ವೀರ ಸಾವರ್ಕರ್‌ ಗಾಂಧಿ ಹತ್ಯೆಯ ಸಂಚುಕೋರ: ಸಿದ್ದರಾಮಯ್ಯ

Team Udayavani, Oct 19, 2019, 3:08 AM IST

siddaramaiah

ಮಂಗಳೂರು: ಹಿಂದೂ ಮಹಾಸಭಾದ ಅಧ್ಯಕ್ಷರಾಗಿದ್ದು, ಮಹಾತ್ಮಾ ಗಾಂಧಿ ಹತ್ಯೆಗೆ ಸಂಚು ನಡೆಸಿದ ಆರೋಪ ಹೊತ್ತಿರುವ ವೀರ ಸಾವರ್ಕರ್‌ಗೆ ಭಾರತರತ್ನ ನೀಡಲು ಮೋದಿ ನೇತೃತ್ವದ ಕೇಂದ್ರ ಸರಕಾರ ಮುಂದಾಗಿದೆ. ಇದು ಪ್ರಧಾನಿಯ ಟೊಳ್ಳು ದೇಶಭಕ್ತಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ನಗರದಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಗಾಂಧಿ ಹತ್ಯೆಗೆ ಸಂಚು ರೂಪಿಸಿ ದವರಲ್ಲಿ ವೀರ ಸಾವರ್ಕರ್‌ ಓರ್ವ ಆರೋಪಿಯಾಗಿದ್ದು, ಬಳಿಕ ಸಾಕ್ಷ್ಯಾಧಾರಗಳ ಕೊರತೆಯಿಂದ ಖುಲಾಸೆಗೊಂಡರು. ಅಂಥವರಿಗೆ ಭಾರತರತ್ನ ನೀಡುವುದು ಸರಿಯಲ್ಲ ಎಂದರು.

ಬಿಜೆಪಿಗೆ ಮಂಗಳೂರು ಕೋಮುವಾದ ಪ್ರಯೋ ಗಾಲಯ: ಬಿಜೆಪಿಯ ಅಭಿವೃದ್ಧಿ ಸಾಧನೆ ಶೂನ್ಯ. ಆರೆಸ್ಸೆಸ್‌ ಮತ್ತು ಬಿಜೆಪಿಗೆ ಮಂಗಳೂರು ಕೋಮುವಾದಕ್ಕೆ ಪ್ರಯೋ ಗಾಲಯ ಇದ್ದ ಹಾಗೆ. ಬಿಜೆಪಿಯವರು ಜನರ ಮನಸ್ಸನ್ನು ಬೇರೆಡೆ ಸೆಳೆಯುವುದಕ್ಕೆ ಪ್ರತಿಯಾಗಿ ಗಂಭೀರವಾಗಿ ಆರ್ಥಿಕ, ಸಾಮಾಜಿಕ ಸಮಸ್ಯೆಗಳನ್ನು ಜನರೆ ದುರು ಇಡುವ ಕೆಲಸವನ್ನು ಕಾಂಗ್ರೆಸ್‌ ಕಾರ್ಯಕರ್ತರು ಮಾಡಬೇಕು ಎಂದು ಕರೆ ನೀಡಿದರು.

ಬಿಜೆಪಿಗೆ ಆಪರೇಷನ್‌ ಮಾಡುವುದಷ್ಟೇ ತಿಳಿದಿದೆ. ನಮ್ಮವರನ್ನು ಹಣ ಕೊಟ್ಟು ಖರೀದಿಸುತ್ತಾರೆ. ಅಷ್ಟು ಹಣ ಅವರಿಗೆ ಎಲ್ಲಿಂದ ಬರುತ್ತದೆ ಅನ್ನುವುದು ಜನರಿಗೆ ಗೊತ್ತಾಗಬೇಕು. ದೇಶದಲ್ಲಿ ಬೇರೆ ಪಕ್ಷದವರನ್ನು ಖರೀದಿಸುವುದು ಇವರ ಕೆಲಸ. ಇಲ್ಲವಾದರೆ, ಐಟಿ, ಜಾರಿ ನಿರ್ದೇಶನಾಲ ಯವನ್ನು ಬಳಸಿ ಹೆದರಿಸುತ್ತಾರೆ ಎಂದರು. ಯಡಿಯೂರಪ್ಪ ನೇತೃತ್ವದ ಸರಕಾರ ಆಡಳಿತಕ್ಕೆ ಬಂದು ಮೂರು ತಿಂಗಳಲ್ಲಿ ವರ್ಗಾವಣೆ ದಂಧೆ ಬಿಟ್ಟು ಬೇರೆ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ ಎಂದು ಆರೋಪಿಸಿದರು.

2020ರಲ್ಲಿ ಚುನಾವಣೆ: ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಹೆಚ್ಚೆಂದರೆ ಈ ವರ್ಷದ ಡಿಸೆಂಬರ್‌ ಅಥವಾ ಜನವರಿ- ಫೆಬ್ರವರಿ ತನಕ ಅಧಿಕಾರದಲ್ಲಿ ಇರಬಹುದು. 2020ರಲ್ಲಿ ವಿಧಾನಸಭಾ ಚುನಾವಣೆ ಬರುವುದು ಖಚಿತ ಎಂದು ಸಿದ್ದರಾಮಯ್ಯ ಭವಿಷ್ಯ ನುಡಿದರು.

ಓಟಿಗಾಗಿ ನೀರು: ಮಹಾರಾಷ್ಟ್ರಕ್ಕೆ ನೀರು ಬಿಡುತ್ತೇವೆ ಎಂಬುದು ಚುನಾವಣೆಗೋಸ್ಕರ ಯಡಿಯೂರಪ್ಪ ನೀಡಿದ ಹೇಳಿಕೆ. ಓಟಿಗಾಗಿ ಈ ರೀತಿ ಮಾಡುತ್ತಿದ್ದಾರೆ. ಎರಡೂ ರಾಜ್ಯಗಳ ಮಧ್ಯೆ ಮಾತುಕತೆ ಆಗದೆ ಏನೂ ಮಾಡಲು ಆಗುವುದಿಲ್ಲ ಎಂದರು.

ಬಿಜೆಪಿ ನಾಯಕರಿಂದ ವ್ಯಾಪಕ ಟೀಕೆ
ಬೆಂಗಳೂರು: ಸಾವರ್ಕರ್‌ ಅವರನ್ನು ನಾಥೂ ರಾಮ್‌ ಗೋಡ್ಸೆಗೆ ಹೋಲಿಸಿ ವಿಧಾನಸಭೆ ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ಅವರು ನೀಡಿ ರುವ ಹೇಳಿಕೆಗೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಸ್ವಾತಂತ್ರ್ಯ ವೀರ ಸಾವರ್ಕರ್‌ ಅವರ ಬಗ್ಗೆ ಕಾಂಗ್ರೆಸ್‌ ನಾಯಕರು ಮಾಡುತ್ತಿರುವ ಟೀಕೆಗಳು ಆ ಪಕ್ಷದ ಅಧ:ಪತನದ ಸಂಕೇತ. ಕಾಂಗ್ರೆಸ್‌ ನಾಯಕರ ಬೌದ್ಧಿಕ ದಿವಾಳಿತನಕ್ಕೆ ಇದಕ್ಕಿಂತ ಬೇರೆ ನಿರ್ದೇಶನ ಬೇಕಿಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ವಿಧಾನ ಪರಿ ಷತ್‌ ಸದಸ್ಯ ಎನ್‌.ರವಿಕುಮಾರ್‌ ಹೇಳಿದ್ದಾರೆ.

ಮಹಾತ್ಮ ಗಾಂಧೀಜಿಯವರ ಹತ್ಯೆಗೆ ಕಾರಣ ಯಾರು ಎನ್ನುವುದು ಗೊತ್ತಿದ್ದರೂ ಬಿಜೆಪಿ ಮತ್ತು ಸಂಘ ಪರಿವಾರವನ್ನು ದೂರುತ್ತಿದ್ದ ಕಾಂಗ್ರೆಸ್‌ ನಾಯಕರು, ಇದೀಗ ಇನ್ನೊಂದು ಹೆಜ್ಜೆ ಮುಂದೆ ಹೋಗಿದ್ದಾರೆ. ತನಿಖಾ ವರದಿಗಳಿದ್ದರೂ ಗಾಂಧೀಜಿ ಹತ್ಯೆಯಲ್ಲಿ ವೀರ ಸಾವರ್ಕರ್‌ ಅವರ ಪಾತ್ರವಿತ್ತು ಎನ್ನುವ ಮೂಲಕ ದೇಶದ ಸ್ವಾತಂತ್ರ್ಯ ಹೋರಾಟವನ್ನೇ ಕೀಳಾಗಿ ನೋಡಿರುವ ಕಾಂಗ್ರೆಸ್‌, ಸ್ವಾತಂತ್ರ್ಯ ಯೋಧರನ್ನು ಅವಮಾನಿ ಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟ್ವೀಟ್‌: ಸಿದ್ದರಾಮಯ್ಯ ಅವರ ಹೇಳಿಕೆಗೆ ಸಚಿವ ಈಶ್ವರಪ್ಪ ಟ್ವಿಟ್ಟರ್‌ನಲ್ಲಿ ಟಾಂಗ್‌ ನೀಡಿದ್ದಾರೆ. “ನಾವಾಗಿದ್ದಕ್ಕೆ ಸಾವರ್ಕರ್‌ ಅವರಿಗೆ ಭಾರತ ರತ್ನ ನೀಡಲು ಶಿಫಾರಸು ಮಾಡುತ್ತಿದ್ದೇವೆ. ಸನ್ಮಾನ್ಯ ಸಿದ್ದರಾಮಯ್ಯನವರೇ, ನೀವಾಗಿದ್ದರೆ ಜಿನ್ನಾಗೆ ಭಾರತರತ್ನ ಕೊಡಿಸಲು ಶಿಫಾರಸ್ಸು ಮಾಡು ತ್ತಿದ್ದಿರೇನೋ? ಅಲ್ವಾ’ ಎಂದು ಈಶ್ವರಪ್ಪ ಟ್ವೀಟ್‌ ಮಾಡಿ ಸಿದ್ದರಾಮಯ್ಯ ಅವರ ಕಾಲೆಳೆದಿದ್ದಾರೆ.

ನಳಿನ್‌ಗೆ ಆರ್ಥಿಕ ಪರಿಸ್ಥಿತಿಯ ಜ್ಞಾನವಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಅವರನ್ನು ಟೀಕಿಸಿದ ಸಿದ್ದರಾಮಯ್ಯ, ಅವರಿಗೆ ದೇಶದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಜ್ಞಾನವಿಲ್ಲ. ರಾಜ್ಯದಲ್ಲಿ ಎಷ್ಟು ಜಿಲ್ಲೆಗಳಿವೆ ಎಂಬುದೇ ಗೊತ್ತಿಲ್ಲ. ಯಡಿಯೂರಪ್ಪ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಮತ್ತು ಪ್ರಧಾನಿ ಮೋದಿ ಅವರಿಗೆ ಒಲ್ಲದ ಕೂಸು ಆಗಿದ್ದರೆ, ನಳಿನ್‌, ಸಂತೋಷ್‌ ಅವರು ಸ್ವಿಚ್‌ ಬಟನ್‌ ಹಾಕಿದಾಗ ನೃತ್ಯ ಮಾಡುತ್ತಾರೆ. ಇದು ರಾಜ್ಯದ ಪರಿಸ್ಥಿತಿ ಎಂದು ವ್ಯಂಗ್ಯವಾಡಿದರು.

ಸಾವರ್ಕರ್‌ ಅವರಿಗೆ ಭಾರತರತ್ನವನ್ನು ಆಮೇಲೆ ಕೊಡುವಿರಂತೆ. ಸಾಮಾಜಿಕ ಸೇವೆಗಾಗಿ ತಮ್ಮ ಬದುಕನ್ನು ತೇದು ಲಿಂಗೈಕ್ಯವಾಗಿರುವ ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಗಳಿಗೆ ಭಾರತರತ್ನ ನೀಡಿ. ಕನಿಷ್ಠ ಈ ಒಂದು ಭರವಸೆಯನ್ನಾದರೂ ಈಡೇರಿಸಿ.
-ಸಿದ್ದರಾಮಯ್ಯ, ಪ್ರತಿಪಕ್ಷದ ನಾಯಕ

ಟಾಪ್ ನ್ಯೂಸ್

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi: Kannadigas’ tax money wasted to please fake Gandhis: Jagadish Shettar

Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.