ಉಳ್ಳಾಲ: ನಾಳೆ ವೀರ ರಾಣಿ ಅಬ್ಬಕ್ಕ ಉತ್ಸವ
Team Udayavani, Feb 3, 2023, 6:20 AM IST
ಉಳ್ಳಾಲ: ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯ ಆಶ್ರಯದಲ್ಲಿ 2022- 23ನೇ ಸಾಲಿನ ವೀರ ರಾಣಿ ಅಬ್ಬಕ್ಕ ಉತ್ಸವ ಫೆ. 4ರಂದು ಶನಿವಾರ ಉಳ್ಳಾಲದ ಮಹಾತ್ಮಾಗಾಂಧಿ ರಂಗ ಮಂದಿರದಲ್ಲಿ ನಡೆಯಲಿದೆ ಎಂದು ಉತ್ಸವ ಸಮಿತಿ ಸ್ವಾಗತಾಧ್ಯಕ್ಷ ಕೆ. ಜಯರಾಮ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಫೆ. 4ರಂದು ಬೆಳಗ್ಗೆ 8.30ಕ್ಕೆ ತೊಕ್ಕೊಟ್ಟು ಮೇಲ್ಸೇತುವೆಯಿಂದ ವೀರರಾಣಿ ಅಬ್ಬಕ್ಕ ಉತ್ಸವ ವೇದಿಕೆಗೆ ಜಾನಪದ ದಿಬ್ಬಣ ಹೊರಡಲಿದೆ. ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ| ಸಿ. ಸೋಮಶೇಖರ್ ಮತ್ತು ಕೆಎಸ್‌ಆರ್‌ಪಿ ಕಮಾಂಡೆಂಟ್ ಬಿ.ಎಂ. ಪ್ರಸಾದ್ ದಿಬ್ಬಣ ಉದ್ಘಾಟಿಸಲಿದ್ದಾರೆ ಎಂದರು.
ಬೆಳಗ್ಗೆ 10ಕ್ಕೆ ಮಂಗಳೂರು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕಾಂತಾರ ಚಲನಚಿತ್ರ ಖ್ಯಾತಿಯ ನಟಿ ವಿದುಷಿ ಮಾನಸಿ ಸುಧೀರ್ ಸಾಂಸ್ಕೃತಿಕ ಮತ್ತು ಸಾಹಿತ್ಯ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಬ್ಯಾರಿ ಭಾಷಾ ಸಾಂಸ್ಕೃತಿಕ ಕಾರ್ಯಕ್ರಮ, ಬಹು ಬಾಷಾ ಕವಿ- ಕಾವ್ಯ-ಗಾಯನ, ಸ್ಥಳೀಯ ಪ್ರತಿಭೆಗಳ ಮತ್ತು ಅಬ್ಬಕ್ಕ ಉತ್ಸವ ಸಮಿತಿಯ ಮಹಿಳಾ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸಂಜೆ 5ಕ್ಕೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಯು.ಟಿ. ಖಾದರ್ ವಹಿಸಲಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲು, ಉಳ್ಳಾಲ ಮೋಹನ್ ಕುಮಾರ್ ಸೇರಿದಂತೆ ಅನೇಕರು ಪಾಲ್ಗೊಳ್ಳಲಿದ್ದಾರೆ ಎಂದು ವಿವರಿಸಿದರು.
ಉತ್ಸವ ಸಮಿತಿ ಅಧ್ಯಕ್ಷ ದಿನಕರ್ ಉಳ್ಳಾಲ, ಗೌರವ ಅಧ್ಯಕ್ಷ ಸದಾನಂದ ಬಂಗೇರ, ಪ್ರಧಾನ ಕಾರ್ಯದರ್ಶಿ ಧನಲಕ್ಷಿ$¾à ಗಟ್ಟಿ, ಕೋಶಾಧಿಕಾರಿ ಆನಂದ ಅಸೈಗೋಳಿ, ಉಪಾಧ್ಯಕ್ಷ ಯು.ಪಿ. ಆಲಿಯಬ್ಬ, ದೇವಕಿ ಆರ್. ಉಳ್ಳಾಲ ಪತ್ರಿಕಾಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.