ಮೊಳಹಳ್ಳಿ: ಹುಂತನ ಕೆರೆಗೆ ಹಾಯಿಸಬೇಕಿದೆ ವಾರಾಹಿ ನೀರು


Team Udayavani, Apr 20, 2021, 3:20 AM IST

ಮೊಳಹಳ್ಳಿ: ಹುಂತನ ಕೆರೆಗೆ ಹಾಯಿಸಬೇಕಿದೆ ವಾರಾಹಿ ನೀರು

ತೆಕ್ಕಟ್ಟೆ: ಇಲ್ಲಿನ ಮೊಳಹಳ್ಳಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸುಮಾರು 10 ಎಕರೆ ವಿಸ್ತೀರ್ಣದ ಹುಂತನಕೆರೆಯಲ್ಲಿ ನೀರಿನ ಮಟ್ಟ ಇಳಿಕೆಯಾಗಿದೆ. ಕೃಷಿ, ಅಂತರ್ಜಲ ಮಟ್ಟ ವೃದ್ಧಿಗೆ ಅನುಗುಣವಾಗಿ ಇದರ ಪುನಶ್ಚೇತನ ಅಗತ್ಯವಿದೆ. ಇದರೊಂದಿಗೆ ಗ್ರಾಮದಲ್ಲಿ ಹಾದು ಹೋದ ವಾರಾಹಿ ಎಡದಂಡೆ ಕಾಲುವೆಗೆ ಉಪನಾಲೆ ನಿರ್ಮಿಸಿ ಕೆರೆಗೆ ನೀರು ಹಾಯಿಸಬೇಕೆಂಬ ಬೇಡಿಕೆ ಗ್ರಾಮಸ್ಥರದ್ದಾಗಿದೆ.

ನೀರು ಪೋಲು
ಪ್ರಸ್ತುತ ವಾರಾಹಿ ಎಡದಂಡೆ ಕಾಲುವೆಯಲ್ಲಿ ನೀರು ತುಂಬಿ ಹರಿಯುತ್ತಿದ್ದು, ಕಾಲುವೆ ಹಾದು ಹೋದ ಗ್ರಾಮಗಳಿಗೆ ಸಮರ್ಪಕವಾಗಿ ನೀರು ಸದ್ಬಳಕೆಯಾಗದೆ ನೂರಾರು ಕ್ಯೂಸೆಕ್‌ ನೀರು ಪೋಲಾಗುತ್ತಿದೆ . ಪ್ರಮುಖ ಕಾಲುವೆಗೆ ಉಪ ನಾಲೆ ನಿರ್ಮಿಸುವ ನಿಟ್ಟಿನಿಂದ ತಲ್ಲಕ್ಕಿ ಸಮೀಪ ಇಲಾಖೆ ಗೇಟ್‌ ನಿರ್ಮಿಸಿದೆ. ಆದರೆ ಗೇಟ್‌ನಿಂದ ಸುಮಾರು 500 ಮೀಟರ್‌ ಅಂತರದಲ್ಲಿರುವ ಹುಂತನ ಕೆರೆಗೆ ನೀರು ಹಾಯಿಸುವುದಕ್ಕೆ ಕ್ರಮ ಕೈಗೊಂಡಿಲ್ಲ.

ಪ್ರಯೋಜನಕಾರಿ
ಹುಂತನ ಕೆರೆಗೆ ನೀರು ಹಾಯಿಸುವ ಬಗ್ಗೆ ಗ್ರಾಮಸ್ಥರ ಹಲವು ದಶಕಗಳ ಬೇಡಿಕೆಗೆ ಅನುಗುಣವಾಗಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸೂಕ್ತ ಕ್ರಮ ಕೈಗೊಂಡರೆ ಮಾತ್ರ ಸುತ್ತಮುತ್ತಲಿನ ಗ್ರಾಮಗಳಿಗೆ ಕುಡಿಯುವ ನೀರು, ಪ್ರಾಣಿ, ಪಕ್ಷಿಗಳು ಸೇರಿದಂತೆ ನೂರಾರು ಎಕರೆ ಕೃಷಿ ಭೂಮಿಗಳಿಗೆ ಪ್ರಯೋಜನವಾಗಲಿದೆ. ಅತ್ಯಮೂಲ್ಯ ಕೆರೆಗಳ ಪುನಶ್ಚೇತನಗೊಳ್ಳುವ ಮೂಲಕ ಕೃಷಿ ಭೂಮಿಗಳು ಮತ್ತೆ ಹಸನಾಗಬೇಕಾಗಿರುವುದು ಅಗತ್ಯವಾಗಿದೆ ಎನ್ನುತ್ತಾರೆ ಇಲ್ಲಿನ ಹಿರಿಯ ಕೃಷಿಕ ಸಾಧು ಪೂಜಾರಿ ಅವರು.

ಒತ್ತುವರಿ
ನಿರ್ವಹಣೆಯ ಕೊರತೆಯಿಂದಾಗಿ ಸೊರಗಿ ಹೋಗಿರುವ ಈ ಕೆರೆ ಸುತ್ತ ಗಿಡಗಂಟಿಗಳು ಆವರಿಸಿವೆ. ಅಪಾರ ನೀರಿನಾಶ್ರಯ ಹೊಂದಿದ ಕೆರೆಯ ಪ್ರದೇಶವನ್ನು ಖಾಸಗಿಯವರು ಒತ್ತುವರಿ ಮಾಡಿಕೊಂಡ ಬಗ್ಗೆ ಆರೋಪಗಳಿವೆ.

ಯೋಜನೆ ಸಿದ್ಧ
ಉಪ ನಾಲೆಗಳ ನಿರ್ಮಾಣಕ್ಕೆ ಈಗಾಗಲೇ ಯೋಜನೆ ಸಿದ್ಧಗೊಂಡಿದ್ದು , ಉಪನಾಲೆಯಿಂದ ನೇರವಾಗಿ (ಈಜಿrಛಿcಠಿ Ouಠಿlಛಿಠಿ) ಕೆರೆಗೆ ನೀರು ಹಾಯಿಸುವ ಪ್ರಕ್ರಿಯೆ ನಡೆಯಲಿದ್ದು, ಈ ಕುರಿತು ಟೆಂಡರ್‌ ಪ್ರಕ್ರಿಯೆ ಹಂತದಲ್ಲಿದೆ. ಮಳೆಗಾಲದ ಅನಂತರ ಕಾಮಗಾರಿ ಆರಂಭಗೊಳ್ಳಲಿದೆ.
– ಪ್ರಸನ್ನ ಶೇಟ್‌, ಅಭಿಯಂತ, ವಾರಾಹಿ ಯೋಜನಾ ವಿಭಾಗ.

ಉತ್ತಮ ನೀರಿನಾಶ್ರಯ
ಮೊಳಹಳ್ಳಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸುಮಾರು 10 ಎಕರೆ ವಿಸ್ತೀರ್ಣದ ಹುಂತನ ಕೆರೆಯಲ್ಲಿ ಉತ್ತಮ ನೀರಿನಾಶ್ರಯವನ್ನು ಹೊಂದಿದೆ. ಇದನ್ನು ಪುನರುಜ್ಜೀವನಗೊಳಿಸುವುದರೊಂದಿಗೆ ವಾರಾಹಿ ಕಾಲುವೆ ಯಿಂದ ಉಪ ನಾಲೆಯ ಮೂಲಕ ಹುಂತನ ಕೆರೆಗೆ ನೀರು ಹಾಯಿಸಿದಾಗ ಗ್ರಾಮದಲ್ಲಿ ಎದುರಾಗುವ ನೀರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ.

– ದಿನೇಶ್‌ ಹೆಗ್ಡೆ ಮೊಳಹಳ್ಳಿ, ಸದಸ್ಯರು, ಗ್ರಾ.ಪಂ. ಮೊಳಹಳ್ಳಿ.

ಟಾಪ್ ನ್ಯೂಸ್

Video: ಮನಮೋಹನ್ ಸಿಂಗ್ ನಿಧನ ಹೇಳುವ ಬದಲು ಮೋದಿ ನಿಧನರಾಗಿದ್ದಾರೆ ಎಂದ ನ್ಯೂಸ್ ಆ್ಯಂಕರ್

Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!

allu arjun

Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Dangerous Stunt: ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ಬಾಲಕನನ್ನು ಕೂರಿಸಿ ರೀಲ್ಸ್…

Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishwaprabha Award 2025 to Actor Naveen D. Padil

Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ

Udupi: A car fell into a huge pothole near Ambalapadi Junction

Udupi: ಅಂಬಲಪಾಡಿ ಜಂಕ್ಷನ್‌ ಬಳಿ ಬೃಹತ್‌ ಹೊಂಡಕ್ಕೆ ಬಿದ್ದ ಕಾರು

9

Udupi: ವಾಹನ ದಟ್ಟಣೆ ನಿಯಂತ್ರಣ ಕ್ರಮ ಎಷ್ಟು ಫ‌ಲಪ್ರದ?

8

Udupi: ವಾರಾಹಿ ನೀರು ನಗರಕ್ಕೆ ಇನ್ನೂ ಬಂದಿಲ್ಲ, ಅಗೆಯುವುದೂ ನಿಂತಿಲ್ಲ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Video: ಮನಮೋಹನ್ ಸಿಂಗ್ ನಿಧನ ಹೇಳುವ ಬದಲು ಮೋದಿ ನಿಧನರಾಗಿದ್ದಾರೆ ಎಂದ ನ್ಯೂಸ್ ಆ್ಯಂಕರ್

Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!

allu arjun

Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.