Varahi Project; ಡೀಮ್ಡ್ ಫಾರೆಸ್ಟ್‌ ಸಮಸ್ಯೆ ಬಗೆಹರಿದರೂ ಉಡುಪಿಗೆ ನೀರು ಸದ್ಯಕ್ಕೆ ಹರಿಯದು


Team Udayavani, May 15, 2024, 6:45 AM IST

Varahi Project; ಡೀಮ್ಡ್ ಫಾರೆಸ್ಟ್‌ ಸಮಸ್ಯೆ ಬಗೆಹರಿದರೂ ಉಡುಪಿಗೆ ನೀರು ಸದ್ಯಕ್ಕೆ ಹರಿಯದು

ಉಡುಪಿ: ಡೀಮ್ಡ್ ಫಾರೆಸ್ಟ್‌ ಪ್ರದೇಶದಲ್ಲಿ ವಾರಾಹಿ ನೀರಾವರಿ ಪೈಪ್‌ಲೈನ್‌ ಅಳವಡಿಸಲು ಅರಣ್ಯ ಇಲಾಖೆಯಿಂದ ಅನುಮತಿ ಸಿಕ್ಕಿದೆ. ಇದರಿಂದ ವರ್ಷಗಳಿಂದ ವಿಳಂಬವಾಗಿದ್ದ ಕಾಮಗಾರಿಗೆ ಇದೀಗ ವೇಗ ದೊರೆತಿದೆ. ಆದರೂ ಉಡುಪಿ ನಗರಕ್ಕೆ ವಾರಾಹಿ ನೀರು ಈ ಬೇಸಗೆಯಲ್ಲಿ ಸಿಗದು.

ರಾಜ್ಯ ಸರಕಾರ ಯೋಜನೆಯನ್ನು ಕಾಲಮಿತಿ ಯೊಳಗೆ ಪೂರ್ಣಗೊಳಿ ಸಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಅದರಂತೆ ಜಿಲ್ಲಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೈಪ್‌ಲೈನ್‌ ಕಾಮಗಾರಿ ವೇಗವಾಗಿ ಸಾಗುತ್ತಿದೆ. ಆದರೆ ಹಾಲಾಡಿಯ ಭರತ್ಕಲ್‌ ಸಮೀಪ ನೀರು ಶುದ್ಧೀಕರಣ ಘಟಕ ಆಗಬೇಕಾಗಿದೆ. ಪೈಪ್‌ಲೈನ್‌ ಪೂರ್ಣಗೊಂಡು ಪ್ರಾಯೋಗಿಕವಾಗಿ ನೀರು ಹರಿಸುವ ಪ್ರಕ್ರಿಯೆ ಆರಂಭವಾದರೂ ಶುದ್ಧೀಕರಣ ಘಟಕ ಪೂರ್ಣವಾಗದೇ ಯೋಜನೆಯಡಿ ಮನೆ ಮನೆಗೆ ನೀರು ಒದಗಿಸಲು ಸಾಧ್ಯವಿಲ್ಲ.

ಹೀಗಾಗಿ ಮಳೆಗಾಲ ಆರಂಭದೊಳಗೆ ಪೈಪ್‌ಲೈನ್‌ ಕಾಮಗಾರಿ ಪೂರ್ಣಗೊಳ್ಳಲಿದೆ. ಆದರೆ ನೀರು ಶುದ್ಧೀಕರಣ ಘಟಕ ನಿರ್ಮಾಣಕ್ಕೆ ಇನ್ನಷ್ಟು ಕಾಲಾವಕಾಶ ಬೇಕಾಗಬಹುದು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಯೋಜನೆಯ ಬಹುಪಾಲು ಪ್ರದೇಶದಲ್ಲಿ ಅರಣ್ಯ, ಸಂರಕ್ಷಿತ ಅರಣ್ಯ ಇರುವುದರಿಂದ ಕಾಮಗಾರಿಗೆ ತಾಂತ್ರಿಕ ಸಮಸ್ಯೆ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ಡೀಮ್ಡ್ಫಾರೆಸ್ಟ್‌ ಪ್ರದೇಶದಲ್ಲಿ ಕಾಮಗಾರಿಗೆ ಅನುಮತಿ ಕೋರಿ ಜಿಲ್ಲಾಡಳಿತದಿಂದ ಅರಣ್ಯ ಇಲಾಖೆಗೆ ಪತ್ರ ಬರೆಯಲಾಗಿತ್ತು. ಸುಮಾರು 4.50 ಕಿ.ಮೀ.
ವ್ಯಾಪ್ತಿಯಲ್ಲಿ ಈ ಕಾಮಗಾರಿ ಆಗಬೇಕಿರುವುದರಿಂದ ಅರಣ್ಯ ಇಲಾಖೆ ಈಗ ಅನುಮತಿ ಕಲ್ಪಿಸಿದೆ ಎಂದು ಮೂಲಗಳು ತಿಳಿಸಿವೆ.

ವಾರಾಹಿ ಯೋಜನೆ ಅನುಷ್ಠಾನಕ್ಕೆ ಸಮಸ್ಯೆಯಾಗಿದ್ದ ಡೀಮ್ಡ್ ಫಾರೆಸ್ಟ್‌ ಪ್ರದೇಶದ ಕಾಮಗಾರಿಗೆ ಇದೀಗ ಅರಣ್ಯ ಇಲಾಖೆ ಅನುಮತಿ ಸಿಕ್ಕಿದೆ. ಕಾಮಗಾರಿ ವೇಗ ಪಡೆಯುತ್ತಿದೆ. ಆದರೆ ಈ ಮಳೆಗಾಲ ಆರಂಭದೊಳಗೆ ವಾರಾಹಿ ನೀರು ಪೂರ್ಣವಾಗಿ ಉಡುಪಿಗೆ ಸಿಗುವುದು ಕಷ್ಟ.
-ಡಾ| ಕೆ. ವಿದ್ಯಾಕುಮಾರಿ,
ಜಿಲ್ಲಾಧಿಕಾರಿ, ಉಡುಪಿ

ಟಾಪ್ ನ್ಯೂಸ್

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.