ. ವಿದೇಶಿ ಮಾರುಕಟ್ಟೆಗಳಲ್ಲಿ ದೇಶದ ಹಣ್ಣು, ತರಕಾರಿ ಹಾಗೂ ಕೃಷಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಲು ಗುಣಮಟ್ಟದ ಹಾಗೂ ರಾಸಾಯನಿಕ ಮುಕ್ತ ಪದಾರ್ಥಗಳನ್ನು ಬೆಳೆಯಬೇಕಿದೆ.
ಈ ನಿಟ್ಟಿನಲ್ಲಿ ವಿಶ್ವವಿದ್ಯಾಲಯಗಳು, ಐಸಿಎಆರ್ ಸಂಶೋಧನೆ ನಡೆಸಿ ಯಾವ ಬೆಳೆಗೆ ಎಷ್ಟು ಪ್ರಮಾಣದಲ್ಲಿ ರಾಸಾಯನಿಕ ಬಳಸಬೇಕು, ಸಾವಯವಗೊಬ್ಬರದಿಂದಲೇ ಆರೋಗ್ಯಕರ ಬೆಳೆಗಳನ್ನು ಬೆಳೆಯುವುದು ಹೇಗೆ ಎಂಬಿತ್ಯಾದಿ ವಿಚಾರಗಳ ಕುರಿತು ರೈತರಲ್ಲಿ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಇದನ್ನೂ ಓದಿ:ದೇಶಕ್ಕಾಗಿ ಮಾತ್ರವಲ್ಲ, ಬಿಜೆಪಿ ಪಕ್ಷಕ್ಕೂ ದಿ. ಮನೋಹರ್ ಪರೀಕರ್ ಅವರ ಸೇವೆ ಅನನ್ಯ
ವಿದೇಶಗಳಲ್ಲಿ ಕಡಿಮೆ ಅವಧಿಯಲ್ಲಿ ಗುಣಮಟ್ಟದ, ಆರೋಗ್ಯಕರ ಹಾಗೂ ಆಕರ್ಷಕ ಬಣ್ಣ ಮತ್ತು ಗಾತ್ರ ಇರುವ ತಳಿಗಳ ಸಂಶೋಧನೆಗಳು ನಡೆದಿವೆ. ಈ ರೀತಿಯ ಸಂಶೋಧನೆಗಳು ನಮ್ಮಲೂ ನಡೆಯಬೇಕಿದೆ ಈ ನಿಟ್ಟಿನಲ್ಲಿ ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳು ಸಹ ಜಂಟಿಯಾಗಿ ಕಾರ್ಯಯೋಜನೆಗಳನ್ನು ರೂಪಿಸಬೇಕು. ಪ್ರಸ್ತುತ ಸಾವಯವ ಸಿರಿಧಾನ್ಯಗಳಿಗೆ ಹೆಚ್ಚು ಬೇಡಿಕೆಯಿದೆ. ಆದರೆ, ಈ ಸಿರಿಧಾನ್ಯಗಳನ್ನು ಬೆಳೆಯುವ ಪ್ರಮಾಣ ಅತ್ಯಂತ ಕಡಿಮೆಯಿದ್ದು, 2023ರ ಅಂತ್ಯದ ವೇಳೆಗೆ ಇದರ ಪ್ರಮಾಣ ಹೆಚ್ಚಳವಾಗಬೇಕು ಎಂದರು.
ತೋಟಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜಕುಮಾರ್ ಕಟಾರಿಯಾ ಮಾತನಾಡಿ, ಭಾರತ ದೇಶದಲ್ಲಿ ಗುಣಮಟ್ಟದ ಬೀಜೋತ್ಪಾದನೆಯಲ್ಲಿ ಕೊರತೆಯಿದೆ. ಇದಕ್ಕಾಗಿ ವಿಶ್ವವಿದ್ಯಾಲಯಗಳು ಹೆಚ್ಚು ಸಂಶೋಧನೆಗಳಲ್ಲಿ ತೊಡಗಬೇಕು ಎಂದು ಹೇಳಿದರು.
ಕೃಷಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜಕುಮಾರ್ ಖತ್ರಿ ಮಾತನಾಡಿ, ರಾಜ್ಯದ ಎಲ್ಲ ಕೃಷಿ ಉತ್ಪನ್ನಗಳು ಅಂತಾರಾಷ್ಟ್ರ ಮಟ್ಟದ ಗುಣಮಟ್ಟದ ಪ್ರಮಾಣ ಪತ್ರ ಪಡೆಯಲು ಶ್ರಮಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರದಿಂದ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
ನಬಾರ್ಡ್ ನಮುಖ್ಯ ಕಾರ್ಯನಿವಾಹಕ ವ್ಯವಸ್ಥಾಪಕ ನೀರಜ್ ಕುಮಾರ್ ವರ್ಮಾ, ಕೃಷಿ ಮತ್ತು ಸಂಸ್ಕರಿಸಿದ ಆಹಾರೋತ್ಪಾದನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರ(ಅಪೇಡಾ)ದ ನಿರ್ದೇಶಕ ಡಾ.ತರುಣ್ ಬಜಾಜ್, ಭಾರತೀಯ ಆಹಾರ ಸಂಸ್ಕರಣಾ ತಂತ್ರಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ಆನಂದ ರಾಮಕೃಷ್ಣನ್ ಉಪಸ್ಥಿತರಿದ್ದರು.
ಉತ್ಸವದಲ್ಲಿ ನಾನಾ ಜಿಲ್ಲೆಗಳಿಂದ ಪ್ರಗತಿ ಪರ, ಸಂಶೋಧನೆಗಳಲ್ಲಿ ತೊಡಗಿರುವ ರೈತರಿಗೆ ವೇದಿಕೆ ಒದಗಿಸಲಾಗಿತ್ತು. ಜತೆಗೆ ಸಾವಯವ ಉತ್ಪನ್ನಗಳ ಮಳಿಗೆಗಳನ್ನು ತೆರೆಯಲಾಗಿತ್ತು.
ರಾಜ್ಯ ಸರ್ಕಾರಗಳು ಕೈಗಾರಿಕೆ ಇಲಾಖೆಯಲ್ಲಿ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ರಫ್ತಿಗೆ ಪ್ರತ್ಯೇಕ ಕೋಶ ತೆರೆಯಲು ರಾಜ್ಯ ಸರ್ಕಾರ ಸ್ಪಂದಿಸಿದೆ. ಶೀಘ್ರದಲ್ಲಿಯೇ ಕೋಶಕ್ಕೆ ಚಾಲನೆ ದೊರಯಬಹುದು. ಇದರಿಂದ ದೇಶ ಮತ್ತು ಹೊರ ದೇಶಗಳ ಮಾರುಕಟ್ಟೆಗಳಲ್ಲಿ ರಾಜ್ಯದ ಕೃಷಿ ಉತ್ಪನ್ನಗಳು ಸ್ಥಾನ ಪಡೆದುಕೊಳ್ಳಲು ಅವಕಾಶ ಸಿಗಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.